ಹೊಸ ಸಫಾರಿ ಎಕ್ಸ್‌ಟಿಎ ಪ್ಲಸ್ ವೆರಿಯೆಂಟ್ ಜಾಹೀರಾತು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು ಸಫಾರಿ ಎಸ್‌ಯುವಿಯಲ್ಲಿ ಗ್ರಾಹಕರ ಬೇಡಿಕೆ ಅನುಸಾರವಾಗಿ ಹೊಸ ಎಕ್ಸ್‌ಟಿಎ ಪ್ಲಸ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಹೊಸ ವೆರಿಯೆಂಟ್ ಫೀಚರ್ಸ್‌ಗಳ ಕುರಿತಾಗಿ ಟಾಟಾ ಕಂಪನಿಯು ಹೊಸ ಜಾಹೀರಾತು ಪ್ರಕಟಿಸಿದೆ.

ಹ್ಯಾರಿಯರ್ ಎಸ್‌ಯುವಿ ಸೇರಿದಂತೆ ಪ್ರಮುಖ ಕಾರು ಮಾದರಿಯಲ್ಲಿ ಬಿಎಸ್-6 ವರ್ಷನ್ ಬಿಡುಗಡೆ ನಂತರ ಗ್ರಾಹಕರ ಬೇಡಿಕೆಯೆಂತೆ ಹಲವಾರು ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಕಂಪನಿಯು ಇದೀಗ ಹ್ಯಾರಿಯರ್ ಜೊತೆಗೆ ಇತ್ತೀಚೆಗೆ ಬಿಡುಗಡೆಗೊಂಡಿದ್ದ ಸಫಾರಿ ಎಸ್‌ಯುವಿಯಲ್ಲೂ ಉನ್ನತೀಕರಿಸಿದ ವೆರಿಯೆಂಟ್‌ವೊಂದನ್ನು ಬಿಡುಗಡೆ ಮಾಡಿದೆ.

ಎಸ್‌ಯುವಿ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿರುವ ಹ್ಯಾರಿಯರ್ ಮತ್ತು ಸಫಾರಿ ಕಾರುಗಳು ವಿವಿಧ ವೆರಿಯೆಂಟ್‌ಗಳೊಂದಿಗೆ ಉತ್ತಮ ಬೇಡಿಕೆ ಹೊಂದಿದ್ದು, ಇದೀಗ ಎಕ್ಸ್‌ಟಿಎ ಪ್ಲಸ್ ವೆರಿಯೆಂಟ್ ಹೊಸ ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

ಹ್ಯಾರಿಯರ್ ಎಕ್ಸ್‌ಟಿಎ ಪ್ಲಸ್ ಮತ್ತು ಸಫಾರಿ ಎಕ್ಸ್‌ಟಿಎ ಪ್ಲಸ್ ಆವೃತ್ತಿಗಳು ಎಕ್ಸ್ಎಂಎ ಮತ್ತು ಎಕ್ಸ್‌ಜೆಡ್ಎ ನಡುವಿನ ಸ್ಥಾನ ಪಡೆದುಕೊಂಡಿದ್ದು, ಆಟೋಮ್ಯಾಟಿಕ್ ಆವೃತ್ತಿಯಾಗಿರುವ ಹೊಸ ವೆರಿಯೆಂಟ್‌ಗಳು ಪನೊರಮಿಕ್ ಸನ್‌ರೂಫ್ ಅನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿವೆ.
ಟಾಟಾ ಕಂಪನಿಯು ಹ್ಯಾರಿಯರ್ ಎಕ್ಸ್‌ಟಿಎ ಪ್ಲಸ್ ವೆರಿಯೆಂಟ್ ಅನ್ನು ಎಕ್ಸ್‌ಟಿಎ ಪ್ಲಸ್ ಸ್ಟ್ಯಾಂಡರ್ಡ್(ಎಕ್ಸ್‌ಶೋರೂಂ ಪ್ರಕಾರ ರೂ. 19.14 ಲಕ್ಷಕ್ಕೆ) ಎಕ್ಸ್‌ಟಿಎ ಪ್ಲಸ್ ಡಾರ್ಕ್ ಎಡಿಷನ್(ಎಕ್ಸ್‌ಶೋರೂಂ ಪ್ರಕಾರ ರೂ. 19.34 ಲಕ್ಷಗಳಲ್ಲಿ ಪರಿಚಯಿಸಿದ್ದು, ಸಫಾರಿ ಎಕ್ಸ್‌ಟಿಎ ಪ್ಲಸ್ ಮಾದರಿಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 20.08 ಲಕ್ಷ ಬೆಲೆ ಹೊಂದಿದೆ.

