10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಭಾರತದ ಜನಪ್ರಿಯ ಆಟೋ ಮೊಬೈಲ್ ಕಂಪನಿಗಳಲ್ಲಿ ಒಂದಾದ ಟಾಟಾ ಮೋಟಾರ್ಸ್ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಟಾಟಾ ನೆಕ್ಸಾನ್ ಇವಿ ಕೈಗೆಟುಕುವ ಬೆಲೆಯನ್ನು ಹೊಂದಿರುವ ಕಾರಣ ಹೆಚ್ಚು ಹೆಚ್ಚು ಜನರು ಈ ಎಲೆಕ್ಟ್ರಿಕ್ ಕಾರ್ ಅನ್ನು ಖರೀದಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಇನ್ನೂ ಹತ್ತು ಹೊಸ ಎಲೆಕ್ಟ್ರಿಕ್ ವಾಹನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಈ ಎಲ್ಲಾ ಹೊಸ ವಾಹನಗಳನ್ನು ಬಿಡುಗಡೆ ಮಾಡುವ ಕೆಲಸ 2025ರ ವೇಳೆಗೆ ಆರಂಭವಾಗಲಿದೆ ಎಂದು ಕಂಪನಿಯ ಹಿರಿಯ ಕಾರ್ಯನಿರ್ವಾಹಕ ಎನ್.ಚಂದ್ರಶೇಖರನ್ ತಿಳಿಸಿದ್ದಾರೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸಲು ಯುರೋಪಿಯನ್ ಸೆಲ್ ಆಧಾರಿತ ಬ್ಯಾಟರಿ ತಯಾರಕ ಕಂಪನಿಯೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕಳೆದ ಒಂದು ವರ್ಷದ ಅವಧಿಯಲ್ಲಿ ಟಾಟಾ ನೆಕ್ಸಾನ್ ಇವಿಯ 4,000ಕ್ಕೂ ಹೆಚ್ಚು ಯುನಿಟ್'ಗಳು ಮಾರಾಟವಾಗಿವೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಟಾಟಾ ಮೋಟಾರ್ಸ್ ಕಂಪನಿಯು 2025ರ ವೇಳೆಗೆ 10 ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಸಾಫ್ಟ್‌ವೇರ್ ಹಾಗೂ ಎಂಜಿನಿಯರಿಂಗ್ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯಲ್ಲಿದೆ ಎಂದು ಟಾಟಾ ಮೋಟಾರ್ಸ್ ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಜಾಗತಿಕ ಮಾರುಕಟ್ಟೆಗೆ ಅನುಗುಣವಾಗಿ ಕನೆಕ್ಟೆಡ್ ಹಾಗೂ ಅಟಾನಾಮಸ್ ವಾಹನಗಳನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯಲ್ಲಿದೆ. ಕಂಪನಿಯು ತನ್ನ ಜಾಗ್ವಾರ್ ಲ್ಯಾಂಡ್ ರೋವರ್ ಬ್ರಾಂಡ್ ಅಡಿಯಲ್ಲಿ ಮಾರಾಟಕ್ಕೆ ಲಭ್ಯವಿರುವ ಎಲ್ಲಾ ವಾಹನ ಮಾದರಿಗಳನ್ನು ಎಲೆಕ್ಟ್ರಿಕ್ ಆವೃತ್ತಿಗೆ ಪರಿವರ್ತಿಸಲು ನಿರ್ಧರಿಸಿದೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಈ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ಉತ್ಪಾದಿಸಲು ನಿರ್ಧರಿಸಿದೆ.

10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟಾಟಾ ಮೋಟಾರ್ಸ್

ಇದಕ್ಕಾಗಿ ಟಾಟಾ ಮೋಟಾರ್ಸ್ 2030ರ ಗಡುವನ್ನು ನಿಗದಿಪಡಿಸಿದೆ. 2025ರ ವೇಳೆಗೆ ಎಲೆಕ್ಟ್ರಿಕ್ ವಾಹನ ಉತ್ಪಾದನೆಯನ್ನು 60%ಗೆ ಹೆಚ್ಚಿಸುವ ಗುರಿಯನ್ನು ಕಂಪನಿ ಹೊಂದಿದೆ. ಟಾಟಾ ನೆಕ್ಸಾನ್ ಇವಿಯ ಬೆಲೆ ಎಕ್ಸ್‌ಶೋರೂಂ ದರದಂತೆ ರೂ.13.99 ಲಕ್ಷಗಳಾಗಿದೆ.

Most Read Articles

Kannada
English summary
Tata Motors to launch 10 new electric cars by 2025. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X