ಮಿನಿ ಎಸ್‌ಯುವಿಯೊಂದಿಗೆ ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಎಸ್‌ಯುವಿ ವಿಭಾಗದಲ್ಲಿ ವಿವಿಧ ಕಾರು ಮಾದರಿಗಳೊಂದಿಗೆ ಭಾರೀ ಮುನ್ನಡೆ ಸಾಧಿಸುತ್ತಿದ್ದು, ನೆಕ್ಸಾನ್, ಹ್ಯಾರಿಯರ್, ಸಫಾರಿ ನಂತರ ಇದೀಗ ಮೈಕ್ರೊ ಎಸ್‌ಯುವಿ ಕಾರು ಮಾದರಿಯನ್ನು ಸಹ ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನಿನ್ನಯಷ್ಟೇ ಬಿಡುಗಡೆ ಮಾಡಲಾದ ನ್ಯೂ ಜನರೇಷನ್ ಸಫಾರಿ ಮಾದರಿಯೊಂದಿಗೆ ಪ್ರೀಮಿಯಂ ಎಸ್‌ಯುವಿ ವಿಭಾಗದಲ್ಲಿ ಗ್ರಾಹಕರನ್ನು ಸೆಳೆಯಲು ಸಿದ್ದವಾಗಿದೆ. ಸಫಾರಿ ನಂತರ ಮೈಕ್ರೊ ಎಸ್‍ಯುವಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದ ಟಾಟಾ ಕಂಪನಿಯು ಯೋಜನೆಯೆಂತೆ ಮುಂದಿನ ಹೊಸ ಕಾರು ಮಾದರಿಯಾಗಿ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾದ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಸಹ ಶೀಘ್ರದಲ್ಲೇ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಭಾರತೀಯ ಮಾರುಕಟ್ಟೆಯಲ್ಲಿ ಎಸ್‌ಯುವಿ ಸರಣಿ ಮಾದರಿಗಳ ಮಾರಾಟವನ್ನು ಗಟ್ಟಿಗೊಳಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮೈಕ್ರೊ ಎಸ್‌ಯುವಿ ವರ್ಷಾಂತ್ಯದೊಳಗೆ ಭಾರತದಲ್ಲಿ ಒಟ್ಟು ಕಾರು ಮಾರಾಟದಲ್ಲಿ ಶೇ.10 ಪಾಲನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಆವೃತ್ತಿಯನ್ನು ಮುಂಬರುವ ಕೆಲವೇ ದಿನಗಳಲ್ಲಿ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗಿದ್ದು, ಹೊಸ ಕಾರು ಮಾರುತಿ ಎಸ್ ಪ್ರೆಸ್ಸೊ ಮತ್ತು ಹ್ಯುಂಡೈ ಸ್ಯಾಂಟ್ರೊ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳ ಉನ್ನತೀಕರಣದ ಜೊತೆಗೆ ಬಿಡುಗಡೆಯಾಗಲಿರುವ ಹೊಸ ವಾಹನಗಳ ಅಭಿವೃದ್ದಿ ಮೇಲೂ ಗಮನಹರಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಬಹುನೀರಿಕ್ಷಿತ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ನಂತರ ಹ್ಯಾರಿಯರ್‌ನಲ್ಲಿ ಪೆಟ್ರೋಲ್ ಮಾದರಿಯ ಬಿಡುಗಡೆಗೂ ಸಜ್ಜಾಗುತ್ತಿದೆ.

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಎಂಟ್ರಿ ಲೆವಲ್‌ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಮಾದರಿಯು ಕಾನ್ಸೆಪ್ಟ್ ಮಾದರಿಯಲ್ಲೇ ಆಕರ್ಷಕ ವಿನ್ಯಾಸದೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌, ಆಕರ್ಷಕ ಫ್ರಂಟ್ ಫಾಸಿಯಾ, ಡಿ ಕಟ್ ಸ್ಟೀರಿಂಗ್ ಸೌಲಭ್ಯ ಹೊಂದಿದೆ.

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಹೊಸ ಕಾರಿನಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ. ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯೊಂದಿಗೆ ಅಧಿಕೃತ ಹೆಸರನ್ನು ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್‌ಯುವಿ ಭರ್ಜರಿ ಪೈಪೋಟಿ ನೀಡಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಕಾರು ಮಾರಾಟದಲ್ಲಿ ಹೊಸ ಗುರಿ ತಲುಪಲು ಮುಂದಾದ ಟಾಟಾ ಮೋಟಾರ್ಸ್

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Article Published On: Tuesday, February 23, 2021, 11:03 [IST]
English summary
Tata Motors planning to increase market share to 10% with the all new mini SUV model in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+