Just In
- 35 min ago XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 2 hrs ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 15 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 16 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಸಫಾರಿ
ನ್ಯೂ ಜನರೇಷನ್ ಸಫಾರಿ ಎಸ್ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರಿಗಾಗಿ ಈಗಾಗಲೇ ನಾಲ್ಕು ಸಾವಿರಕ್ಕೂ ಅಧಿಕ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.
ಕಳೆದ ತಿಂಗಳು 22ರಂದು ಹೊಸ ಸಫಾರಿ ಕಾರು ಬಿಡುಗಡೆ ಮಾಡಿ 26ರಿಂದ ವಿತರಣೆ ಆರಂಭಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ಮೂರು ದಿನಗಳ ಅವಧಿಯಲ್ಲಿ ಒಟ್ಟು1,707 ಯುನಿಟ್ ಕಾರನ್ನು ವಿತರಣೆ ಮಾಡಿದ್ದು, ಟಾಪ್ ಎಂಡ್ ಮಾದರಿಗಳಿಗೆ ಹೆಚ್ಚಿನ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗಿದೆ. ಹೊಸ ಸಫಾರಿ ಕಾರು ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎನ್ನುವ ಎರಡು ಪ್ರಮುಖ ವೆರಿಯೆಂಟ್ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಆರಂಭಿಕವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.
ಎಕ್ಸ್ಇ, ಎಕ್ಸ್ಎಂ, ಎಕ್ಸ್ಟಿ, ಎಕ್ಸ್ಟಿ ಪ್ಲಸ್, ಎಕ್ಸ್ಜೆಡ್, ಎಕ್ಸ್ಜೆಡ್ ಪ್ಲಸ್ ಮತ್ತು ಎಕ್ಸ್ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಸಫಾರಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ.
ಸ್ಟ್ಯಾಂಡರ್ಡ್ ಸಫಾರಿ ಮಾದರಿಯು ಎಕ್ಸ್ಶೋರೂಂ ಪ್ರಕಾರ ರೂ.14.69 ಲಕ್ಷದಿಂದ ರೂ. 21.25 ಲಕ್ಷ ಬೆಲೆ ಹೊಂದಿದ್ದಲ್ಲಿ ಅಡ್ವೆಂಚರ್ ಪೆರಸೊನಾ ಸಫಾರಿ ಮಾದರಿಯು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20.20 ಲಕ್ಷದಿಂದ ರೂ. 21.45 ಲಕ್ಷ ಬೆಲೆ ಪಡೆದುಕೊಂಡಿದೆ.
ಸ್ಟ್ಯಾಂಡರ್ಡ್ ಎಕ್ಸ್ಜೆಡ್ ಪ್ಲಸ್ ಆಧರಿಸಿ ಅಭಿವೃದ್ದಿಗೊಂಡಿರುವ ಎಕ್ಸ್ಜೆಡ್ ಪ್ಲಸ್ ಪೆರಸೊನಾ ಅಡ್ವೆಂಚರ್ ಕಾರು ಮಾದರಿಯು ತಾಂತ್ರಿಕವಾಗಿ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆಯೇ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದ್ದು, ಅಡ್ವೆಂಚರ್ ಮಾದರಿಯಾಗಿ ಗುರುತಿಸಿಕೊಳ್ಳಲು ಹೆಚ್ಚುವರಿಯಾಗಿ ಮೈಸ್ಟಿಕ್ ಬ್ಲ್ಯೂ ಬಣ್ಣದ ಆಯ್ಕೆಯೊಂದಿಗೆ ಬ್ಲ್ಯಾಕ್ ಔಟ್ ಅಂಶಗಳನ್ನು ಹೊಂದಿದೆ. ಒಮೆಗಾ ಪ್ಲ್ಯಾಟ್ಫಾರ್ಮ್ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.
ಹೊಸ ಕಾರಿನ ಬೆಸ್ ಮಾದರಿಗಳಲ್ಲಿ ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಇಎಸ್ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್ಲ್ಯಾಂಪ್ ಸೌಲಭ್ಯಗಳಿವೆ.
ಮಧ್ಯಮ ಆವೃತ್ತಿಗಳಲ್ಲಿ ಆರಂಭಿಕ ಮಾದರಿಯಲ್ಲಿನ ಕೆಲವು ಫೀಚರ್ಸ್ಗಳೊಂದಿಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.
ಟಾಪ್ ಎಂಡ್ನಲ್ಲಿರುವ ಎಕ್ಸ್ಜೆಡ್, ಎಕ್ಸ್ಜೆಡ್ ಪ್ಲಸ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿನ ಹಲವು ಫೀಚರ್ಸ್ನೊಂದಿಗೆ ಪನೊರಮಿಕ್ ಸನ್ರೂಫ್, ಸೈಡ್ ಕರ್ಟೈನ್ ಏರ್ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್ಡಿಐ ಹೆಡ್ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್ಮೆಂಟ್ ಸಿಸ್ಟಂ ನೀಡಲಾಗಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಜೊತೆಗೆ 7 ಇಂಚಿನ ಡಿಜಿಟಲ್ ಡಿಸ್ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮಾತ್ರ ಪನೊರಮಿಕ್ ಸನ್ರೂಫ್ ಸೌಲಭ್ಯ ಸೇರಿದಂತೆ ಸುರಕ್ಷತೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.
ಸಫಾರಿ ಎಸ್ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 168-ಬಿಎಚ್ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.
MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು
ಟಾಟಾ ಕಂಪನಿಯು ಹೊಸ ಕಾರಿನ ಪ್ರತಿ ಮಾದರಿಯಲ್ಲೂ ಸದ್ಯಕ್ಕೆ 2 ವೀಲ್ಹ್ ಡ್ರೈವ್ ಸಿಸ್ಟಂ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಮುಂಬರುವ ದಿನಗಳಲ್ಲಿ ಹೈ ಎಂಡ್ ಮಾದರಿಯಾಗಿರುವ ಅಡ್ವೆಂಚರ್ ಆವೃತ್ತಿಯಲ್ಲಿ ಗ್ರಾಹಕರ ಬೇಡಿಕೆಯ ಅನುಸಾರವಾಗಿ ಆಫ್ ರೋಡ್ ಪರ್ಫಾಮೆನ್ಸ್ಗಾಗಿ 4x4 ಡ್ರೈವ್ ಸಿಸ್ಟಂ ಮಾದರಿಯನ್ನು ಸಹ ಪರಿಚಯಿಸುವ ಯೋಜನೆಯಲ್ಲಿದೆ.