Just In
- 6 min ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 1 hr ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 2 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
- 3 hrs ago
ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ
Don't Miss!
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- News
ಹೆಲಿ ಟೂರಿಸಂ; 'ಸೇವ್ ಮೈಸೂರು' ಅಭಿಯಾನಕ್ಕೆ ಭಾರೀ ಬೆಂಬಲ
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Sports
ಚೇತನ್ ಸಕಾರಿಯಾ ಕುಟುಂಬದ ದುರಂತ ಕತೆ ಬಿಚ್ಚಿಟ್ಟ ಸೆಹ್ವಾಗ್
- Lifestyle
ಮಂಗಳವಾರದ ದಿನ ಭವಿಷ್ಯ: ಯುಗಾದಿಯಂದು ಹೇಗಿದೆ ನಿಮ್ಮ ರಾಶಿಫಲ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಧಿಕೃತ ಸರ್ವಿಸ್ ಸೆಂಟರ್‌ಗಳ ಮೂಲಕ ಸೆರಾಮಿಕ್ ಕೋಟಿಂಗ್ ಆರಂಭಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಅಂದವನ್ನು ಧೀರ್ಘ ಕಾಲದವರೆಗೆ ಕಾಯ್ದುಕೊಳ್ಳಲು ಸೆರಾಮಿಕ್ ಕೋಟಿಂಗ್ ಸೌಲಭ್ಯವನ್ನು ಬ್ರಾಂಡ್ ನ್ಯೂ ಸಫಾರಿ ಕಾರು ಮಾದರಿಗಾಗಿ ಬಿಡುಗಡೆ ಮಾಡಿದ್ದು, ಆಟೋ ಉದ್ಯಮದಲ್ಲೇ ಮೊದಲ ಬಾರಿಗೆ ಕಾರು ಕಂಪನಿಯೊಂದು ಅಧಿಕೃತವಾಗಿ ಸೆರಾಮಿಕ್ ಕೋಟಿಂಗ್ ಆರಂಭಿಸಿರುವುದು ಇದೇ ಮೊದಲು.

ಗ್ರಾಹಕರ ಬೇಡಿಕೆಯೆಂತೆ ಸೆರಾಮಿಕ್ ಕೋಟಿಂಗ್ ಸೇವೆಗಳನ್ನು ಕಾರ್ ಮಾಡಿಫೈ ಕಂಪನಿಗಳು ಹೆಚ್ಚಾಗಿ ಇಂತಹ ಸೇವೆಗಳನ್ನು ಒದಗಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯೇ ಇದೀಗ ಹೊಸ ಸಫಾರಿ ಕಾರು ಮಾದರಿಗಾಗಿ ಸೆರಾಮಿಕ್ ಕೋಟಿಂಗ್ ಪ್ಯಾಕೇಜ್ ಬಿಡುಗಡೆ ಮಾಡಿದೆ. ಸೆರಾಮಿಕ್ ಪ್ಯಾಕೇಜ್‌ಗಾಗಿ ಟಾಟಾ ಮೋಟಾರ್ಸ್ ಕಂಪನಿಯು ರೂ.28,500 ನಿಗದಿ ಮಾಡಿದ್ದು, ಧೂಳು, ರಸಾಯನಿಕ ವಸ್ತುಗಳಿಂದಾಗುವ ಹಾನಿ ಮತ್ತು ತುಕ್ಕು ನಿರೋಧಕವಾಗಿ ಕಾರ್ಯನಿರ್ವಹಿಸಲು ಸೆರಾಮಿಕ್ ಕೋಟಿಂಗ್ ಸಾಕಷ್ಟು ಸಹಕಾರಿಯಾಗಿದೆ.

