Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಹೊಸ ಮಾದರಿಯ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಪಂಚ್(Punch) ಮೈಕ್ರೊ ಎಸ್‌ಯುವಿ ಬಿಡುಗಡೆಯ ಸಿದ್ದತೆಯಲ್ಲಿದ್ದು, ಕಂಪನಿಯು ಹೊಸ ಕಾರು ಮಾದರಿಯಲ್ಲಿ ಎಲೆಕ್ಟ್ರಿಕ್ ಆವೃತ್ತಿಯನ್ನು ಸಹ ಬಿಡುಗಡೆಗಾಗಿ ಎದುರು ನೋಡುತ್ತಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಪಂಚ್ ಕಾರು ಮಾದರಿಯನ್ನು ಸದ್ಯಕ್ಕೆ ಪೆಟ್ರೋಲ್ ಮಾದರಿಯೊಂದಿಗೆ ಮಾತ್ರವೇ ಬಿಡುಗಡೆ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಪಂಚ್ ಕಾರು ಮಾದರಿಯ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡುವ ಬಗೆಗೆ ವಿವಿಧ ಹಂತದ ಮಾರುಕಟ್ಟೆ ಅಧ್ಯಯನಗಳನ್ನು ಕೈಗೊಂಡಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯಕ್ಕೆ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಎಲೆಕ್ಟ್ರಿಕ್ ಕಾರು ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಬಜೆಟ್ ಬೆಲೆಯಲ್ಲಿ ಪಂಚ್ ಇವಿ ಕಾರನ್ನು ಬಿಡುಗಡೆ ಮಾಡುವ ಬಗ್ಗೆ ಕಂಪನಿಯು ಎದುರು ನೋಡುತ್ತಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಖರೀದಿಗೆ ಲಭ್ಯವಿರುವ ಬಹುತೇಕ ಇವಿ ಕಾರು ಮಾದರಿಯು ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಿಂತಲೂ ಹೆಚ್ಚಿನ ಬೆಲೆ ಮಾರಾಟವಾಗುತ್ತಿದ್ದು, ಬೆಲೆ ದುಬಾರಿಯಾಗಿರುವ ಹಿನ್ನಲೆಯಲ್ಲಿ ಇವಿ ಖರೀದಿಗೆ ಹೆಚ್ಚಿನ ಗ್ರಾಹಕರು ಮುಂದಾಗುತ್ತಿಲ್ಲ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಇವಿ ವಾಹನಗಳು ಭಾರತದಲ್ಲಿ ದುಬಾರಿಯಾಗಿರುವುದಕ್ಕೆ ಹಲವಾರು ಕಾರಣಗಳಿದ್ದು, ಇವಿ ವಾಹನಗಳಿಗೆ ಬೇಕಿರುವ ಪ್ರಮುಖ ತಾಂತ್ರಿಕ ಬಿಡಿಭಾಗಗಳಿಗಾಗಿ ವಿದೇಶಿ ಮಾರುಕಟ್ಟೆಗಳನ್ನು ಅವಲಂಬಿಸಿರುವುದು ಪ್ರಮುಖ ಕಾರಣವಾಗಿದೆ. ಇದೇ ಕಾರಣಕ್ಕೆ ಸ್ಥಳೀಯವಾಗಿ ಇವಿ ವಾಹನಗಳ ಬಿಡಿಭಾಗಗಳನ್ನು ಅಭಿವೃದ್ದಿಗೊಳಿಸುತ್ತಿರುವ ಪ್ರಮುಖ ಕಾರು ಕಂಪನಿಗಳು ಇವಿ ವಾಹನ ಬೆಲೆ ತಗ್ಗಿಸುವತ್ತ ಯೋಜನೆ ರೂಪಿಸಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನ ಬೆಲೆಯು ತುಸು ಇಳಿಕೆಯಾಗುವ ನೀರಿಕ್ಷೆಯಿವೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಈ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಮುಂಚೂಣಿ ಸಾಧಿಸುತ್ತಿದ್ದು, ಇವಿ ವಾಹನಗಳ ಅಭಿವೃದ್ದಿ ಮತ್ತು ತಂತ್ರಜ್ಞಾನದಲ್ಲಿ ಕಳೆದ ವರ್ಷಕ್ಕಿಂತಲೂ ಈ ವರ್ಷ ಹಲವಾರು ಹೊಸ ಬದಲಾವಣೆಗಳೊಂದಿಗೆ ತನ್ನ ಇವಿ ಉತ್ಪನ್ನಗಳನ್ನು ಉನ್ನತೀಕರಿಸಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಬ್ಯಾಟರಿ ತಂತ್ರಜ್ಞಾನ ಉನ್ನತೀಕರಣದೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ನೀಡುವ ಮೂಲಕ ಗ್ರಾಹಕರ ವಿಶ್ವಾಸಗಳಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಪಂಚ್ ಕಾರಿನಲ್ಲೂ ಇವಿ ಮಾದರಿ ಪರಿಚಯಿಸುವ ಮೂಲಕ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಈ ನಿಟ್ಟಿನಲ್ಲಿ ವಿವಿಧ ಹಂತದ ಮಾರುಕಟ್ಟೆ ಅಧ್ಯಯನ ನಡೆಸಿರುವ ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಇವಿ ಕಾರನ್ನು ಬಜೆಟ್ ಬೆಲೆಯೊಂದಿಗೆ ಪ್ರತಿ ಚಾರ್ಜ್ ಕನಿಷ್ಠ 300 ಕಿ.ಮೀ ಮೈಲೇಜ್ ಪ್ರೇರಣೆಯ ಬ್ಯಾಟರಿ ಜೋಡಿಸುವ ಕುರಿತು ಅಧ್ಯಯನ ನಡೆಸಿದ್ದು, ಅಧ್ಯಯನದಲ್ಲಿ ಸಂಭ್ಯಾವ ಗ್ರಾಹಕರ ಬೇಡಿಕೆ ಮತ್ತು ಅಭಿಪ್ರಾಯಗಳನ್ನು ಆಧರಿಸಿ ಪಂಚ್ ಇವಿ ಬಿಡುಗಡೆಯನ್ನು ನಿರ್ಧರಿಸಲಿದೆ ಎನ್ನಲಾಗಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಇನ್ನು ಅಲ್ಫಾ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ಹೊಸ ಪಂಚ್ ಕಾರು ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗುತ್ತಿದ್ದು, ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಮಾದರಿಯಾಗಲಿದ್ದು, 12 ಮಾದರಿಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದ್ದು, 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಗಳಲ್ಲಿ ಐರಾ ಕಾರ್ ಟೆಕ್ನಾಲಜಿ ನೀಡಲಾಗಿದೆ.

