ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಉನ್ನತೀಕರಿಸಿದ್ದು, ಕಂಪನಿಯು ನೆಕ್ಸಾನ್ ಕಾರಿನ ಬಣ್ಣದ ಆಯ್ಕೆ ಬದಲಾವಣೆಯೊಂದಿಗೆ ಕೆಲವು ಹೊಸ ತಾಂತ್ರಿಕ ಅಂಶಗಳನ್ನು ಉನ್ನತೀಕರಿಸಲಿದೆ.

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

ನೆಕ್ಸಾನ್ ಕಾರಿಗಾಗಿ ಹೊಸ ಬಣ್ಣದ ಆಯ್ಕೆಯೊಂದಿಗೆ ಹೊಸ ವಿನ್ಯಾಸದ 16-ಇಂಚಿನ ಅಲಾಯ್ ವೀಲ್ಹ್ ಜೋಡಣೆ ಮಾಡುವ ಸುಳಿವು ನೀಡಿದ್ದು, ಉನ್ನತೀಕರಿಸಿದ ಮಾದರಿಯು ಅರಿಜೋನಾ ಬ್ಲ್ಯೂ ಬಣ್ಣದ ಆಯ್ಕೆಯನ್ನು ಹೊಸ ಅಲಾಯ್ ವೀಲ್ಹ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಕಾರು ಉತ್ಪನ್ನಗಳಲ್ಲಿ ಪ್ರತಿ ಎರಡು ತಿಂಗಳಿಗೆ ಒಂದು ಬಾರಿ ಹೊಸ ಬದಲಾವಣೆಗಳನ್ನು ಪರಿಚಯಿಸುವ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಯೋಜನೆಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗುತ್ತಿರುವುದಲ್ಲದೆ ಬೇಡಿಕೆ ಕಾಯ್ದುಕೊಳ್ಳಲು ನೆರವಾಗುತ್ತಿದೆ.

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಬದಲಾವಣೆಗಳೊಂದಿಗೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದೆ.

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಶೀಘ್ರದಲ್ಲೇ ತನ್ನ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಕಾರು ಮಾದರಿಗಾಗಿ ಮತ್ತಷ್ಟು ಬೇಡಿಕೆ ಕಾಯ್ದಕೊಳ್ಳುವ ನಿಟ್ಟಿನಲ್ಲಿ ಹೊಸ ಬಣ್ಣದ ಆಯ್ಕೆ, ಹೊಸ ವಿನ್ಯಾಸದ 16 ಇಂಚಿನ ಅಲಾಯ್ ವೀಲ್ಹ್ ಮತ್ತು ವಾಯ್ಸ್ ಅಸಿಸ್ಟ್ ಸಿಸ್ಟಂ ಸೌಲಭ್ಯದಲ್ಲೂ ಗುರುತರ ಬದಲಾವಣೆ ತರಲು ಸಿದ್ದವಾಗಿದೆ.

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

ಟಾಟಾ ಕಂಪನಿಯು ಹೊಸ ಕಾರುಗಳನ್ನು OMEGA ಕಾರು ಉತ್ಪಾದನಾ ತಂತ್ರಜ್ಞಾನದಡಿಯಲ್ಲಿ ಕಾರು ಅಭಿವೃದ್ದಿ ಮಾಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿನ ನೆಕ್ಸಾನ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

vಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನಕ್ಕೇರಿರುವ ಟಾಟಾ ಕಂಪನಿಯು ಕೋವಿಡ್ ಬಿಕ್ಕಟ್ಟಿನ ನಡುವೆಯೂ ಹೊಸ ಮಾರ್ಗಸೂಚಿಯೊಂದಿಗೆ ಉದ್ಯಮ ಪ್ರಕ್ರಿಯೆಗಳನ್ನು ಕೈಗೊಂಡಿದ್ದು,ನೆಕ್ಸಾನ್ ಕಾರು ಮಾದರಿಯ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸಾಕಷ್ಟು ಮುಂಚೂಣಿ ಸಾಧಿಸುತ್ತಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

2020ರ ಆರಂಭದಲ್ಲಿ ಪ್ರತಿ ತಿಂಗಳಿಗೆ 2500ರಿಂದ 3 ಸಾವಿರ ಯುನಿಟ್ ಮಾತ್ರ ಮಾರಾಟವಾಗಿದ್ದ ನೆಕ್ಸಾನ್ ಕಾರು ಮಾದರಿಯು ಇದೀಗ ಪ್ರತಿ ತಿಂಗಳು 6 ಸಾವಿರ 7 ಸಾವಿರ ಯುನಿಟ್ ಸರಾಸರಿಯಾಗಿ ಮಾರಾಟಗೊಳ್ಳುತ್ತಿದೆ.

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದ್ದು, ಸ್ವದೇಶಿ ಕಂಪನಿಗಳ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಒಲವು ತೋರುತ್ತಿರುವುದು ಕೂಡಾ ಟಾಟಾ ಕಾರುಗಳ ಮಾರಾಟ ಬೆಳವಣಿಗೆ ಮತ್ತೊಂದು ಕಾರಣವಾಗಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಬಿಡುಗಡೆಯಾಗಲಿದೆ ನವೀಕೃತ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ

ಇನ್ನು ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.09 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.79 ಲಕ್ಷ ಬೆಲೆ ಹೊಂದಿದೆ.

More from DriveSpark

Article Published On: Saturday, May 29, 2021, 17:05 [IST]
English summary
Tata Motors Updated Nexon With New 16-Inch Five-Spoke Alloy Wheels. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+