ಹೊಸ Punch ಕಾರು ಮಾದರಿಗಾಗಿ ಟರ್ಬೊ ವರ್ಷನ್ ಬಿಡುಗಡೆ ಮಾಡಲಿದೆ Tata Motors
ಟಾಟಾ ಮೋಟಾರ್ಸ್(Tata Motors) ಕಂಪನಿಯು ಹೊಸ ಪಂಚ್(Punch) ಮೈಕ್ರೊ ಎಸ್‌ಯುವಿ ಬಿಡುಗಡೆ ಮೂಲಕ ಮೈಕ್ರೊ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರಿನಲ್ಲಿ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಟರ್ಬೊ ಮಾದರಿಯನ್ನು ಸಹ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹೊಸ ಪಂಚ್ ಕಾರು ಮಾದರಿಯಲ್ಲಿ ಸದ್ಯ 1.2-ಲೀಟರ್ ರಿವೊಟ್ರಾನ್ ನ್ಯಾಚುರಲಿ ಆಸ್ಪೆರೆಟೆಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ. ಆದರೆ ಕಂಪನಿಯು ಬಿಡುಗಡೆ ಮಾಡಲು ಯೋಜಿಸಿರುವ 1.2-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 110 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಹೊಸ ಕಾರು 2022ರ ಆರಂಭದಲ್ಲಿ ಬಿಡುಗಡೆಯಾಗಬಹುದಾಗಿದೆ.

1.2 ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯು ಈಗಾಗಲೇ ಆಲ್‌ಟ್ರೊಜ್ ಖರೀದಿಗೆ ಲಭ್ಯವಿದ್ದು, ಅದೇ ಎಂಜಿನ್ ಆಯ್ಕೆ ಇದೀಗ ಹೊಸ ಪಂಚ್ ಮಾದರಿಯಲ್ಲೂ ನೀಡಲಾಗುತ್ತಿದೆ. ಆದರೆ ಟರ್ಬೊ ಮಾದರಿಯು ಸದ್ಯಕ್ಕೆ ಮ್ಯಾನುವಲ್ ಆವೃತ್ತಿಯಲ್ಲಿರುವುದರಿಂದ ಶೀಘ್ರದಲ್ಲೇ ಆಲ್‌ಟ್ರೊಜ್ ಟರ್ಬೊ ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ.

ಆಲ್‌ಟ್ರೊಜ್ ಟರ್ಬೊ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆಯ ನಂತರವಷ್ಟೇ ಹೊಸ ಎಂಜಿನ್ ಮಾದರಿಯು ಪಂಚ್ ಟರ್ಬೊ ಮಾದರಿಯಲ್ಲೂ ಹೊಸ ಆವೃತ್ತಿಯು ಬಿಡುಗಡೆ ಸಾಧ್ಯತೆಗಳಿದ್ದು, ಹೊಸ ಕಾರು ಎಂಟ್ರಿ ಲೆವಲ್ ಪರ್ಫಾಮೆನ್ಸ್ ಪ್ರಿಯರ ಹೊಸ ಆಕರ್ಷಣೆಯಾಗಲಿದೆ.

ಸದ್ಯ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಆರಂಭಿಕ ಕಾರು ಮಾದರಿಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದೆ.

ಹೊಸ ಕಾರು ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮೈಕ್ರೊ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ.

3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಪ್ರತಿ ಮಾದರಿಯಲ್ಲೂ ಅತ್ಯುತ್ತಮ ಫೀಚರ್ಸ್ ಹೊಂದಿದ್ದು, ಸುರಕ್ಷತೆಯಲ್ಲಿ ಹೊಸ ಕಾರು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಹೊಸ ಕಾರಿನ ಪ್ರತಿ ಮಾದರಿಯಲ್ಲೂ ಟಾಟಾ ಕಂಪನಿಯು ಅತ್ಯುತ್ತಮ ಫೀಚರ್ಸ್ ನೀಡಿದ್ದು, ಆರಂಭಿಕ ಮಾದರಿಯಾದ ಪ್ಯೂರ್ ಮಾದರಿಯಲ್ಲಿ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಸ್ಯಾವಿ ಕಂಟ್ರೋಲ್, ಆರ್‌ಪಿಎಎಸ್, ಸೆಂಟ್ರೇಲ್ ಲಾಕಿಂಗ್ ಜೊತೆ ಕೀ, ಐಎಸಿ ಮತ್ತು ಇಎಸ್ಎಸ್ ಟೆಕ್ನಾಲಜಿ, ಫ್ರಂಟ್ ಪವರ್ ವಿಂಡೋ, ಟಿಲ್ಟ್ ಸ್ಟೀರಿಂಗ್, 90 ಡಿಗ್ರಿ ಡೋರ್ ಓಪನ್, ರಿಯರ್ ಪ್ಲ್ಯಾಟ್ ಫ್ಲೊರ್, ಬ್ಲ್ಯಾಕ್ ಒಡಿಹೆಚ್, ಹ್ಯುಮಿನಿಟಿ ಕ್ರೊಮ್ ಲೈನ್, ಪೆಟೆಂಡ್ ಬಂಪರ್, ಡೋರ್, ವೀಲ್ಹ್ ಆರ್ಚ್, ಸಿಲ್ ಕ್ಲಾಡಿಂಗ್ ಜೋಡಣೆ ಮಾಡಿದೆ.

