ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

Tata Motors ಕಂಪನಿಯ Nexon Ev ಮೂಲಕ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪನಿಯು ಶೀಘ್ರದಲ್ಲೇ ಉನ್ನತೀಕರಿಸಿದ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

Nexon EV ಕಾರಿನ ಎಲೆಕ್ಟ್ರಿಕ್ ಮೋಟಾರ್ ಉನ್ನತೀಕರಿಸುವ ಮೂಲಕ ಕಾರಿನ ಪರ್ಫಾಮೆನ್ಸ್ ಹೆಚ್ಚಿಸಲಾಗುತ್ತಿದ್ದು, ಉನ್ನತೀಕರಿಸಿದ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ 7 ಬಿಎಚ್‌ಪಿ ಹೆಚ್ಚುವರಿ ಶಕ್ತಿ ಪೂರೈಕೆಯೊಂದಿಗೆ ಕಾರಿನ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ Nexon EV ಮಾದರಿಯಲ್ಲಿ Tata Motors ಕಂಪನಿಯು 95kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, 30kWh ಲಿಥೀಯಂ ಅಯಾನ್ ಬ್ಯಾಟರಿ ಮೂಲಕ 127 ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ಇದೀಗ ಸುಧಾರಿತ ತಂತ್ರಜ್ಞಾನದೊಂದಿಗೆ ಉನ್ನತೀಕರಿಸಲಾಗುತ್ತಿರುವ Nexon EV ಮಾದರಿಯು ಪ್ರಸ್ತುತ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ 95kW ಎಲೆಕ್ಟ್ರಿಕ್ ಮೋಟಾರ್ ಮೂಲಕವೇ 134 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನದಲ್ಲಿ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿರುವುದೇ ಹೊಸ ಕಾರಿನ ಪರ್ಫಾಮೆನ್ಸ್ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ಜಿಪ್‌ಟ್ರಾನ್ ತಂತ್ರಜ್ಞಾನವು Tata Motors ಕಂಪನಿಯನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವಂತೆ ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಕಾರ್ಯಕ್ಷಮತೆ, ಬ್ಯಾಟರಿ ದಕ್ಷತೆ ಮತ್ತು ಗ್ರಾಹಕರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಯಲ್ಲಿ ಸಹಕಾರಿಯಾಗುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ನವೀಕೃತ Nexon EV ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ಜೊತೆಗೆ ಜಿಪ್‌ಟ್ರಾನ್ ತಂತ್ರಜ್ಞಾನವು ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿ ಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲದ ಬಾಳಿಕೆಗೆ ಸಹಕರಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ನವೀಕರಿಸಲಾದ Nexon EV ಮೂಲಕ Tata Motors ಕಂಪನಿಯು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವಂತೆಯೇ ವೆರಿಯೆಂಟ್ ಮತ್ತು ಫೀಚರ್ಸ್‌ಗಳನ್ನು ಮುಂದುವರಿಸಲಾಗುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ಹೊಸ ಮಾದರಿಯಲ್ಲಿ ಕೇವಲ ಸುಧಾರಿತ ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯವನ್ನು ಮಾತ್ರ ಬದಲಾವಣೆ ಮಾಡಲಾಗುತ್ತಿದ್ದು, ಹೊಸ ಕಾರು XM, XZ+ ಮತ್ತು XZ+ LUX ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ನವೀಕರಿಸಲಾದ Nexon EV ಮಾದರಿಯಲ್ಲಿ ಪರ್ಫಾಮೆನ್ಸ್ ಹೆಚ್ಚಳ ಮಾಡಲಾಗಿದ್ದರೂ ಕಾರಿನ ಮೈಲೇಜ್‌ ಮೇಲೆ ಪರಿಣಾಮ ಉಂಟು ಮಾಡದಂತೆ ಉನ್ನತೀಕರಿಸಲಾಗಿದ್ದು, ARAI ಸಂಸ್ಥೆಯು ಪ್ರಮಾಣಿಕರಿಸದಂತೆ ಹೊಸ ಕಾರು Eco ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ಹೊಸ ಕಾರಿನಲ್ಲಿ ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಸುಲಭವಾಗಿ ನಿಗದಿತ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, ಹೊಸ ಕಾರು ಅತಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.65 ಲಕ್ಷ ಬೆಲೆ ಪಡೆದುಕೊಂಡಿದ್ದು, ನವೀಕೃತ ಮಾದರಿಯು ಪ್ರಸ್ತುತ ಮಾದರಿಯ ಬೆಲೆಗಿಂತ ರೂ. 10 ಸಾವಿರ ರೂ.20 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

Tata ಕಂಪನಿಯು Nexon EV ಕಾರಿನ ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಗರಿಷ್ಠ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ಸ್ ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಬಳಕೆಯನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಗಮನಹರಿಸುತ್ತಿರುವುದು ಮಹತ್ವದ ಬೆಳವಣಿಗೆ ಕಾರಣವಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಪೂರಕವಾಗಿ ಹಲವಾರು ಹೊಸ ನೀತಿಗಳನ್ನು ಜಾರಿಗೆ ಮಾಡಿರುವುದು ಉತ್ತಮ ಬೆಳವಣಿಗೆ ಕಂಡುಬರುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವರ್‌ಫುಲ್ ಎಲೆಕ್ಟ್ರಿಕ್ ಮೋಟಾರ್ ಪ್ರೇರಿತ Tata Nexon EV

ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾಗುತ್ತಿರುವ ಸಬ್ಸಡಿ ಯೋಜನೆಗಳು ಮತ್ತು ಜಿಎಸ್‌ಟಿ ವಿನಾಯ್ತಿಯು ಇವಿ ವಾಹನಗಳ ಅಳವಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ಡೀಸೆಲ್ ಮತ್ತು ಪೆಟ್ರೋಲ್ ವಾಹನ ನಿರ್ವಹಣೆಗಿಂತಲೂ ಇವಿ ವಾಹನಗಳ ನಿರ್ವಹಣೆಯು ಸುಮಾರು ಶೇ.60 ಕ್ಕಿಂತ ಕಡಿಮೆಯಾಗಿರುವುದಲ್ಲದೆ ಮಾಲಿನ್ಯ ಪ್ರಮಾಣಕ್ಕೂ ಕಡಿವಾಣ ಹಾಕಬಹುದಾಗಿದೆ.

Most Read Articles

Kannada
English summary
Tata motors will be upgrading the 2021 nexon ev s ziptron powertrain soon details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X