ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಟಾಟಾ ಮೋಟಾರ್ಸ್ ಕಂಪನಿಯು ಬಜೆಟ್ ಕಾರು ಮಾದರಿಯಾದ ಹೆಬಿಎಕ್ಸ್ ಕಾನ್ಸೆಪ್ಟ್ ಮೈಕ್ರೊ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ವಿಶೇಷ ಸೌಲಭ್ಯಗಳೊಂದಿಗೆ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ನ್ಯೂ ಜನರೇಷನ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನ್ಯೂ ಜನರೇಷನ್ ಸಫಾರಿ ಬಿಡುಗಡೆಯ ನಂತರ ಮೈಕ್ರೊ ಎಸ್‍ಯುವಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿರುವ ಹೊಸ ಕಾರು ಮಾದರಿಯು ಬಜೆಟ್ ಕಾರು ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಎಸ್‌ಯುವಿ ಕಾರುಗಳ ಸರಣಿ ಮಾದರಿಗಳ ಮಾರಾಟವನ್ನು ಹೆಚ್ಚಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮೈಕ್ರೊ ಎಸ್‌ಯುವಿ ಮಾದರಿಯ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಹೊಸ ಕಾರು ಬಿಡುಗಡೆಗಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಹೊಸ ಕಾರು ಬಜೆಟ್ ಕಾರು ಮಾದರಿಯಲ್ಲಿರುವ ಮಾರುತಿ ಎಸ್ ಪ್ರೆಸ್ಸೊ ಮತ್ತು ಹ್ಯುಂಡೈ ಸ್ಯಾಂಟ್ರೊ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10 ರಷ್ಟು ಪಾಲು ಹೊಂದುವ ಗುರಿಹೊಂದಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಎಂಟ್ರಿ ಲೆವಲ್‌ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಮಾದರಿಯು ಕಾನ್ಸೆಪ್ಟ್ ಮಾದರಿಯಲ್ಲೇ ಆಕರ್ಷಕ ವಿನ್ಯಾಸದೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌, ಆಕರ್ಷಕ ಫ್ರಂಟ್ ಫಾಸಿಯಾ, ಡಿ ಕಟ್ ಸ್ಟೀರಿಂಗ್ ಸೌಲಭ್ಯದೊಂದಿಗೆ ಸ್ಪೋರ್ಟಿ ಲುಕ್‌ನೊಂದಿಗೆ ಬೆಸ್ ವೆರಿಯೆಂಟ್‌ನಲ್ಲೂ ಉತ್ತಮ ಸೌಲಭ್ಯಗಳನ್ನು ಹೊಂದಿರಲಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಮುಂಬರುವ ಏಪ್ರಿಲ್ ಅಥವಾ ಮೇ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯು ಅಧಿಕೃತ ಹೆಸರನ್ನು ಅನಾವರಣಗೊಳ್ಳುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್‌ಯುವಿ ಭರ್ಜರಿ ಪೈಪೋಟಿ ನೀಡಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಮಾಹಿತಿ ಬಹಿರಂಗ

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Article Published On: Wednesday, March 24, 2021, 10:45 [IST]
English summary
Tata HBX Spotted Testing Interior Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+