ಅಡ್ವೆಂಚರ್ ಮಾದರಿಯಲ್ಲಿ 4 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, 4 ಸ್ಪೀಕರ್ಸ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಯುಎಸ್‌ಬಿ ಚಾರ್ಜಿಂಗ್ ಫೋರ್ಟ್, ಎಲೆಕ್ಟ್ರಿಕ್ ಮೂಲಕ ಹೊಂದಾಣಿಕೆ ಮಾಡಿಕೊಳ್ಳಬಹುದಾದ ರಿಯರ್ ವ್ಯೂ ಮಿರರ್, ಆಲ್ ಪವರ್ ವಿಂಡೋ, ಫಾಲೋ ಮಿ ಹೋಂ ಹೆಡ್‌ಲ್ಯಾಂಪ್, ಆಂಟಿ ಗ್ಲೆರ್ ಐಆರ್‌ಎಂವಿ, ಸೆಂಟ್ರಲ್ ರಿಮೋಟ್ ಲಾಕಿಂಗ್ ಜೊತೆ ಫ್ಲಿಪ್ ಕೀ, ಫುಲ್ ವ್ಹೀಲ್ ಕವರ್ ಮತ್ತು ಬಾಡಿ ಕಲರ್ ರಿಯರ್ ವ್ಯೂ ಮಿರರ್ ನೀಡಲಾಗಿದೆ.

ಅಕಾಂಪ್ಲಿಶೆಡ್ ಆವೃತ್ತಿಯಲ್ಲಿ ಹೊಂದಾಣಿಕೆ ಮಾಡಬಹುದಾದ 7 ಇಂಚಿನ ಹರ್ಮನ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ, 4 ಸ್ಪೀಕರ್ಸ್ ಮತ್ತು 2 ಟ್ವಿಟರ್, ರಿಯರ್ ವ್ಯೂ ಕ್ಯಾಮೆರಾ, ಎಲ್ಇಡಿ ಟೈಲ್ ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್, ಆರ್15 ಹೈಪರ್ ಸ್ಟೈಲ್ ವ್ಹೀಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಒನ್ ಟಚ್ ಡೋರ್ ವಿಂಡೋ ಡೌನ್, ಕ್ರೂಸ್ ಕಂಟ್ರೋಲ್, ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಮತ್ತು ಸಿಟಿವಿ ಮಾದರಿಯಾಗಿ ಟ್ರಾಕ್ಷನ್ ಕಂಟ್ರೋಲ್ ಸೌಲಭ್ಯವಿದೆ.

ಹೈ ಎಂಡ್ ಮಾದರಿಯಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಆರ್16 ಡೈಮಂಡ್ ಕಟ್ ಅಲಾಯ್ ವ್ಹೀಲ್, ರೂಫ್ ರೈಲ್ಸ್, 7 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಹೆಡ್‌ಲ್ಯಾಂಪ್, ರೈನ್ ಸೆನ್ಸಿಂಗ್ ವೈಪರ್, ಆಟೋ ಫೋಡ್ಲಿಂಗ್ ರಿಯರ್ ವ್ಯೂ ಮಿರರ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್ ಸಿಸ್ಟಂ, ಕೂಲ್ಡ್ ಗ್ಲೊ ಬಾಕ್ಸ್, ರಿಯರ್ ವೈಪರ್ ಪ್ಲಸ್ ವಾಷ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ಹಿಂಬದಿಯ ಆಸನದಲ್ಲಿ ಆರ್ಮ್ ರೆಸ್ಟ್ ಮತ್ತು ಲೆದರ್ ಕೊಟಿಂಗ್ ಹೊಂದಿರುವ ಸ್ಟೀರಿಂಗ್ ಮತ್ತು ಗೇರ್ ನಾಬ್ ನೀಡಲಾಗಿದೆ.

ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌ನಲ್ಲೂ ಅತ್ಯುತ್ತಮ ಡಿಸೈನ್ ಹೊಂದಿದ್ದು, ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.


Click it and Unblock the Notifications