ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಕೋವಿಡ್ ಪರಿಣಾಮ ಹೊಸ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ಸಾಕಷ್ಟು ಕುಸಿತ ದಾಖಲಾಗಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ಕಳೆದ ತಿಂಗಳು ಎಪ್ರಿಲ್‌ ಅವಧಿಯ ಕಾರು ಮಾರಾಟ ಭಾರೀ ಹಿನ್ನಡೆ ಅನುಭವಿಸಿದೆ.

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಕೋವಿಡ್ ಪರಿಣಾಮ 2020ರ ಅವಧಿಯಲ್ಲೂ ಸಾಕಷ್ಟು ನಷ್ಟ ಅನುಭವಿಸಿದ್ದ ಕಾರು ಕಂಪನಿಗಳು ಪರಿಸ್ಥಿತಿಗೆ ಅನುಗುಣವಾಗಿ ಕಳೆದ ವರ್ಷ ಕೊನೆಯಲ್ಲಿ ಮತ್ತು ಈ ವರ್ಷದ ಆರಂಭದಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದ್ದವು. ಆದರೆ ಏಪ್ರಿಲ್ ಆರಂಭದಲ್ಲಿ ಹೆಚ್ಚಳವಾದ ಕೋವಿಡ್ 2ನೇ ಅಲೆಯು ಆಟೋ ಉದ್ಯಮಕ್ಕೆ ಮತ್ತೆ ಹೊಡೆತ ನೀಡುತ್ತಿದ್ದು, ಟಾಟಾ ಮೋಟಾರ್ಸ್ ಸೇರಿದಂತೆ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಮಾರಾಟದಲ್ಲಿ ತೀವ್ರ ಕುಸಿತ ಕಾಣುತ್ತಿವೆ.

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಕೋವಿಡ್ 2ನೇ ಅಲೆಯ ಅಬ್ಬರದ ನಡುವೆಯೂ ಕಳೆದ ತಿಂಗಳ ಮೊದಲ ಎರಡು ವಾರಗಳ ಕಾಲ ಹೆಚ್ಚಿನ ಮಟ್ಟದ ವಾಹನ ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಳೆದ 15 ದಿನಗಳಿಂದ ಕನಿಷ್ಠ ಪ್ರಮಾಣದ ವಾಹನಗಳನ್ನು ವಿತರಣೆ ಮಾಡಿದೆ.

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಟಾಟಾ ಮೋಟಾರ್ಸ್ ಕಂಪನಿಯು ಏಪ್ರಿಲ್ ತಿಂಗಳಿನಲ್ಲಿ ಒಟ್ಟು 25,095 ಪ್ರಯಾಣಿಕ ವಾಹನಗಳನ್ನು ವಿತರಣೆ ಮಾಡಿದ್ದು, ವಾಣಿಜ್ಯ ವಾಹನಗಳ ವಿಭಾಗದಲ್ಲಿ ಒಟ್ಟು 16,644 ಯುನಿಟ್‌ಗಳನ್ನು ವಿತರಿಸಿದೆ.

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಏಪ್ರಿಲ್‌ನಲ್ಲಿ ಒಟ್ಟು 39,530 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಮಾರ್ಚ್ ಅವಧಿಯ ವಾಹನ ಮಾರಾಟಕ್ಕೆ ಹೋಲಿಕೆ ಮಾಡಿದ್ದಲ್ಲಿ ಶೇ.41 ರಷ್ಟು ಕುಸಿತ ಕಂಡಿದೆ. ಮಾರ್ಚ್ ತಿಂಗಳಿನಲ್ಲಿ ಪ್ರಯಾಣಿಕ ಕಾರುಳು ಮತ್ತು ವಾಣಿಜ್ಯ ವಾಹನಗಳ ವಿಭಾಗದಲ್ಲಿ ಒಟ್ಟು 66,609 ಯುನಿಟ್ ವಿತರಣೆ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕರ ವಾಹಗಳಿಂತ ವಾಣಿಜ್ಯ ವಾಹನ ಮಾರಾಟದಲ್ಲಿ ಸಾಕಷ್ಟು ಕುಸಿತ ಅನುಭವಿಸುತ್ತಿದೆ.

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಕೋವಿಡ್ ಹೆಚ್ಚಿರುವ ಪರಿಣಾಮ ಮೇ ಅವಧಿಯಲ್ಲಿ ಹೊಸ ವಾಹನಗಳ ಮಾರಾಟವು ಇನ್ನಷ್ಟು ಕುಸಿತ ಕಾಣುವ ಸಾಧ್ಯತೆಗಳಿದ್ದು, ಕೋವಿಡ್ ಭೀತಿಯಿಂದ ಹಲವಾರು ವಾಹನ ಕಂಪನಿಗಳು ಉತ್ಪಾದನೆಯನ್ನೇ ಸ್ಥಗಿತಗೊಳಿಸಿವೆ.

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ವಾಹನ ಮಾರಾಟವನ್ನು ಸಹ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಹೊಸ ಸುರಕ್ಷಾ ಮಾರ್ಗಸೂಚಿ ಮಾರಾಟ ಮಾಡುತ್ತಿದ್ದು, ಹೊಸ ಡಿಜಿಟಲ್ ಪ್ಲ್ಯಾಟ್‌ಫಾರ್ಮ್‌ಗಳ ಮೂಲಕ ಗ್ರಾಹಕರನ್ನು ಶೋರೂಂ ಭೇಟಿಗೆ ಅವಕಾಶ ನೀಡದೆ ಮನೆ ಬಾಗಿಲಿಗೆ ವಾಹನಗಳನ್ನು ವಿತರಣೆ ಮಾಡಲಾಗುತ್ತಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಹನ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮಗಳೊಂದಿಗೆ ಕೆಲವೇ ಕೆಲವು ಕಂಪನಿಗಳು ಮಾತ್ರ ವಾಹನ ಉತ್ಪಾದನೆ ಕೈಗೊಳ್ಳುತ್ತಿವೆ.

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಇದರ ನಡುವೆ ಹೊಸ ವಾಹನಗಳ ಖರೀದಿಗೆ ಬುಕ್ಕಿಂಗ್ ಸಲ್ಲಿಕೆ ತೀವ್ರ ಕಂಡಿರುವುದಲ್ಲದೆ ಈಗಾಗಲೇ ಬುಕ್ಕಿಂಗ್ ಸಲ್ಲಿಕೆ ಮಾಡಿದ್ದ ಲಕ್ಷಾಂತರ ಹೊಸ ವಾಹನ ಖರೀದಿದಾರರು ಬುಕ್ಕಿಂಗ್ ಹಿಂಪಡೆಯುತ್ತಿದ್ದಾರೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕೋವಿಡ್ ಸಂಕಷ್ಟ: ಟಾಟಾ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ

ಸದ್ಯದ ಪರಿಸ್ಥಿತಿಯಲ್ಲಿ ಹೊಸ ವಾಹನ ಖರೀದಿಯು ಆರ್ಥಿಕ ಸಂಕಷ್ಟ ಇನ್ನಷ್ಟು ಹೆಚ್ಚಳವಾಗಬಹುದೆಂಬ ಭೀತಿಯಿಂದ ಹೊಸ ವಾಹನ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಈ ಪರಿಸ್ಥಿತಿ ಸುಧಾರಣೆಯಾಗಲು ಇನ್ನು ಕೆಲ ತಿಂಗಳುಗಳೇ ಬೇಕಾಗಬಹುದು ಎನ್ನಲಾಗುತ್ತಿದೆ.

Article Published On: Monday, May 3, 2021, 11:08 [IST]
English summary
Tata Motors Sales April 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+