ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಟಾಟಾ ಮೋಟಾರ್ಸ್(Tata Motors) ಕಂಪನಿಯು ಹೊಸ ಪಂಚ್(Punch) ಬಿಡುಗಡೆಯೊಂದಿಗೆ ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಂಪನಿಯು ಹೊಸ ಮೊದಲ ಟಿವಿ ಜಾಹೀರಾತು ಬಿಡುಗಡೆ ಮಾಡಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಹೊಸ ಜಾಹೀರಾತಿನಲ್ಲಿ ಪಂಚ್ ಕಾರಿನ ವೈಶಿಷ್ಟ್ಯತೆಗಳು ಮತ್ತು ಡ್ರೈವಿಂಗ್ ಕೌಶಲ್ಯತೆಗಳ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರು ಅತ್ಯುತ್ತಮ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಬಜೆಟ್ ಬೆಲೆಯೊಂದಿಗೆ ಕಾರಿನ ಆಯ್ಕೆ ಮೌಲ್ಯವನ್ನು ಹೆಚ್ಚಿಸಿದೆ. ಹೊಸ ಕಾರು ಮೈಕ್ರೊ ಎಸ್‌ಯುವಿ ಮಾದರಿಯಾಗಿದ್ದರೂ ಬೆಲೆ ಮತ್ತು ಎಂಜಿನ್ ಆಯ್ಕೆ ವಿಚಾರವಾಗಿ ಪ್ರಮುಖ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ತೀವ್ರ ಪೈಪೋಟಿ ನೀಡಲಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಅಲ್ಫಾ ಪ್ಲಾಟ್‌ಫಾರ್ಮ್ ಆಧರಿಸಿರುವ ಹೊಸ ಟಾಟಾ ಪಂಚ್ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಹೊಸ ಕಾರಿನಲ್ಲಿ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಬೆಸ್ ವೆರಿಯೆಂಟ್‌ನಲ್ಲೂ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ.

ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಟಾಟಾ ಪಂಚ್ ಕಾರಿನಲ್ಲಿ ಕಂಪನಿಯು 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಮ್ಯಾನುವಲ್ ಮಾದರಿಗಿಂತಲೂ ಆಟೋಮ್ಯಾಟಿಕ್ ಮಾದರಿಯು ಹೆಚ್ಚುವರಿಯಾಗಿ ರೂ.60 ಸಾವಿರದಷ್ಟು ದುಬಾರಿಯಾಗಿರುತ್ತದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಹೊಸ ಕಾರಿನ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 18.97 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18.82 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಪಂಚ್ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಪ್ರತಿ ಮಾದರಿಯಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ಗಳನ್ನು ನೀಡುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಹೊಸ ಕಾರಿನ ಪ್ಯೂರ್ ಮಾದರಿಯಲ್ಲಿ ಕಂಪನಿಯು ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಸ್ಯಾವಿ ಕಂಟ್ರೋಲ್, ಆರ್‌ಪಿಎಎಸ್, ಸೆಂಟ್ರೇಲ್ ಲಾಕಿಂಗ್ ಜೊತೆ ಕೀ, ಐಎಸಿ ಮತ್ತು ಇಎಸ್ಎಸ್ ಟೆಕ್ನಾಲಜಿ, ಫ್ರಂಟ್ ಪವರ್ ವಿಂಡೋ, ಟಿಲ್ಟ್ ಸ್ಟೀರಿಂಗ್, 90 ಡಿಗ್ರಿ ಡೋರ್ ಓಪನ್, ರಿಯರ್ ಪ್ಲ್ಯಾಟ್ ಫ್ಲೊರ್, ಬ್ಲ್ಯಾಕ್ ಒಡಿಹೆಚ್, ಹ್ಯುಮಿನಿಟಿ ಕ್ರೊಮ್ ಲೈನ್, ಪೆಟೆಂಡ್ ಬಂಪರ್, ಡೋರ್, ವೀಲ್ಹ್ ಆರ್ಚ್, ಸಿಲ್ ಕ್ಲಾಡಿಂಗ್ ಜೋಡಣೆ ಮಾಡಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಅಡ್ವೆಂಚರ್ ಮಾದರಿಯಲ್ಲಿ 4 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, 4 ಸ್ಪೀಕರ್ಸ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಯುಎಸ್‌ಬಿ ಚಾರ್ಜಿಂಗ್ ಫೋರ್ಟ್, ಎಲೆಕ್ಟ್ರಿಕ್ ಮೂಲಕ ಹೊಂದಾಣಿಕೆ ಮಾಡಿಕೊಳ್ಳಬಹುದಾದ ರಿಯರ್ ವ್ಯೂ ಮಿರರ್, ಆಲ್ ಪವರ್ ವಿಂಡೋ, ಫಾಲೋ ಮಿ ಹೋಂ ಹೆಡ್‌ಲ್ಯಾಂಪ್, ಆಂಟಿ ಗ್ಲೆರ್ ಐಆರ್‌ಎಂವಿ, ಸೆಂಟ್ರಲ್ ರಿಮೋಟ್ ಲಾಕಿಂಗ್ ಜೊತೆ ಫ್ಲಿಪ್ ಕೀ, ಫುಲ್ ವ್ಹೀಲ್ ಕವರ್ ಮತ್ತು ಬಾಡಿ ಕಲರ್ ರಿಯರ್ ವ್ಯೂ ಮಿರರ್ ನೀಡಲಾಗಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಅಕಾಂಪ್ಲಿಶೆಡ್ ಆವೃತ್ತಿಯಲ್ಲಿ ಹೊಂದಾಣಿಕೆ ಮಾಡಬಹುದಾದ 7 ಇಂಚಿನ ಹರ್ಮನ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ, 4 ಸ್ಪೀಕರ್ಸ್ ಮತ್ತು 2 ಟ್ವಿಟರ್, ರಿಯರ್ ವ್ಯೂ ಕ್ಯಾಮೆರಾ, ಎಲ್ಇಡಿ ಟೈಲ್ ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್, ಆರ್15 ಹೈಪರ್ ಸ್ಟೈಲ್ ವ್ಹೀಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಒನ್ ಟಚ್ ಡೋರ್ ವಿಂಡೋ ಡೌನ್, ಕ್ರೂಸ್ ಕಂಟ್ರೋಲ್, ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಮತ್ತು ಸಿಟಿವಿ ಮಾದರಿಯಾಗಿ ಟ್ರಾಕ್ಷನ್ ಕಂಟ್ರೋಲ್ ಸೌಲಭ್ಯವಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಹೈ ಎಂಡ್ ಮಾದರಿಯಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಆರ್16 ಡೈಮಂಡ್ ಕಟ್ ಅಲಾಯ್ ವ್ಹೀಲ್, ರೂಫ್ ರೈಲ್ಸ್, 7 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಹೆಡ್‌ಲ್ಯಾಂಪ್, ರೈನ್ ಸೆನ್ಸಿಂಗ್ ವೈಪರ್, ಆಟೋ ಫೋಡ್ಲಿಂಗ್ ರಿಯರ್ ವ್ಯೂ ಮಿರರ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್ ಸಿಸ್ಟಂ, ಕೂಲ್ಡ್ ಗ್ಲೊ ಬಾಕ್ಸ್, ರಿಯರ್ ವೈಪರ್ ಪ್ಲಸ್ ವಾಷ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ಹಿಂಬದಿಯ ಆಸನದಲ್ಲಿ ಆರ್ಮ್ ರೆಸ್ಟ್ ಮತ್ತು ಲೆದರ್ ಕೊಟಿಂಗ್ ಹೊಂದಿರುವ ಸ್ಟೀರಿಂಗ್ ಮತ್ತು ಗೇರ್ ನಾಬ್ ನೀಡಲಾಗಿದೆ.

ಹೊಸ Punch ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ Tata Motors

ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ಡಿಸೈನ್ ಹೊಂದಿದ್ದು, ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

Most Read Articles

Kannada
English summary
Tata motors release punch micro suv new tvc
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X