ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Tata Punch

ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಬಹುನಿರೀಕ್ಷಿತ ಟಾಟಾ ಪಂಚ್ ಅನ್ನು ಈ ವರ್ಷದ ಅಕ್ಟೋಬರ್‌ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು, ಈ ಟಾಟಾ ಪಂಚ್ ಕಾರು ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಮೈಕ್ರೋ ಎಸ್‌ಯುವಿಗಳಲ್ಲಿ ಒಂದಾಗಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಕಳೆದ ತಿಂಗಳು, ಟಾಟಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಮೈಕ್ರೋ-ಎಸ್‌ಯುವಿಯ ಒಟ್ಟು 6,110 ಯುನಿಟ್‌ಗಳನ್ನು ಮಾರಾಟ ಮಾಡಿದರು, ಇದು ನೆಕ್ಸಾನ್‌ನ ನಂತರ 2021ರ ನವೆಂಬರ್‌ನಲ್ಲಿ ಟಾಟಾದ ಸರಣಿಯಲ್ಲಿ ಪಂಚ್ ಅನ್ನು ಎರಡನೇ ಹೆಚ್ಚು ಮಾರಾಟವಾದ ಕಾರನ್ನು ಮಾಡಿದೆ. ಇನ್ನು ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಟಾಟಾ ಪಂಚ್ ಮೈಕ್ರೋ ಎಸ್‌ಯುವಿಯ8,453 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.27.72 ಕುಸಿತವನ್ನು ಕಂಡಿದೆ. ಯಾವುದೇ ವರ್ಷದಿಂದ ವರ್ಷಕ್ಕೆ ಹೋಲಿಕೆ ಮಾಡಲು ಸಾಧ್ಯವಿಲ್ಲ, ನಿಸ್ಸಂಶಯವಾಗಿ, ಪಂಚ್ ಅನ್ನು ಕೆಲವೇ ತಿಂಗಳುಗಳ ಹಿಂದೆ ಪ್ರಾರಂಭಿಸಲಾಯಿತು. ಕುತೂಹಲಕಾರಿಯಾಗಿ, ಪಂಚ್ ನಮ್ಮ ಮಾರುಕಟ್ಟೆಗೆ ಬಂದ ನಂತರ ಅಲ್ಟ್ರೋಜ್ ಕಾರಿನ ಮಾರಾಟವು ಕುಸಿತ ಕಂಡಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಟಾಟಾ ಪಂಚ್ ಮಾದರಿಯು ನೂತನ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿಯಾಗಿದೆ. ಇನ್ನು ಈ ಹೊಸ ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಹೊಸ ಕಾರು ಮೈಕ್ರೋ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ. ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ. ಈ ಕಾರಿನಲ್ಲಿ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಈ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಪವರ್ ಉತ್ಪಾದಿಸುತ್ತದೆ. ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ,

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಪಂಚ್ ಮೈಕ್ರೋ ಎಸ್‌ಯುವಿಯ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ. ಬೆಸ್ ರೂಪಾಂತರದಲ್ಲಿಯು ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಈ ಮೈಕ್ರೋ ಎಸ್‌ಯುವಿಯ ಪ್ಯೂರ್ ರೂಪಂತರದಲ್ಲಿ ಕಂಪನಿಯು ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಸ್ಯಾವಿ ಕಂಟ್ರೋಲ್, ಆರ್‌ಪಿಎಎಸ್, ಸೆಂಟ್ರೇಲ್ ಲಾಕಿಂಗ್ ಜೊತೆ ಕೀ, ಐಎಸಿ ಮತ್ತು ಇಎಸ್ಎಸ್ ಟೆಕ್ನಾಲಜಿ, ಫ್ರಂಟ್ ಪವರ್ ವಿಂಡೋ, ಟಿಲ್ಟ್ ಸ್ಟೀರಿಂಗ್, 90 ಡಿಗ್ರಿ ಡೋರ್ ಓಪನ್, ರಿಯರ್ ಪ್ಲ್ಯಾಟ್ ಫ್ಲೊರ್, ಬ್ಲ್ಯಾಕ್ ಒಡಿಹೆಚ್, ಹ್ಯುಮಿನಿಟಿ ಕ್ರೊಮ್ ಲೈನ್, ಪೆಟೆಂಡ್ ಬಂಪರ್, ಡೋರ್, ವೀಲ್ಹ್ ಆರ್ಚ್ ಮತ್ತು ಸಿಲ್ ಕ್ಲಾಡಿಂಗ್ ಜೋಡಣೆ ಮಾಡಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಅಕಾಂಪ್ಲಿಶೆಡ್ ರೂಪಾಂತರದಲ್ಲಿ ಹೊಂದಾಣಿಕೆ ಮಾಡಬಹುದಾದ 7 ಇಂಚಿನ ಹರ್ಮನ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆಂಡ್ರಾಯ್ಡ್ ಆಟೋ ಮತ್ತು ಆಟೋ ಕಾರ್ ಪ್ಲೇ, 4 ಸ್ಪೀಕರ್ಸ್ ಮತ್ತು 2 ಟ್ವಿಟರ್, ರಿಯರ್ ವ್ಯೂ ಕ್ಯಾಮೆರಾ, ಎಲ್ಇಡಿ ಟೈಲ್ ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್, ಆರ್15 ಹೈಪರ್ ಸ್ಟೈಲ್ ವ್ಹೀಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಒನ್ ಟಚ್ ಡೋರ್ ವಿಂಡೋ ಡೌನ್, ಕ್ರೂಸ್ ಕಂಟ್ರೋಲ್, ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಮತ್ತು ಸಿಟಿವಿ ಮಾದರಿಯಾಗಿ ಟ್ರಾಕ್ಷನ್ ಕಂಟ್ರೋಲ್ ಹೊಂದಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಇನ್ನು ಅಡ್ವೆಂಚರ್ ಮಾದರಿಯಲ್ಲಿ 4 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, 4 ಸ್ಪೀಕರ್ಸ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಯುಎಸ್‌ಬಿ ಚಾರ್ಜಿಂಗ್ ಫೋರ್ಟ್, ಎಲೆಕ್ಟ್ರಿಕ್ ಮೂಲಕ ಹೊಂದಾಣಿಕೆ ಮಾಡಿಕೊಳ್ಳಬಹುದಾದ ರಿಯರ್ ವ್ಯೂ ಮಿರರ್, ಆಲ್ ಪವರ್ ವಿಂಡೋ, ಫಾಲೋ ಮಿ ಹೋಂ ಹೆಡ್‌ಲ್ಯಾಂಪ್, ಆಂಟಿ ಗ್ಲೆರ್ ಐಆರ್‌ಎಂವಿ, ಸೆಂಟ್ರಲ್ ರಿಮೋಟ್ ಲಾಕಿಂಗ್ ಜೊತೆ ಫ್ಲಿಪ್ ಕೀ, ಫುಲ್ ವ್ಹೀಲ್ ಕವರ್ ಮತ್ತು ಬಾಡಿ ಕಲರ್ ರಿಯರ್ ವ್ಯೂ ಮಿರರ್ ನೀಡಲಾಗಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಹೈ ಎಂಡ್ ಮಾದರಿಯಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಆರ್16 ಡೈಮಂಡ್ ಕಟ್ ಅಲಾಯ್ ವ್ಹೀಲ್, ರೂಫ್ ರೈಲ್ಸ್, 7 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಹೆಡ್‌ಲ್ಯಾಂಪ್, ರೈನ್ ಸೆನ್ಸಿಂಗ್ ವೈಪರ್, ಆಟೋ ಫೋಡ್ಲಿಂಗ್ ರಿಯರ್ ವ್ಯೂ ಮಿರರ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್ ಸಿಸ್ಟಂ, ಕೂಲ್ಡ್ ಗ್ಲೊ ಬಾಕ್ಸ್, ರಿಯರ್ ವೈಪರ್ ಪ್ಲಸ್ ವಾಷ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ಹಿಂಬದಿಯ ಆಸನದಲ್ಲಿ ಆರ್ಮ್ ರೆಸ್ಟ್ ಮತ್ತು ಲೆದರ್ ಕೊಟಿಂಗ್ ಹೊಂದಿರುವ ಸ್ಟೀರಿಂಗ್ ಮತ್ತು ಗೇರ್ ನಾಬ್ ನೀಡಲಾಗಿದೆ.

ನವೆಂಬರ್‌ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Punch

ಈ ಕಾರು ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಹೊಸ ಟಾಟಾ ಪಂಚ್ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್ ಮತ್ತು 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಅನ್ನು ಹೊಂದಿದೆ.

Most Read Articles

Kannada
English summary
Tata motors sold over 6100 of punch micro suv in november 2021 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X