ಎಕ್ಸ್‌ಟಿಎ ಪ್ಲಸ್ ಮಾದರಿಗಳಲ್ಲಿ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು ಪನೋರಮಿಕ್ ಸನ್‌ರೂಫ್ ಸೌಲಭ್ಯ ಹೊರತುಪಡಿಸಿ ಇನ್ನುಳಿದ ಮಾದರಿಗಳಲ್ಲಿರುವಂತೆ ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದ್ದು, ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಆವೃತ್ತಿಗಳು ಮುಂಚೂಣಿ ಸಾಧಿಸಲಿವೆ.

ಸಫಾರಿ ಕಾರಿನಲ್ಲಿ 7 ಸೀಟರ್ ಸೌಲಭ್ಯ ನೀಡಿರುವ ಹಿನ್ನಲೆಯಲ್ಲಿ ಮೂರನೇ ಸಾಲಿಗಾಗಿ ತುಸು ವ್ಹೀಲ್ ಬೆಸ್ ಹೆಚ್ಚಳವಾಗಿರುವುದನ್ನು ಹೊರತುಪಡಿಸಿ ಹ್ಯಾರಿಯರ್ ಮಾದರಿಯಂತೆಯೇ ಅಭಿವೃದ್ದಿಗೊಂಡಿದ್ದು, ಹೊಸ ವೆರಿಯೆಂಟ್‌ಗಳು ಗ್ರಾಹಕರನ್ನು ಆಕರ್ಷಿಸಲಿವೆ.

ಹೊಸ ಕಾರಿನಲ್ಲಿರುವ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್‌ನಲ್ಲಿ ಖರೀದಿಗೆ ಲಭ್ಯವಿರುವ ಹ್ಯಾರಿಯರ್ ಕಾರು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಸಫಾರಿ ಕಾರು 6 ಸೀಟರ್ ಮತ್ತು 7 ಸೀಟರ್ ಹೊಂದಿರುವ ಸಫಾರಿ ಕಾರು ಮಾದರಿಯು ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಮಾದರಿಗಳೊಂದಿಗ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಟಿಎ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ವೆರಿಯೆಂಟ್ ಹೊಂದಿದೆ.

ಹೊಸ ಸಫಾರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22.01 ಲಕ್ಷ ಬೆಲೆ ಪಡೆದುಕೊಂಡಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಮಾದರಿಯು ಮಧ್ಯಮ ಕ್ರಮಾಂಕದ ಆವೃತ್ತಿಯಾಗಿದೆ.

ಸದ್ಯ ಸಫಾರಿ ಎಸ್‌ಯುವಿಯಲ್ಲಿ ಹ್ಯಾರಿಯರ್ ಮಾದರಿಯಲ್ಲಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 2 ವೀಲ್ಹ್ ಡ್ರೈವ್ ಸಿಸ್ಟಂ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಮುಂಬರುವ ದಿನಗಳಲ್ಲಿ ಹೈ ಎಂಡ್ ಮಾದರಿಯಾಗಿರುವ ಅಡ್ವೆಂಚರ್ ಆವೃತ್ತಿಯಲ್ಲಿ ಗ್ರಾಹಕರ ಬೇಡಿಕೆಯ ಅನುಸಾರವಾಗಿ ಆಫ್ ರೋಡ್ ಪರ್ಫಾಮೆನ್ಸ್‌ಗಾಗಿ 4x4 ಡ್ರೈವ್ ಸಿಸ್ಟಂ ಮಾದರಿಯನ್ನು ಸಹ ಪರಿಚಯಿಸುವ ಯೋಜನೆಯಲ್ಲಿದೆ.

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದ್ದು, ಹೊಸ ಕಾರಿನಲ್ಲಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಮಧ್ಯಮ ಆವೃತ್ತಿಗಳಲ್ಲಿ ಆರಂಭಿಕ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳೊಂದಿಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್ ಸೌಲಭ್ಯಗಳಿವೆ. ಹಾಗೆಯೇ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.


Click it and Unblock the Notifications