Just In
Don't Miss!
- News
"ಕಾಂಗ್ರೆಸ್ ಈಗ ಒಡೆದ ಮನೆ; ಮೂರು ಗುಂಪುಗಳ ನಡುವೆ ನಿರಂತರ ಗುದ್ದಾಟ''
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Sports
ಶ್ರೀಲಂಕಾ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಪ್ರಕಟ, ಗೇಲ್ ವಾಪಸ್
- Movies
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
- Lifestyle
ಮಾರ್ಚ್ ತಿಂಗಳಲ್ಲಿ ವಿವಾಹವಾಗಲು ಇಲ್ಲಿದೆ ಶುಭದಿನಾಂಕಗಳು
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿವಿಧ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಪ್ರಯಾಣಿಕ ವಾಹನಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ್ದು, ಹೊಸ ದರವು ಈ ತಿಂಗಳ 21ರಿಂದ ಅನ್ವಯವಾಗುವಂತೆ ಬೆಲೆ ಹೆಚ್ಚಳ ಮಾಡಿರುವಾಗಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.2 ರಷ್ಟು ಹೆಚ್ಚಳ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಕನಿಷ್ಠ ರೂ. 5 ಸಾವಿರದಿಂದ ರೂ. 24 ಸಾವಿರ ತನಕ ಬೆಲೆ ಹೆಚ್ಚಳಗೊಂಡಿದ್ದು, ಯಾವ ಕಾರಿನ ಬೆಲೆ ಎಷ್ಟು ಹೆಚ್ಚಳವಾಗಿದೆ ಎನ್ನುವ ಮಾಹಿತಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

2020ರ ಅಗಸ್ಟ್ನಲ್ಲಿ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಜನವರಿ 21ರ ನಂತರ ಹೊಸ ಕಾರುಗಳ ಬೆಲೆ ಏರಿಕೆಯಾಗುವಂತೆ ಹೊಸ ದರ ನಿಗದಿಪಡಿಸಲಾಗಿದ್ದು, ಕೋವಿಡ್ 19 ಪರಿಣಾಮ ಆರ್ಥಿಕ ಸಂಕಷ್ಟು ಎದುರಾಗಿದ್ದರೂ ಹೊಸ ಕಾರುಗಳ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಳೆದ ಕೆಲ ತಿಂಗಳಿನಿಂದ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ತಿಂಗಳ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಕಳೆದ ವರ್ಷಕ್ಕಿಂತಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಹಬ್ಬದ ಋುತುಗಳ ನಂತರವೂ ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.84 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಗ್ರಾಹಕರ ಬೇಡಿಕೆಯೆಂತೆ ಸದ್ಯ ಟಿಯಾಗೊ, ಟಿಗೋರ್, ಆಲ್ಟ್ರೊಜ್, ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಟಾಟಾ ಹೊಸ ಕಾರುಗಳಲ್ಲಿ ನ್ಯೂ ಜನರೇಷನ್ ಸಫಾರಿ ಎಸ್ಯುವಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ.

ಹೊಸ ಸಫಾರಿ ಕಾರು ಮಾದರಿಯು ಇದೇ ತಿಂಗಳು ಗಣರಾಜ್ಯೋತ್ಸವದಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದ್ದು, ಅನಾವರಣಗೊಂಡ ಮುಂದಿನ ಕೆಲವೇ ವಾರಗಳಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ತಲೆಮಾರಿನ ಸಫಾರಿ ಮಾದರಿಯು ಎಸ್ಯುವಿ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹ್ಯಾರಿಯರ್ ಎಸ್ಯುವಿಯ ಮುಂದುವರಿದ ಭಾಗವಾಗಿರುವ ಸಫಾರಿ ಕಾರು ಮೂರನೇ ಸಾಲಿನ ಆಸನದೊಂದಿಗೆ ಫುಲ್ ಸೈಜ್ ಎಸ್ಯುವಿ ಪ್ರಿಯರನ್ನು ಸೆಳೆಯಲಿದೆ.

ಸಫಾರಿ ಎಸ್ಯುವಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಟಾಟಾ ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಟಾಟಾ ಮೋಟಾರ್ಸ್ ಮೋಟಾರ್ಸ್ ಕಂಪನಿಯು ಹೊಸ ಕಾರುಗಳೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ವಿನೂತನ ಕಾರ್ ಟೆಕ್ನಾಲಜಿ ಬಳಕೆ ಮಾಡುತ್ತಿದ್ದು, ಟಾಟಾ ಅಭಿವೃದ್ದಿಯ ಐರಾ(iRA) ಕನೆಕ್ಟೆಡ್ ಕಾರ್ ಫೀಚರ್ಸ್ ಮೂಲಕ ಟಾಟಾ ಕಂಪನಿಯು ಹೊಸ ಕಾರುಗಳಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸುತ್ತದೆ.