ಸೆಪ್ಟೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.20ರಷ್ಟು ಬೆಳವಣಿಗೆ ಸಾಧಿಸಿದ Tata Motors
ಹೊಸ ವಾಹನಗಳ ಮಾರಾಟವು ಸಾಕಷ್ಟು ಬೆಳವಣಿಗೆ ಸಾಧಿಸುತ್ತಿದ್ದು, ಸೆಪ್ಟೆಂಬರ್ ಅವಧಿಯಲ್ಲಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್(Tata Motors) ಕಂಪನಿಯು ಶೇ.20 ರಷ್ಟು ಬೆಳವಣಿಗೆಯೊಂದಿಗೆ 25,730 ಯನಿಟ್ ಕಾರುಗಳನ್ನು ಮಾರಾಟ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕೋವಿಡ್ ಆರ್ಥಿಕ ಸಂಕಷ್ಟದ ನಡುವೆಯೂ ಕಳೆದ ಕೆಲ ತಿಂಗಳಿನಿಂದ ಹೊಸ ಕಾರುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಸೆಪ್ಟೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.20 ರಷ್ಟು ಬೆಳವಣಿಯೊಂದಿಗೆ ಪ್ರಮುಖ ಕಾರು ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

2021ರ ಸೆಪ್ಟೆಂಬರ್ ಅವಧಿಯಲ್ಲಿನ ವಾಹನ ಮಾರಾಟದಲ್ಲಿ ಶೇ. 20ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ 21,199 ಯನಿಟ್ ಮಾರಾಟ ಮಾಡಿತ್ತು. ಕಳೆದ ಕೆಲ ತಿಂಗಳಿನಿಂದ ಟಾಟಾ ಕಾರುಗಳಿಗೆ ಉತ್ತಮ ಬೇಡಿಕೆ ದಾಖಲಾಗುತ್ತಿರುವುದೇ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಯಾಣಿಕ ಕಾರು ಮಾರಾಟದಲ್ಲಿ ಮಾತ್ರವಲ್ಲ ವಾಣಿಜ್ಯ ವಾಹನ ಮಾರಾಟದಲ್ಲೂ ಮುನ್ನಡೆ ಸಾಧಿಸುತ್ತಿದೆ.

ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದ್ದು, ಕೋವಿಡ್ 2ನೇ ಅಲೆ ಪರಿಣಾಮ ತಗ್ಗಿರುವ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಕೋವಿಡ್ ಪರಿಣಾಮ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಏರಿಳಿತ ಕಂಡುಬಂದರೂ ಆಟೋ ಉತ್ಪಾದನಾ ಕ್ಷೇತ್ರ ಮಾತ್ರ ಗರಿಷ್ಠ ಮಟ್ಟದ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿವೆ.

ಟಾಟಾ ಮೋಟಾರ್ಸ್ ಕಂಪನಿಯು ಸಹ ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದು ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ.

ಹೀಗಾಗಿ ಗ್ರಾಹಕರ ಬೇಡಿಕೆ ಪೂರೈಕೆ ಸಹಕಾರಿಯಾಗುವಂತೆ ಮಾರಾಟ ಮಳಿಗೆಗಳು ಮತ್ತು ಸೇವಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, ಇತ್ತೀಚೆಗೆ ಕಂಪನಿಯು ಒಂದೇ ದಿನದ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳ ವಿವಿಧ ನಗರಗಳಲ್ಲಿ ಸುಮಾರು 70 ಹೊಸ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿತು.

ಹೊಸದಾಗಿ ಚಾಲನೆ ಪಡೆದುಕೊಂಡ 70 ಶೋರೂಂಗಳಲ್ಲಿ ಅರ್ಧಕ್ಕೂ ಹೆಚ್ಚು ಶೋರೂಂಗಳು ಮಾರಾಟ ಸೌಲಭ್ಯದ ಜೊತೆಗೆ ಗ್ರಾಹಕರ ಸೇವಾ ಕೇಂದ್ರಗಳನ್ನು ಸಹ ಒಂದೇ ಸೂರಿನಡಿನಲ್ಲಿ ತೆರದಿದ್ದು, ಟಾಟಾ ಕಂಪನಿಯು ಹೊಸದಾಗಿ 53 ಶೋರೂಂಗಳನ್ನು ಪ್ರಥಮ ಬಾರಿಗೆ ಟೈರ್ 2 ನಗರಗಳಲ್ಲಿ ಆರಂಭಿಸಿದೆ.

ಇನ್ನುಳಿದ 32 ಶೋರೂಂಗಳ ಪೈಕಿ ನಮ್ಮ ಬೆಂಗಳೂರಿನಲ್ಲಿ(7), ಚೆನ್ನೈನಲ್ಲಿ(5) , ಹೈದ್ರಾಬಾದ್‌ನಲ್ಲಿ(4) ಮತ್ತು ಕೊಚ್ಚಿಯಲ್ಲಿ(4) ಶೋರೂಂಗಳಿಗೆ ಚಾಲನೆ ನೀಡಲಾಗಿದ್ದು, ಹೊಸ ಶೋರೂಂಗಳೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ದೇಶಾದ್ಯಂತ ಒಟ್ಟು 980 ಮಾರಾಟ ಮಳಿಗೆಗಳನ್ನು ಹೊಂದಿಂತಾಗಿದೆ.

ದೇಶಾದ್ಯಂತ ಹರಡಿಕೊಂಡಿರುವ 980 ಟಾಟಾ ಶೋರೂಂಗಳಲ್ಲಿ 272 ಶೋರೂಂಗಳು ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಂಪನಿಯ ಕಾರು ಮಾರಾಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದಲೇ ಶೇ. 28ರಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಾರುಗಳ ಮಾರಾಟದಲ್ಲಿನ ವಾರ್ಷಿಕ ಬೆಳವಣಿಗೆಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕಳೆದ 9 ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರು ಮಾದರಿಗಳು ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡಲಿವೆ.

ಟಾಟಾ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಮೂಲಕ ಪ್ರತಿ ತಿಂಗಳು 40 ಸಾವಿರ ಯುನಿಟ್ ಮಾರಾಟ ಗುರಿಹೊಂದಿದ್ದು, ಬಹುನೀರಿಕ್ಷಿತ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯೊಂದಿಗೆ ಕಾರು ಮಾರಾಟದಲ್ಲಿ ಶೇ.10 ರಷ್ಟು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ.

ಪಂಚ್ ಕಾರಿನ ಮೂಲಕ ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, ಪಂಚ್ ಮಾದರಿಯು ಸಣ್ಣ ಗಾತ್ರದ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಉತ್ತಮ ಚಾಲನಾ ವೈಶಿಷ್ಟ್ಯತೆಯನ್ನು ಪಡೆದುಕೊಂಡಿದೆ.

ಹೊಸ ಕಾರು ಇದೇ ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ತಾಂತ್ರಿಕ ಅಂಶಗಳೊಂದಿಗೆ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುತ್ತಿದೆ.

ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಮಾದರಿಯಾಗಲಿದ್ದು, 12 ಮಾದರಿಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.29 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications