ಆಲ್‌ಟ್ರೊಜ್, ನೆಕ್ಸಾನ್ ಮತ್ತು ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಆರಂಭಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವಾರವಷ್ಟೇ ತನ್ನ ಜನಪ್ರಿಯ ಕಾರು ಮಾದರಿಗಳಾದ ಆಲ್‌ಟ್ರೊಜ್, ನೆಕ್ಸಾನ್, ನೆಕ್ಸಾನ್ ಇವಿ ಮತ್ತು ಹ್ಯಾರಿಯರ್ ಕಾರುಗಳ ಡಾರ್ಕ್ ಎಡಿಷನ್‌ಗಳನ್ನು ಬಿಡುಗಡೆ ಮಾಡಿದ್ದು, ಕಂಪನಿಯು ಇದೀಗ ಹೊಸ ಆವೃತ್ತಿಗಳ ವಿತರಣೆಗೆ ಚಾಲನೆ ನೀಡಿದೆ.

ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಶುರು

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಕಾರು ಮಾದರಿಗಳಲ್ಲಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದ್ದು, ಆಲ್‌ಟ್ರೊಜ್, ನೆಕ್ಸಾನ್, ನೆಕ್ಸಾನ್ ಇವಿ ಮತ್ತು ಹ್ಯಾರಿಯರ್ ಮಾದರಿಗಳ ಹೊಸ ಬಣ್ಣದ ಆಯ್ಕೆಯೊಂದಿಗೆ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗುವ ನೀರಿಕ್ಷೆಗಳಿವೆ.

ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಶುರು

ಹ್ಯಾರಿಯರ್ ಮಾದರಿಯ ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ಮಾದರಿಗಳಲ್ಲಿ ಈಗಾಗಲೇ ಡಾರ್ಕ್ ಎಡಿಷನ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಬದಲಾವಣೆಯೊಂದಿಗೆ ಹ್ಯಾರಿಯರ್, ನೆಕ್ಸಾನ್, ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಆಲ್‌ಟ್ರೊಜ್ ಕಾರುಗಳಲ್ಲೂ ಹೊಸ ಬಣ್ಣದ ಆಯ್ಕೆ ನೀಡಲಾಗಿದೆ.

ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಶುರು

ಆಲ್‌ಟ್ರೊಜ್ ಡಾರ್ಕ್ ಎಡಿಷನ್ ಮಾದರಿಯು ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.8.71 ಲಕ್ಷ, ನೆಕ್ಸಾನ್ ಡಾರ್ಕ್ ಎಡಿಷನ್ ರೂ.10.40 ಲಕ್ಷ, ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ರೂ.15.99 ಲಕ್ಷ, ಹ್ಯಾರಿಯರ್ ಡಾರ್ಕ್ ಎಡಿಷನ್ ರೂ.18.04 ಲಕ್ಷ ಬೆಲೆ ಹೊಂದಿವೆ.

ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಶುರು

ಆಲ್‌ಟ್ರೊಜ್ ಡಾರ್ಕ್ ಎಡಿಷನ್ ಮಾದರಿಯು ಟಾಪ್ ಎಂಡ್ ರೂಪಾಂತರವಾದ ಎಕ್ಸ್‌ಜೆಡ್ ಪ್ಲಸ್ ಅನ್ನು ಆಧರಿಸಿದ್ದು, 1.2-ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯಲ್ಲಿ ಹೊಸ ಆವೃತ್ತಿಯನ್ನು ಪರಿಚಯಿಸಲಾಗಿದೆ.

ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಶುರು

ಡಾರ್ಕ್ ಎಡಿಷನ್‌ಗಳಲ್ಲಿ ಸ್ಟ್ಯಾಂಡರ್ಡ್ ಮಾದರಿಗಳಲ್ಲಿರುವ ತಾಂತ್ರಿಕ ಅಂಶಗಳ ಜೊತೆಗೆ ಹೆಚ್ಚುವರಿಯಾಗಿ ಕಾಸ್ಮೊ ಡಾರ್ಕ್ ಬಣ್ಣದ ಆಯ್ಕೆ ಜೊತೆ ಕಾರಿನ ಎರಡು ಬದಿಯಲ್ಲಿ ಡಾರ್ಕ್ ಎಡಿಷನ್ ಬ್ಯಾಡ್ಜ್, ಕಪ್ಪು ಬಣ್ಣದಿಂದ ಕೂಡಿರುವ ಇಂಟಿರಿಯರ್ ಮತ್ತು ಡಾರ್ಕ್ ಎಡಿಷನ್ ಬ್ಯಾಡ್ಜ್ ಹೊಂದಿರುವ ಕಪ್ಪು ಬಣ್ಣದ ಆಸನಗಳನ್ನು ಪಡೆದುಕೊಂಡಿವೆ.

ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಶುರು

ನೆಕ್ಸಾನ್ ಕಾರಿನ ಡಾರ್ಕ್ ಎಡಿಷನ್‌ಗಳನ್ನು ಎಕ್ಸ್‌ಜೆಡ್ ಪ್ಲಸ್, ಎಕ್ಸ್‌ಜೆಡ್ಎ ಪ್ಲಸ್, ಎಕ್ಸ್‌ಜೆಡ್ ಪ್ಲಸ್(ಒ) ಮತ್ತು ಎಕ್ಸ್‌ಜೆಡ್ಎ ಪ್ಲಸ್(ಒ) ಎಂಬ ರೂಪಾಂತರಗಳಲ್ಲಿ ಪರಿಚಯಿಸಲಾಗಿದ್ದು, ಇವುಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ. ಹೊಸ ಮಾದರಿಗಳ ಹೊರಭಾಗದಲ್ಲಿ ಅಟ್ಲಾಸ್ ಬ್ಲ್ಯಾಕ್ ಬಣ್ಣವನ್ನು ನೀಡಲಾಗಿದ್ದು, ಇದರಲ್ಲಿ 16-ಇಂಚಿನ 'ಚಾರ್ಕೋಲ್' ಅಲಾಯ್ ವ್ಹೀಲ್ಸ್ ಜೋಡಿಸಲಾಗಿದೆ.

ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಶುರು

ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಅನ್ನು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲುಕ್ಸ್ ಎಂಬ ಎರಡೂ ರೂಪಾಂತರಗಳಲ್ಲಿ ಪರಿಚಯಿಸಲಾಗಿದ್ದು, ಸ್ಟ್ಯಾಂಡರ್ಡ್ ಫೀಚರ್ಸ್ ಜೊತೆಗೆ ಡಾರ್ಕ್ ಎಡಿಷನ್ ಹೊರಭಾಗದಲ್ಲಿ 16-ಇಂಚಿನ 'ಚಾರ್ಕೋಲ್' ಅಲಾಯ್ ವ್ಹೀಲ್ಸ್, ಸ್ಯಾಟಿನ್ ಬ್ಲ್ಯಾಕ್ ಲೈನ್ ಗಳನ್ನು ನೀಡಲಾಗಿದೆ.

ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಡಾರ್ಕ್ ಎಡಿಷನ್ ವಿತರಣೆ ಶುರು

ಇನ್ನು ಹ್ಯಾರಿಯರ್ ಡಾರ್ಕ್ ಎಡಿಷನ್ ಮಾದರಿಯು 2020ರಿಂದಲೇ ಮಾರಾಟಕ್ಕೆ ಲಭ್ಯವಿದ್ದು, ಇದೀಗ ಕೆಲವು ಹೊಸ ನವೀಕರಣಗಳನ್ನು ಪರಿಚಯಿಸಲಾಗಿದೆ. ಹ್ಯಾರಿಯರ್ ಡಾರ್ಕ್ ಎಡಿಷನ್ ಮಾದರಿಯು ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ಎ ಪ್ಲಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ.18.04 ಲಕ್ಷ ಬೆಲೆ ಹೊಂದಿವೆ.

Image Courtesy: Tata car owners/Instagram

Most Read Articles

Kannada
English summary
Tata Dark Edition Delivery Starts. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X