ಕಾರ್ ಕೇರ್ ತಂತ್ರಜ್ಞಾನಗಳಲ್ಲಿ ವಿಶ್ವ ದರ್ಜೆಯ ಕಂಪನಿಗಳೊಂದಿಗೆ ಸಹಯೋಗ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹೊಸ ಸೆರಾಮಿಕ್ ಕೋಟಿಂಗ್ ಸೇವೆಗಳನ್ನು ಆರಂಭಿಸಿದ್ದು, ಈ ಮೌಲ್ಯವರ್ಧಿತ ಸೇವೆಯು ವಾಹನ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಹೊಸ ಕಾರಿನಲ್ಲಿರುವ ಗಾಜಿನ ಬಿಡಿಭಾಗಗಳು, ಬಣ್ಣ, ರಿಮ್ಸ್ / ಚಕ್ರಗಳು, ವಿನೈಲ್-ಪ್ಲಾಸ್ಟಿಕ್ ಮತ್ತು ಲೆದರ್ ವಸ್ತುಗಳಿಗೆ 360 ಡಿಗ್ರಿ ರಕ್ಷಣೆ ನೀಡಲು ಸೆರಾಮಿಕ್ ಕೋಟಿಂಗ್ ಸೌಲಭ್ಯವು ಉತ್ತಮವಾಗಿದ್ದು, ಸೆರಾಮಿಕ್ ಕೋಟಿಂಗ್ ಇದ್ದಲ್ಲಿ ನೀರು ಮತ್ತು ಧೂಳಿನ ಕಣಗಳನ್ನು ತುಕ್ಕು ಹಿಡಿಯಲು ಬಿಡುವುದಿಲ್ಲ.

ಹೀಗಾಗಿ ಹೊಸ ಕಾರನ್ನು ಧೀರ್ಘ ಕಾಲವರೆಗೆ ಹೊಸತರಂತೆ ಕಾಯ್ದುಕೊಳ್ಳಲು ಸಾಧ್ಯವಾಗಲಿದ್ದು, ಎಂಜಿನ್ ಪರ್ಫಾಮೆನ್ಸ್‌ಗೆ ಪೂರಕವಾಗಿ ಕಾರಿನ ಅಂದವನ್ನು ಕಾಯ್ದುಕೊಂಡಿದ್ದರೆ ಅದರ ಮರುಮಾರಾಟ ಮೌಲ್ಯವು ಕೂಡಾ ಹೆಚ್ಚಿರುತ್ತದೆ. ಇದಕ್ಕಾಗಿಯೇ ಗ್ರಾಹಕರ ಬೇಡಿಕೆಯೆಂತೆ ಟಾಟಾ ಮೋಟಾರ್ಸ್ ಕಂಪನಿಯೇ ಹೊಸ ಸೆರಾಮಿಕ್ ಕೋಟಿಂಗ್ ಆರಂಭಿಸಿದ್ದು, ಟಾಟಾ ಅಧೀನದಲ್ಲಿರುವ ಎಲ್ಲಾ ಅಧಿಕೃತ ಸರ್ವಿಸ್ ಸೆಂಟರ್‌ಗಳಲ್ಲೂ ಈ ಸೌಲಭ್ಯ ಲಭ್ಯವಿರುತ್ತದೆ.

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಸಫಾರಿ ಕಾರು ಮಾದರಿಗಾಗಿ ಮಾತ್ರ ಹೊಸ ಸೇವೆಯನ್ನು ಆರಂಭಿಸಿದ್ದು, ಶೀಘ್ರದಲ್ಲೇ ಇತರೆ ಪ್ರೀಮಿಯಂ ಕಾರು ಮಾದರಿಗಳು ಹೊಸ ಸರ್ವಿಸ್ ಸೇವೆಯನ್ನು ಆರಂಭಿಸುವ ಸಿದ್ದತೆಯಲ್ಲಿದೆ.

ಇನ್ನು ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನ್ಯೂ ಜನರೇಷನ್ ಮಾದರಿಯು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಸಫಾರಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ.

ಹೊಸ ಕಾರು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದ್ದು, ಒಮೆಗಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಹೊಸ ಸಫಾರಿ ಕಾರು ಐಷಾರಾಮಿ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮಧ್ಯಮ ಗಾತ್ರದ ಎಸ್‌ಯುವಿ ಕಾರಿನಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.