ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ ಪಟ್ಟಿ

ಆಟೋ ಬಿಡಿಭಾಗಗಳ ದರ ಹೆಚ್ಚಳ ಪರಿಣಾಮ ವಿವಿಧ ಕಾರು ಉತ್ಪಾದನಾ ಕಂಪನಿಗಳು ತಮ್ಮ ಹೊಸ ವಾಹನ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಳ ಮಾಡುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ಅಗಸ್ಟ್ 1ರಿಂದಲೇ ಬೆಲೆ ಹೆಚ್ಚಳ ಮಾಡಲು ನಿರ್ಧರಿಸಿದೆ.

ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ

ಹೊಸ ವಾಹನಗಳ ದರ ಪರಿಷ್ಕರಣೆಯ ಮಾನದಂಡಗಳನ್ನು ಬದಲಾವಣೆ ಮಾಡಿರುವ ಆಟೋ ಉತ್ಪಾದನಾ ಕಂಪನಿಗಳು ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಹೆಚ್ಚುತ್ತಿವೆ. ಬಿಡಿಭಾಗಗಳು ದುಬಾರಿಯಾಗುತ್ತಿರುವುದರಿಂದ ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿದ್ದು, ವಾಹನ ಮಾಲೀಕತ್ವವು ಮತ್ತಷ್ಟು ಹೊರೆಯಾಗಿ ಪರಿಣಮಿಸುತ್ತಿದೆ.

ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ಉತ್ಪಾದನಾ ವೆಚ್ಚದ ಆಧಾರದ ಮೇಲೆ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚ ನಿರ್ವಹಣೆಗಾಗಿ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಳ ಮಾಡುತ್ತಿವೆ.

ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ

ಬಹುತೇಕ ವಾಹನ ಉತ್ಪಾದನಾ ಕಂಪನಿಗಳು 2021ರಲ್ಲೇ ಎರಡರಿಂದ ಮೂರು ಬಾರಿ ದರ ಹೆಚ್ಚಿಸಿದ್ದು, ಇದೀಗ ಮತ್ತೆ ಬೆಲೆ ಹೆಚ್ಚಿಸಲು ನಿರ್ಧರಿಸಿವೆ. ಇದರಿಂದ ಕಾರು ಮಾಲೀಕತ್ವವು ಸಾಕಷ್ಟು ದುಬಾರಿಯಾಗುತ್ತಿದ್ದು, ಹೊಸ ವಾಹನ ಬಿಡಿಭಾಗಗಳ ಉತ್ಪಾದನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ದರ ಸಮರಕ್ಕೆ ಪ್ರಮುಖ ಕಾರಣವಾಗಿದೆ.

ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ

ಹೊಸ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಶೇ. 1.50ರಿಂದ ಶೇ.2 ರಷ್ಟು ಬೆಲೆ ಹೆಚ್ಚುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ.50 ಸಾವಿರದಿಂದ ರೂ.1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 80 ಸಾವಿರದಿಂದ ರೂ. 1.50 ಲಕ್ಷದವರೆಗೆ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮ ಹೊಸ ವಾಹನ ಖರೀದಿಯು ದುಬಾರಿಯಾಗುತ್ತಿದೆ.

ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ

ಕಳೆದ ಜನವರಿ ಮತ್ತು ಏಪ್ರಿಲ್‌ನಲ್ಲಿ ದರ ಹೆಚ್ಚಳ ಮಾಡಿದ್ದ ಟಾಟಾ ಕಂಪನಿಯು ಇದೀಗ ಅಗಸ್ಟ್ 1ರಿಂದ ಮತ್ತೆ ಬೆಲೆ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ದರಪಟ್ಟಿಯ ಪ್ರಮುಖ ಕಾರು ಮಾದರಿಗಳು ಶೇ.1.50ರಿಂದ ಶೇ.2ರಷ್ಟು ದುಬಾರಿಯಾಗುವ ಸಾಧ್ಯತೆಗಳಿವೆ.

ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ

ಇನ್ನು ಹೊಸ ವಾಹನ ಮಾರಾಟವು ಕಳೆದ ಎರಡು ತಿಂಗಳ ನಂತರ ಮೊದಲ ಬಾರಿಗೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ದೇಶದ ಮುಂಚೂಣಿ ಕಾರು ತಯಾರಿಕಾ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಪ್ರಮುಖ ಕಾರುಗಳ ಖರೀದಿಯನ್ನು ಉತ್ತೇಜಿಸಲು ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದೆ.

ಶೀಘ್ರದಲ್ಲೇ ಪ್ರಕಟವಾಗಲಿದೆ ಟಾಟಾ ಕಾರುಗಳ ಹೊಸ ದರ

ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಸದ್ಯ ಮೂರನೇ ಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ತಿಂಗಳು ಕೋವಿಡ್ 2ನೇ ಅಲೆ ಪರಿಣಾಮ ತಗ್ಗಿರುವ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

Most Read Articles

Kannada
English summary
Tata Motors To Hike Prices Of Entire Passenger Vehicles.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X