Punch ಕಾರಿನಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲು ಮುಂದಾದ Tata Motors

ಇದರೊಂದಿಗೆ ಹೊಸ ಪಂಚ್ ಕಾರಿನಲ್ಲಿರುವ ಫೀಚರ್ಸ್‌ಗಳು, ಕಾರಿನ ಚಾಲನಾ ಶೈಲಿ ಮತ್ತು ವಿವಿಧ ಬಣ್ಣಗಳ ಆಯ್ಕೆಯು ಗ್ರಾಹಕರನ್ನು ಸೆಳೆಯಲಿದ್ದು, ಮಾರುಕಟ್ಟೆಯಲ್ಲಿರುವ ಪ್ರಮುಖ ಎಂಟ್ರಿ ಲೆವಲ್ ಕಾರು ಮಾದರಿಗಳಿಗೆ ಟಾಟಾ ಪಂಚ್ ಭರ್ಜರಿ ಪೈಪೋಟಿ ನೀಡಲಿದೆ. ಹಾಗೆಯೇ ಭವಿಷ್ಯದಲ್ಲಿ ಬಿಡುಗಡೆಯಾಗಲಿರುವ ಪಂಚ್ ಇವಿ ಮಾದರಿಯು ಸಹ ಇವಿ ವಾಹನ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಪೆಟ್ರೋಲ್ ಆವೃತ್ತಿಯ ಮಾರಾಟದ ಸಂಖ್ಯೆಯ ಮೇಲೆ ಇವಿ ಮಾದರಿಯ ಬಿಡುಗಡೆ ಯೋಜನೆಯು ನಿರ್ಧಾರವಾಗಲಿದೆ ಎನ್ನಬಹುದು.

Most Read Articles

Kannada
English summary
Tata motors working on punch ev in future
Story first published: Friday, October 8, 2021, 22:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X