ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳ ಮಾರಾಟದಲ್ಲಿ ಪ್ರತಿ ಎರಡು ತಿಂಗಳಿಗೆ ಬಾರಿ ಪ್ರಮಮುಖ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಹೊಸದಾಗಿ ಎಕ್ಸ್‌ಟಿಎ ಆಟೋಮ್ಯಾಟಿಕ್ ಮಾದರಿಯನ್ನು ಬಿಡುಗಡೆ ಮಾಡಿದೆ.

ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಕಳೆದ ತಿಂಗಳು ಟಿಯಾಗೋ ಕಾರು ಮಾದರಿಯ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಕಾರಿನಲ್ಲಿ ಎಂಟ್ರಿ ಲೆವಲ್ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸಿದ್ದು, ಹೊಸ ಆಟೋಮ್ಯಾಟಿಕ್ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.99 ಲಕ್ಷ ಬೆಲೆ ಪಡೆದುಕೊಂಡಿದೆ. ಎಕ್ಸ್‌ಟಿಎ ಆಟೋಮ್ಯಾಟಿಕ್ ಆವೃತ್ತಿಯು ಟಿಯಾಗೋ ಕಾರಿನ ಮಧ್ಯಮ ಕ್ರಮಾಂಕದ ಆವೃತ್ತಿಯಾಗಿ ಮಾರಾಟವಾಗಲಿದ್ದು, ಎಎಂಟಿ ಆಟೋಮ್ಯಾಟಿಕ್ ಸೌಲಭ್ಯದ ಹೊರತಾಗಿ ಹೊಸ ಕಾರಿನಲ್ಲಿ ಯಾವುದೇ ಹೆಚ್ಚುವರಿ ಫೀಚರ್ಸ್ ನೀಡಲಾಗಿಲ್ಲ.

ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಸ ಆಟೋಮ್ಯಾಟಿಕ್ ಆವೃತ್ತಿಯು ಎಕ್ಸ್‌ಟಿ ಮ್ಯಾನುವಲ್ ಮಾದರಿಯನ್ನು ಆಧರಿಸಿ ಎಎಂಟಿ ಸೌಲಭ್ಯವನ್ನು ನೀಡಲಾಗಿದ್ದು, ಮ್ಯಾನುವಲ್ ಮಾದರಿಗಿಂತಲೂ ಆಟೋಮ್ಯಾಟಿಕ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಹೊಸ ಮಾದರಿಯನ್ನು ಬಿಡುಗಡೆ ಮಾಡಲಾಗಿದೆ.

ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಎಕ್ಸ್‌ಟಿಎ ಮಾದರಿಯೊಂದಿಗೆ ನಾಲ್ಕು ವೆರಿಯೆಂಟ್‌ಗಳು ಟಿಯಾಗೋ ಮಾದರಿಯಲ್ಲಿ ಆಟೋಮ್ಯಾಟಿಕ್ ಆಯ್ಕೆ ಪಡೆದುಕೊಂಡಿದ್ದು, ಇನ್ನುಳಿದ ವೆರಿಯೆಂಟ್‌ಗಳು ಮ್ಯಾನುವಲ್ ಮಾದರಿಯಲ್ಲಿ ಖರೀದಿಗೆ ಲಭ್ಯವಿವೆ.

ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸದಾಗಿ ಪರಿಚಯಿಸಿರುವ ಎಕ್ಸ್‌ಟಿಎ ಆಟೋಮ್ಯಾಟಿಕ್ ಮಾದರಿಯಲ್ಲಿ ಎಕ್ಸ್‌ಟಿ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಫೀಚರ್ಸ್‌ಗಳ ಜೊತೆಗೆ 15 ಇಂಚಿನ ಅಲಾಯ್ ವೀಲ್ಹ್, 7 ಇಂಚಿನ ಇನ್ಪೋಟೈನ್‌ಮೆಂಟ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಮತ್ತು ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿದೆ.

ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಇನ್ನು ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಎಕ್ಸ್ಇ, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮಾದರಿಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.86 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.85 ಲಕ್ಷ ಬೆಲೆ ಹೊಂದಿದೆ.

ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಿಯಾಗೋ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ಲಭ್ಯವಿದ್ದು, ಪೆಟ್ರೋಲ್ ಮಾದರಿಯಲ್ಲಿಯೇ ಗ್ರಾಹಕರು ತಮ್ಮ ಬೇಡಿಕೆಯೆಂತೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಸ ಆವೃತ್ತಿಯ ಮೂಲಕ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸೆಳೆಯಲು ಮುಂದಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಸ್ಯಾಂಟ್ರೋ, ಮಾರುತಿ ಸುಜುಕಿ ಸೆಲೆರಿಯೊ ಮತ್ತು ವ್ಯಾಗನ್ಆರ್ ಜೊತೆಗೆ ದಟ್ಸನ್ ಗೊ ಕಾರುಗಳಿಗೆ ಇದು ಮತ್ತಷ್ಟು ಪೈಪೋಟಿ ನೀಡಲಿದೆ.

ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಎಕ್ಸ್‌ಟಿಎ ಎಎಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹಾಗೆಯೇ ಹೊಸ ಕಾರು ಎಂಟ್ರಿ ಲೆವೆಲ್ ಮಾದರಿಗಳಲ್ಲೇ ಅತಿಹೆಚ್ಚು ಸುರಕ್ಷಾ ಫೀಚರ್ಸ್‌ಗಳೊಂದಿಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ಗೆ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಗ್ರಾಹಕರ ಆಕರ್ಷಣೆ ಕಾರಣವಾಗಿದ್ದು, ಕಳೆದ ಕೆಲ ತಿಂಗಳಿನಿಂದ ಹೊಸ ಕಾರಿಗೆ ಭಾರೀ ಬೇಡಿಕೆ ಹರಿದುಬರುತ್ತಿರುವುದೇ ಪ್ರಮುಖ ಬದಲಾವಣೆಗಳಿಗೆ ಪ್ರಮುಖ ಕಾರಣವಾಗಿದೆ.

Most Read Articles

Kannada
English summary
Tata Motors launches the Tiago XTA. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X