ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್
ಕೋವಿಡ್ ಎರಡನೇ ಅಲೆಯ ಪರಿಣಾಮ ತಗ್ಗಿರುವ ಹೊಸ ವಾಹನಗಳ ಖರೀದಿಯ್ನು ಸುಧಾರಿಸಲು ಮುಂದಾಗಿರುವ ವಿವಿಧ ಆಟೋ ಉತ್ಪಾದನಾ ಕಂಪನಿಗಳು ವಿವಿಧ ಆಫರ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಕೂಡಾ ಮೇ ಅವಧಿಗಾಗಿ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.

ಕಾರು ಮಾರಾಟ ಸುಧಾರಣೆಗಾಗಿ ಹೊಸ ವರ್ಷದ ಆರಂಭದಲ್ಲಿ ಹಲವಾರು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಕೋವಿಡ್ ಎರಡನೇ ಅಲೆಯಿಂದಾಗಿ ಮತ್ತೆ ಹೊಸ ವಾಹನ ಮಾರಾಟ ಸಾಕಷ್ಟು ಇಳಿಕೆಯಾಗಿದೆ. ಹೀಗಾಗಿ ಟಾಟಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಟಿಯಾಗೊ, ಟಿಗೋರ್, ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಆಫರ್ ನೀಡುತ್ತಿದ್ದು, ಈ ತಿಂಗಳಾಂತ್ಯವರೆಗೂ ಹೊಸ ಆಫರ್‌ಗಳು ಲಭ್ಯವಿರಲಿವೆ.

ಟಾಟಾ ಮೋಟಾರ್ಸ್ ಕಂಪನಿಯು ಘೋಷಣೆ ಮಾಡಿರುವ ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ. 15 ಸಾವಿರದಿಂದ ಗರಿಷ್ಠ ರೂ. 65 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೆ ರೂ. 25 ಸಾವಿರ ಆಫರ್ ಘೋಷಿಸಲಾಗಿದ್ದು, ರೂ.25 ಸಾವಿರದಲ್ಲಿ ರೂ. 15 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 10 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಟಿಗೋರ್ ಕಾರು ಖರೀದಿಯ ಮೇಲೆ ಗ್ರಾಹಕರು ರೂ.30 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ. ರೂ.30 ಸಾವಿರದಲ್ಲಿ ರೂ. 15 ಸಾವಿರ ಕ್ಯಾಶ್‌ಬ್ಯಾಕ್ ಮತ್ತು ರೂ.15 ಸಾವಿರ ಡಿಸ್ಕೌಂಟ್ ಒಳಗೊಂಡಿದ್ದು, ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿವೆ.

ಟಿಗೋರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.95 ಲಕ್ಷ ಬೆಲೆ ಹೊಂದಿದ್ದರೆ ಟಿಯಾಗೋ ಕಾರು ಮಾದರಿಯು ಆರಂಭಿಕವಾಗಿ ರೂ. 5.59 ಲಕ್ಷದಿಂದ ರೂ. 7.73 ಲಕ್ಷ ಬೆಲೆ ಹೊಂದಿದೆ.

ಇನ್ನು ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಮಾತ್ರ ನೀಡುತ್ತಿದೆ. ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.95 ಲಕ್ಷ ಬೆಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿದೆ.

ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ಟಾಟಾ ಕಂಪನಿಯು ರೂ. 65 ಸಾವಿರ ಆಫರ್ ನೀಡುತ್ತಿದ್ದು, ರೂ.65 ಸಾವಿರದಲ್ಲಿ ರೂ. 25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಹೊಸ ಆಫರ್‌ಗಳು ಹ್ಯಾರಿಯರ್ ಸ್ಟ್ಯಾಂಡರ್ಡ್ ಮಾದರಿಗಳ ಮೇಲೆ ಮಾತ್ರ ಅನ್ವಯವಾಗಲಿದ್ದು, ಬ್ಲ್ಯಾಕ್ ಎಡಿಷನ್ ಮತ್ತು ಕ್ಯಾಮೋ ಎಡಿಷನ್ ಮೇಲೆ ಕೇವಲ ಎಕ್ಸ್‌ಚೆಂಜ್ ಬೋನಸ್ ಮಾತ್ರ ಅನ್ವಯವಾಗಲಿದೆ.

ಹ್ಯಾರಿಯರ್ ಕಾರು ಮಾದರಿಯು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20.81 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಖರೀದಿ ಮೇಲೆ ಗ್ರಾಹಕರಿಗೆ ಅತ್ಯುತ್ತಮ ಆಫರ್ ನೀಡಲಾಗುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಖರೀದಿಯ ಮೇಲೆ ರೂ. 10 ಸಾವಿರ ಕ್ಯಾಶ್‌ಬ್ಯಾಕ್ ಮತ್ತು ರೂ. 15 ಸಾವಿರ ಎಕ್ಸ್‌ಚೆಂಜ್ ಬೋನಸ್ ಒಳಗೊಂಡು ರೂ.25 ಸಾವಿರದಷ್ಟು ಆಫರ್ ಲಭ್ಯವಿದ್ದು, ಆಲ್‌ಟ್ರೊಜ್ ಮತ್ತು ಸಫಾರಿ ಎಸ್‌ಯುವಿ ಮಾದರಿಯ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲ.


Click it and Unblock the Notifications








