ಪ್ರೇಮಿಗಳ ದಿನಕ್ಕಾಗಿ ತುಂಟತನದ ಜಾಹೀರಾತು ಬಿಡುಗಡೆಗೊಳಿಸಿದ ಟಾಟಾ ಮೋಟಾರ್ಸ್
ಕಾರುಗಳಿಗಾಗಿ ವಿಶಿಷ್ಟವಾದ, ಆಸಕ್ತಿದಾಯಕವಾದ ಜಾಹೀರಾತುಗಳನ್ನು ತಯಾರಿಸುವಲ್ಲಿ ಟಾಟಾ ಮೋಟಾರ್ಸ್ ಸದಾ ಮುಂದಿದೆ. ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಟಾಟಾ ಮೋಟಾರ್ಸ್ ತನ್ನ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಗಾಗಿ ತುಂಟತನದಿಂದ ಕೂಡಿರುವ ಜಾಹೀರಾತೊಂದನ್ನು ಬಿಡುಗಡೆಗೊಳಿಸಿದೆ.

ನೆಕ್ಸಾನ್, ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಕಾಂಪ್ಯಾಕ್ಟ್ ಎಸ್‌ಯುವಿ. ನೆಕ್ಸಾನ್ ಎಸ್‌ಯುವಿಯನ್ನು ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಗೊಳಿಸಲಾಯಿತು. ಸ್ಪರ್ಧಾತ್ಮಕ ಬೆಲೆಯನ್ನು ಹೊಂದಿದ್ದ ಕಾರಣಕ್ಕೆ ಟಾಟಾ ನೆಕ್ಸಾನ್ ಅಲ್ಪ ಅವಧಿಯಲ್ಲಿಯೇ ಹೆಚ್ಚು ಬೇಡಿಕೆಯನ್ನು ಪಡೆಯಿತು.

ಮಾರಾಟವನ್ನು ಹೆಚ್ಚಿಸಲು ಟಾಟಾ ಮೋಟಾರ್ಸ್, ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ನಿರಂತರವಾಗಿ ಅಪ್ ಡೇಟ್ ಮಾಡುತ್ತಿದೆ. ಟಾಟಾ ಮೋಟಾರ್ಸ್ ಕಳೆದ ವರ್ಷ ನೆಕ್ಸಾನ್ ಎಸ್‌ಯುವಿಯ ಫೇಸ್‌ಲಿಫ್ಟ್ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ವರ್ಷದ ಜನವರಿ ತಿಂಗಳಿನಲ್ಲಿ ಟಾಟಾ ನೆಕ್ಸಾನ್ ಎಸ್‌ಯುವಿಯ 8,000ಕ್ಕೂ ಹೆಚ್ಚು ಯುನಿಟ್'ಗಳು ಮಾರಾಟವಾಗಿವೆ. ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯ ಮಾರಾಟವು ಮುಂಬರುವ ದಿನಗಳಲ್ಲಿಯೂ ಇದೇ ರೀತಿಯಲ್ಲಿ ಮುಂದುವರಿಯುವ ನಿರೀಕ್ಷೆಗಳಿವೆ.

ಗ್ಲೋಬಲ್ ಎನ್‌ಸಿಎಪಿ ಕ್ರಾಶ್ ಟೆಸ್ಟ್'ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದಿರುವುದೇ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯ ಮಾರಾಟವು ಹೆಚ್ಚಾಗುವುದಕ್ಕೆ ಪ್ರಮುಖ ಕಾರಣವಾಗಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಟಾಟಾ ನೆಕ್ಸಾನ್ ಗ್ಲೋಬಲ್ ಎನ್‌ಸಿಎಪಿ ಕ್ರಾಶ್ ಟೆಸ್ಟ್'ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ಮೊದಲ ಮೇಡ್ ಇನ್ ಇಂಡಿಯಾ ಕಾರು ಎಂಬುದು ವಿಶೇಷ.

ಇದರ ನಂತರ ಟಾಟಾ ಮೋಟಾರ್ಸ್ ಕಂಪನಿಯ ಆಲ್ಟ್ರೋಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಹಾಗೂ ಮಹೀಂದ್ರಾ ಕಂಪನಿಯ ಎಕ್ಸ್‌ಯುವಿ 300 ಕಾಂಪ್ಯಾಕ್ಟ್ ಎಸ್‌ಯುವಿಗಳು ಗ್ಲೋಬಲ್ ಎನ್‌ಸಿಎಪಿ ಕ್ರಾಶ್ ಟೆಸ್ಟ್'ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದಿವೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಸದ್ಯಕ್ಕೆ ಈ ಮೂರು ಮೇಡ್ ಇನ್ ಇಂಡಿಯಾ ಕಾರುಗಳು ಮಾತ್ರ ಗ್ಲೋಬಲ್ ಎನ್‌ಸಿಎಪಿ ಕ್ರಾಶ್ ಟೆಸ್ಟ್'ನಲ್ಲಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದಿವೆ.
ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಲೆಕ್ಟ್ರಿಕ್ ಆವೃತ್ತಿಯನ್ನು ಸಹ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು 2020ರ ಜನವರಿ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಎಲೆಕ್ಟ್ರಿಕ್ ಕಾರುಗಳಲ್ಲಿ ಒಂದಾಗಿದೆ. ಸ್ಪರ್ಧಾತ್ಮಕ ಬೆಲೆ ಹಾಗೂ ಪೂರ್ತಿಯಾಗಿ ಚಾರ್ಜ್ ಆದ ನಂತರ ಹೆಚ್ಚು ದೂರ ಸಾಗುವ ಕಾರಣಕ್ಕೆ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ.


Click it and Unblock the Notifications