ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಹಬ್ಬದ ಋತುಗಳಲ್ಲಿ ಹೊಸ ವಾಹನಗಳ ಮಾರಾಟವು ಸಾಕಷ್ಟು ಬೆಳವಣಿಗೆ ಸಾಧಿಸಿದ್ದು, ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್(Tata Motors) ಕಂಪನಿಯು ಶೇ.38 ರಷ್ಟು ಬೆಳವಣಿಗೆಯೊಂದಿಗೆ 29,778 ಯನಿಟ್ ಕಾರುಗಳನ್ನು ಮಾರಾಟ ಮಾಡಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಕೋವಿಡ್ ಆರ್ಥಿಕ ಸಂಕಷ್ಟದ ನಡುವೆಯೂ ಕಳೆದ ಕೆಲ ತಿಂಗಳಿನಿಂದ ಹೊಸ ಕಾರುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38 ರಷ್ಟು ಬೆಳವಣಿಯೊಂದಿಗೆ ಪ್ರಮುಖ ಕಾರು ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ನವೆಂಬರ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 29,778 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ನವೆಂಬರ್ ಅವಧಿಯಲ್ಲಿ ಮಾರಾಟಗೊಂಡಿದ್ದ 21,641 ಯುನಿಟ್‌ಗಿಂತಲೂ ಶೇ.38 ರಷ್ಟು ಹೆಚ್ಚಳವಾಗಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

2021ರ ನವೆಂಬರ್ ಅವಧಿಯಲ್ಲಿನ ಒಟ್ಟು ವಾಹನ ಮಾರಾಟದಲ್ಲಿ ಶೇ.21 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 58,073 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ನವೆಂಬರ್‌ನಲ್ಲಿ ಮಾರಾಟಗೊಂಡಿದ್ದ 47,859 ಯನಿಟ್ ವಾಹನಗಳನ್ನು ಮಾರಾಟ ಮಾಡಿತ್ತು.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಕಳೆದ ಕೆಲ ತಿಂಗಳಿನಿಂದ ಸ್ವದೇಶಿ ಕಾರುಗಳಿಗೆ ಹೆಚ್ಚಿನ ಬೇಡಿಕೆ ದಾಖಲಾಗುತ್ತಿರುವುದೇ ಟಾಟಾ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಯಾಣಿಕ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ಟಾಟಾ ಕಂಪನಿಯು ಈ ಬಾರಿ ವಾಣಿಜ್ಯ ವಾಹನ ಮಾರಾಟದಲ್ಲೂ ಶೇ.15 ರಷ್ಟು ಮುನ್ನಡೆ ಸಾಧಿಸಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ನವೆಂಬರ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 32,245 ಯುನಿಟ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಿದ್ದು, 3,950 ವಾಣಿಜ್ಯ ವಾಹನಗಳನ್ನು ವಿದೇಶಿ ಮಾರುಕಟ್ಟೆಗೆ ರಫ್ತುಗೊಳಿಸಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಕೋವಿಡ್ ಪರಿಣಾಮ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಏರಿಳಿತ ಕಂಡುಬಂದರೂ ಆಟೋ ಉತ್ಪಾದನಾ ಕ್ಷೇತ್ರ ಮಾತ್ರ ಗರಿಷ್ಠ ಮಟ್ಟದ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿವೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಸಹ ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದೂವರೆ ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಇತ್ತೀಚೆಗೆ ಬಿಡುಗಡೆಯಾದ ಪಂಚ್ ಮೈಕ್ರೊ ಎಸ್‌ಯುವಿ ಸಹ ಟಾಟಾ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಮೈಕ್ರೊ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38 ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಪಂಚ್ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10ರಷ್ಟು ಪಾಲು ಹೊಂದುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38 ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38 ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಪಂಚ್ ಕಾರಿನಲ್ಲಿ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಬೆಸ್ ವೆರಿಯೆಂಟ್‌ನಲ್ಲೂ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38 ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಟಾಟಾ ಪಂಚ್ ಕಾರಿನಲ್ಲಿ ಕಂಪನಿಯು 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದೆ. 1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.38 ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಪ್ರತಿ ಮಾದರಿಯಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ ಹೊಂದಿದೆ.

ಜೊತೆಗೆ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ನಂತರ ಎಲ್ಲಾ ಕಾರು ಮಾದರಿಗಳಲ್ಲೂ ಗರಿಷ್ಠ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

Most Read Articles

Kannada
English summary
Tata motors registered car sales of 29778 units in november
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X