ಅಗಸ್ಟ್ 1ರಿಂದಲೇ ಟಾಟಾ ಕಾರುಗಳ ಬೆಲೆ ಮತ್ತಷ್ಟು ದುಬಾರಿ
ಹೆಚ್ಚುತ್ತಿರುವ ಆಟೋ ಬಿಡಿಭಾಗಗಳ ಬೆಲೆ ಪರಿಣಾಮ ವಿವಿಧ ಕಾರು ಉತ್ಪಾದನಾ ಕಂಪನಿಗಳು ತಮ್ಮ ಹೊಸ ವಾಹನ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಳ ಮಾಡುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ಅಗಸ್ಟ್ 1ರಿಂದಲೇ ಬೆಲೆ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿದೆ.

ಹೊಸ ವಾಹನಗಳ ದರ ಪರಿಷ್ಕರಣೆಯ ಮಾನದಂಡಗಳನ್ನು ಬದಲಾವಣೆ ಮಾಡಿರುವ ಆಟೋ ಉತ್ಪಾದನಾ ಕಂಪನಿಗಳು ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ವಾಹನಗಳ ಬೆಲೆ ಹೆಚ್ಚುತ್ತಿವೆ. ಬಿಡಿಭಾಗಗಳು ದುಬಾರಿಯಾಗುತ್ತಿರುವುದರಿಂದ ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿರುವುದ್ದು, ವಾಹನ ಮಾಲೀಕತ್ವವು ಮತ್ತಷ್ಟು ಹೊರೆಯಾಗಿ ಪರಿಣಮಿಸಲಿದೆ.

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ಉತ್ಪಾದನಾ ವೆಚ್ಚದ ಆಧಾರದ ಮೇಲೆ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚ ನಿರ್ವಹಣೆಗಾಗಿ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಳ ಮಾಡುತ್ತಿವೆ.

ಕಳೆದ ಜನವರಿಯಿಂದ ಇದುವರೆಗೆ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಎರಡು ಬಾರಿ ದರ ಹೆಚ್ಚಿಸಿದ್ದು, ಇದೀಗ ಮೂರನೇ ಬಾರಿಗೆ ಬೆಲೆ ಹೆಚ್ಚಿಸಲು ನಿರ್ಧರಿಸಿವೆ. ಇದರಿಂದ ಕಾರು ಮಾಲೀಕತ್ವವು ಸಾಕಷ್ಟು ದುಬಾರಿಯಾಗುತ್ತಿದ್ದು, ಹೊಸ ವಾಹನ ಬಿಡಿಭಾಗಗಳ ಉತ್ಪಾದನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ.

ಹೊಸ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಶೇ. 1.50ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 50 ಸಾವಿರದಿಂದ ರೂ.1 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 70 ಸಾವಿರದಿಂದ ರೂ. 1.50 ಲಕ್ಷದವರೆಗೆ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮ ಹೊಸ ವಾಹನ ಖರೀದಿಯು ದುಬಾರಿಯಾಗುತ್ತಿದೆ.

ಕಳೆದ ಜನವರಿ ಮತ್ತು ಏಪ್ರಿಲ್‌ನಲ್ಲಿ ದರ ಹೆಚ್ಚಳ ಮಾಡಿದ್ದ ಟಾಟಾ ಕಂಪನಿಯು ಅಗಸ್ಟ್ 1ರಿಂದ ಮತ್ತೆ ಬೆಲೆ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ದರಪಟ್ಟಿಯ ಪ್ರಮುಖ ಕಾರು ಮಾದರಿಗಳು ಶೇ.1.50ರಿಂದ ಶೇ.2ರಷ್ಟು ದುಬಾರಿಯಾಗುವ ಸಾಧ್ಯತೆಗಳಿವೆ.

ಇನ್ನು ಕೋವಿಡ್ 2ನೇ ಅಲೆಯ ಪರಿಣಾಮ ಮೇ ಮತ್ತು ಜೂನ್ ಆರಂಭದಲ್ಲಿ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನೆಲಕಚ್ಚಿದ ಪರಿಣಾಮ ಆಟೋ ಉದ್ಯಮವು ಸಹ ಹಿನ್ನಡೆ ಅನುಭವಿಸಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನಗಳ ಮಾರಾಟದಲ್ಲಿ ತುಸು ಚೇತರಿಕೆ ಕಂಡುಬಂದಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕೋವಿಡ್ ಪರಿಣಾಮ ಮೇ ತಿಂಗಳ ಅವಧಿಯಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಕುಸಿತ ಕಂಡಿದ್ದರೂ ಜೂನ್ ಅವಧಿಯ ಕಾರು ಮಾರಾಟದಲ್ಲಿ ತುಸು ಸುಧಾರಣೆ ಕಂಡಿದ್ದು, ಟಾಟಾ ಕಂಪನಿಯ ಜೂನ್ ತಿಂಗಳ ಕಾರು ಮಾರಾಟವು ಕಳೆದ ವರ್ಷದ ಜೂನ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ. 113 ರಷ್ಟು ಬೆಳವಣಿಗೆ ಸಾಧಿಸಿದೆ.

ಕೋವಿಡ್ ಪರಿಣಾಮ ಮಾರಾಟದಲ್ಲಿ ತೀವ್ರ ಕುಸಿತದ ನಂತರ ಇದೀಗ ಆರ್ಥಿಕ ಚಟುವಟಿಕೆಗಳು ಸುಧಾರಣೆಗೊಳ್ಳುತ್ತಿರುವ ಪರಿಣಾಮ ವಾಹನ ಮಾರಾಟದಲ್ಲಿ ಏರಿಕೆ ಕಂಡುಬಂದಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಜೂನ್ ಅವಧಿಯಲ್ಲಿ ಒಟ್ಟು 43,704 ವಾಹನಗಳನ್ನು ಮಾರಾಟ ಮಾಡಿದೆ.


Click it and Unblock the Notifications