ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಹಲವು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾಗಿದೆ. ಕೈಗೆಟುಕುವ ದರವನ್ನು ಹೊಂದಿರುವ ಈ ಕಾರುಗಳು ಹೆಚ್ಚಿನ ಮೈಲೇಜ್ ನೀಡಲಿದ್ದು, ದೈನಂದಿನ ಬಳಕೆಗೆ ಸೂಕ್ತವಾಗಿರಲಿವೆ.

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಈ ಎಲೆಕ್ಟ್ರಿಕ್ ಕಾರುಗಳು ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 200 ಕಿ.ಮೀಗಳವರೆಗೆ ಚಲಿಸುತ್ತವೆ ಎಂದು ಹೇಳಲಾಗಿದೆ. ದೇಶಾದ್ಯಂತ ಎಲೆಕ್ಟ್ರಿಕ್ ಕಾರುಗಳ ಮಾರಾಟವು ಭರದಿಂದ ಸಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಕಾರುಗಳು ಕಳೆದ ವರ್ಷ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದ್ದವು. ಟಾಟಾ ಮೋಟಾರ್ಸ್ ಕಂಪನಿಯ ನೆಕ್ಸಾನ್ ಇವಿ ದೇಶದಲ್ಲಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಟಾಟಾ ನೆಕ್ಸಾನ್ ಇವಿ, ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ. 2020ರಲ್ಲಿ ಈ ಎಲೆಕ್ಟ್ರಿಕ್ ಕಾರಿನ 2,529 ಯುನಿಟ್'ಗಳು ಮಾರಾಟವಾಗಿವೆ.

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಟಾಟಾ ನೆಕ್ಸಾನ್ ಇವಿಯನ್ನು ಸಮಂಜಸವಾದ ಬೆಲೆ ಹಾಗೂ ಹಲವಾರು ಫೀಚರ್'ಗಳೊಂದಿಗೆ ಬಿಡುಗಡೆಗೊಳಿಸಲಾಗಿದೆ. ಈ ಕಾರಣಕ್ಕೆ ಈ ಕಾರು ಹಲವು ಎಲೆಕ್ಟ್ರಿಕ್ ಕಾರುಗಳ ಪೈಪೋಟಿಯ ನಡುವೆಯೂ ದೇಶಿಯ ಮಾರುಕಟ್ಟೆಯಲ್ಲಿ ಯಶಸ್ವಿಯಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಈ ಕಾರಿನ ಯಶಸ್ಸಿನಿಂದ ಸ್ಫೂರ್ತಿ ಪಡೆದಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಮುಂದಾಗಿದೆ.

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಸದ್ಯಕ್ಕೆ ನೆಕ್ಸಾನ್ ಇವಿ ಜೊತೆಗೆ ಆಲ್ಟ್ರೋಜ್ ಇವಿ, ಟಿಗೊರ್'ನಂತಹ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯು ಈಗ ಹ್ಯಾರಿಯರ್ ಇವಿಯನ್ನು ಬಿಡುಗಡೆಗೊಳಿಸಬಹುದು ಎಂದು ಹೇಳಲಾಗುತ್ತಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿಯಲ್ಲಿರುವಂತಹ ವಿನ್ಯಾಸ, ಸ್ಟೈಲಿಂಗ್ ಹಾಗೂ ಫೀಚರ್'ಗಳನ್ನು ಇತರ ಎಲೆಕ್ಟ್ರಿಕ್ ಕಾರುಗಳಲ್ಲಿಯೂ ಅಳವಡಿಸುವ ಸಾಧ್ಯತೆಗಳಿವೆ. ಟಾಟಾ ಮೋಟಾರ್ಸ್ ಬಿಡುಗಡೆಗೊಳಿಸಲಿರುವ ಎಲೆಕ್ಟ್ರಿಕ್ ಕಾರು ದೇಶದ ಮೊದಲ ಎಲೆಕ್ಟ್ರಿಕ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿರಲಿದೆ.

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಸದ್ಯಕ್ಕೆ ಬೇರೆ ಯಾವುದೇ ಕಂಪನಿಯು ಈ ರೀತಿಯ ಯೋಜನೆಗಳನ್ನು ಹೊಂದಿಲ್ಲ. ಹ್ಯುಂಡೈ ಕಂಪನಿಯು ಕೋನಾ ಇವಿಯನ್ನು ಬಿಡುಗಡೆಗೊಳಿಸಿದ್ದರೆ, ಮಾರುತಿ ಸುಜುಕಿ ಕಂಪನಿಯು ಇನ್ನೂ ಯಾವುದೇ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಿಲ್ಲ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಟಿಯಾಗೊ ಇವಿಯನ್ನು ಬಿಡುಗಡೆಗೊಳಿಸಬಹುದು. ಈ ಸಣ್ಣ ಎಲೆಕ್ಟ್ರಿಕ್ ಕಾರು ಕಡಿಮೆ ಬೆಲೆಯನ್ನು ಹೊಂದಿರಲಿದೆ. ಸಾಕಷ್ಟು ಫೀಚರ್'ಗಳನ್ನು ಹೊಂದಲಿರುವ ಈ ಕಾರು ಪೂರ್ತಿ ಚಾರ್ಜ್'ನೊಂದಿಗೆ 200 ಕಿ.ಮೀಗಳವರೆಗೆ ಚಲಿಸುವ ಸಾಧ್ಯತೆಗಳಿವೆ.

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾದ ಟಾಟಾ ಮೋಟಾರ್ಸ್

ಸದ್ಯಕ್ಕೆ ಮಹೀಂದ್ರಾ ಕಂಪನಿಯ ಇಕೆಯುವಿ 100 ದೇಶದ ಅಗ್ಗದ ಎಲೆಕ್ಟ್ರಿಕ್ ಕಾರ್ ಆಗಿದೆ. ಆದರೆ ಕಡಿಮೆ ಫೀಚರ್ ಹಾಗೂ ಕಡಿಮೆ ದೂರ ಚಲಿಸುವ ಕಾರಣಕ್ಕೆ ಈ ಕಾರು ಹೆಚ್ಚಿನ ಸಂಖ್ಯೆಯ ಗ್ರಾಹಕರನ್ನು ಸೆಳೆಯುವಲ್ಲಿ ವಿಫಲವಾಗಿದೆ.

Most Read Articles

Kannada
English summary
Tata Motors plans to launch new electric cars in future. Read in Kannada.
Story first published: Wednesday, January 13, 2021, 19:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X