ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಕಾರುಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಬೇಡಿಕೆಯೊಂದಿಗೆ ಉತ್ತಮವಾಗಿ ಮಾರಾಟವಾಗುತ್ತಿದೆ. ಇದರಲ್ಲಿ ಹೊಸ ಟಾಟಾ ಸಫಾರಿ ಎಸ್‍ಯುವಿಯು ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಈ ಸಫಾರಿ 7-ಸೀಟರ್ ಎಸ್‍ಯುವಿ ಮಾದರಿಯಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಕಳೆದ ತಿಂಗಳು ಭಾರತದಲ್ಲಿ ಸಫಾರಿಯ 1,730 ಯುನಿಟ್‌ಗಳನ್ನು ಮಾರಾಟಗೊಳಿಸಿದೆ. ಇನ್ನು ಇದೇ ವರ್ಷದ ಮೇ ತಿಂಗಳಿನಲ್ಲಿ ಸಫಾರಿ ಮಾದರಿಯ 1,536 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.13 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕರೋನಾ ಆತಂಕದ ನಡುವೆಯು ಸಫಾರಿ ಎಸ್‍ಯುವಿಯು ಭರ್ಜರಿಯಾಗಿ ಮಾರಾಟವಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಟಾಟಾ ಸಫಾರಿ ಮತ್ತು ಹ್ಯಾರಿಯರ್ ಎರಡನ್ನೂ ಬ್ರಾಂಡ್‌ನ ಒಮೆಗಾ ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗಿದೆ, ಇದನ್ನು ಲ್ಯಾಂಡ್ ರೋವರ್ ಡಿ8 ಪ್ಲಾಟ್‌ಫಾರ್ಮ್‌ನಿಂದ ಪಡೆಯಲಾಗಿದೆ. ಸಫಾರಿ ಎಸ್‍ಯುವಿಯು ಹ್ಯಾರಿಯರ್ ಮಾದರಿಯ ಮೂರು-ಸಾಲಿನ ಮಾದರಿಯಾಗಿದೆ

ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಈ ಎರಡು ಎಸ್‍ಯುವಿಗಳು ವಿನ್ಯಾಸ ಮತ್ತು ಫೀಚರ್ಸ್ ಗಳನ್ನು ಹಂಚಿಕೊಂಡಿದೆ. ಟಾಟಾ ಸಫಾರಿ ಎಸ್‍ಯುವಿಯಲ್ಲಿ ಅದೇ 2.0-ಲೀಟರ್, ಟರ್ಬೋಚಾರ್ಜ್ಡ್, ಇನ್-ಲೈ ನಾಲ್ಕು ಸಿಲಿಂಡರ್, ಎಂಜಿನ್‌ ಅನ್ನು ಅಳವಡಿಸಲಾಗಿದೆ

ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಈ ಎಂಜಿನ್ 168 ಬಿಹೆಚ್‌ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು ಸ್ಪೀಡ್ ಮ್ಯಾನುವಲ್ ಮತ್ತು ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಟಾಟಾ ಸಫಾರಿ ಎಸ್‍ಯುವಿಯ ಬೆಸ್ ರೂಪಾಂತರಗಳಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಹೊಂದಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಮಿಡ್ ರೂಪಾಂತರಗಳಲ್ಲಿ ಬೇಸ್ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳೊಂದಿಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ಒಳಗೊಂಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಇನ್ನು ಟಾಪ್ ಎಂಡ್‌ ರೂಪಾಂತರದಲ್ಲಿ ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ರೂಪಾಂತಗಳು ಮತ್ತು ಆರಂಭಿಕ ರೂಪಾಂತರಗಳಲ್ಲಿರುವ ಹಲವು ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್ ಫೀಚರ್ಸ್ ಅನ್ನು ಹೊಂದಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಟಾಟಾ ಸಫಾರಿ

ಇದರೊಂದಿಗೆ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ. ಟಾಪ್ ಎಂಡ್ ರೂಪಾಂತರದಲ್ಲಿ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್, ಮತ್ತು ಪನೊರಮಿಕ್ ಸನ್‌ರೂಫ್ ಅನ್ನು ಹೊಂದಿದೆ.

Article Published On: Tuesday, July 27, 2021, 12:34 [IST]
English summary
Tata Sold 1,730 Units Of Safari In India June 2021. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+