ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್‌ಯುವಿ

ಹೊಸ ತಲೆಮಾರಿನ ಸಫಾರಿ ಎಸ್‌ಯುವಿ ಕಾರು ಮಾದರಿಯ ಉತ್ಪಾದನಾ ಆವೃತ್ತಿಯನ್ನು ಟಾಟಾ ಮೋಟಾರ್ಸ್ ಕಂಪನಿಯು ಇದೇ ತಿಂಗಳು 26ರಂದು ಅನಾವರಣಗೊಳಿಸಲು ಸಜ್ಜಾಗಿದ್ದು, ಹೊಸ ಎಸ್‌ಯುವಿ ಕಾರು ಮಾದರಿಯಲ್ಲಿ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗುತ್ತಿದೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ ಗ್ರಾವಿಟಾಸ್ ಎಸ್‌ಯುವಿ ಮಾದರಿಯನ್ನೇ ಇದೀಗ ಸಫಾರಿ ಹೆಸರಿನೊಂದಿಗೆ ರೀ ಬ್ರಾಂಡ್ ಮಾದರಿಯಾಗಿ ರಸ್ತೆಗಿಳಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿದ್ದು, ಸಫಾರಿ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಗ್ರಾವಿಟಾಸ್ ಹೆಸರಿನಲ್ಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಕಾರನ್ನು ಈ ಹಿಂದಿನ ಜನಪ್ರಿಯ ಸಫಾರಿ ಮಾದರಿಯ ಹೊಸ ತಲೆಮಾರಿನ ಆವೃತ್ತಿಯಾಗಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಉತ್ಪದನಾ ಪ್ರಕ್ರಿಯೆಗೂ ಚಾಲನೆ ನೀಡುವ ಮೂಲಕ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಹೊಸ ತಲೆಮಾರಿನ ಸಫಾರಿ ಮಾದರಿಯು ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹ್ಯಾರಿಯರ್ ಎಸ್‌ಯುವಿಯ ಮುಂದುವರಿದ ಭಾಗವಾಗಿರುವ ಸಫಾರಿ ಕಾರು ಮೂರನೇ ಸಾಲಿನ ಆಸನದೊಂದಿಗೆ ಫುಲ್ ಸೈಜ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

OMEGA ಕಾರು ಉತ್ಪಾದನಾ ತಂತ್ರಜ್ಞಾನದ ಮೂಲಕ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿರುವ ಟಾಟಾ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿದೆ. ಸಫಾರಿ ಎಸ್‌ಯುವಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಹೊಸ ಕಾರಿನಲ್ಲಿ ಸ್ಪೋರ್ಟಿ ಮಾದರಿಯ ಆಸನಗಳೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಮೌಂಟೆಡ್, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್, ಪನೊರಮಿಕ್ ಸನ್‌ರೂಫ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳಿವೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಜೊತೆಗೆ ಹೊಸ ಕಾರಿನಲ್ಲಿ ಫ್ರಂಟ್ ಮತ್ತು ಸೀಟ್ ಸೈಡ್‌ನಲ್ಲಿ ಕರಟೈನ್ ಏರ್‌ಬ್ಯಾಗ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕ್ರೂಸ್ ಕಂಟ್ರೋಲ್, ಆಟೋ ಡಿಮ್ಮಿಂಗ್, 9-ಇಂಚಿನ ಟಚ್‌ಸ್ಕ್ರೀನ್ ಆಟೋಮೋಟಿವ್ ಹೆಡ್ ಯುನಿಟ್, 9 ಜೆಬಿಎಲ್ ಸಿಸ್ಟಂ ಜೊತೆ ಆ್ಯಂಪಿಯರ್ ಸ್ಪೀಕರ್ಸ್ ಮತ್ತು ಬ್ರಾಂಡ್ ನ್ಯೂ ಐರಾ ಕನೆಕ್ಟೆಡ್ ಫೀಚರ್ಸ್ ಹೊಂದಿರಲಿದೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಹೊಸ ಐರಾ ಕನೆಕ್ಟೆಡ್ ಫೀಚರ್ಸ್‌ನಲ್ಲಿ ಸುಮಾರು 70ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ ಸೌಲಭ್ಯವಿದ್ದು, ಒಂದೇ ಸೂರಿನಡಿ ಕಾರಿನ ಬಹುತೇಕ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಹುದಲ್ಲದೆ ತಾಂತ್ರಿಕ ದೋಷಗಳನ್ನು ಅತಿ ಸುಲಭವಾಗಿ ಪತ್ತೆ ಮಾಡಬಹುದಾಗಿದೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಐರಾ ಕಾರ್ ಕನೆಕ್ಟೆಡ್ ಫೀಚರ್ಸ್‌ನಲ್ಲಿ ರಿಮೋಟ್ ಕಂಟ್ರೋಲ್ ಲಾಕ್/ ಅನ್‌ಲಾಕ್, ರಿಮೋಟ್ ಹೆಡ್‌ಲೈಟ್ಸ್ ಆನ್/ಆಫ್, ರಿಮೋಟ್ ಡಿಟಿಇ, ಸ್ಟೊಲನ್ ವೆಹಿಕಲ್ ಟ್ರ್ಯಾಕಿಂಗ್, ರಿಮೋಟ್ ಇಂಮೊಬಿಲೈಝಷನ್(ವಾಹನದ ಎಂಜಿನ್ ನಿಷ್ಕಯಗೊಳಿಸಿಸುವುದು), ಎಮರ್ಜೆನ್ಸಿ ಎಸ್ಎಂಎಸ್, ಜಿಯೋ ಫೆನ್ಸಿಂಗ್, ಟೈಮ್ ಫೆನ್ಸಿಂಗ್ ಅಲರ್ಟ್ ಮತ್ತು ವ್ಯಾಲೆಟ್ ಮೋಡ್ ಸೇರಿ ಹಲವಾರು ಫೀಚರ್ಸ್‌ಗಳಿವೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕನೆಕ್ಟೆಡ್ ಫೀಚರ್ಸ್ ಅನ್ನು ಈಗಾಗಲೇ ನೆಕ್ಸಾನ್ ಎಲೆಕ್ಟ್ರಿಕ್ ಮಾದರಿಯಲ್ಲಿ ಪರೀಕ್ಷಾರ್ಥವಾಗಿ ಜೋಡಣೆ ಮಾಡಿದ್ದು, ಇದೀಗ ಮತ್ತಷ್ಟು ಹೊಸ ವೈಶಿಷ್ಟ್ಯತೆಗಳನ್ನು ಸೇರ್ಪಡೆಗೊಳಿಸುವ ಮೂಲಕ ಆಲ್‌ಟ್ರೊಜ್ ಐಟರ್ಬೊ ಮತ್ತು ಸಫಾರಿ ಕಾರು ಮಾದರಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ.

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಇನ್ನು ಹೊಸ ಸಫಾರಿ ಕಾರಿನಲ್ಲಿ ಹ್ಯಾರಿಯರ್ ಮಾದರಿಯಲ್ಲೇ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗುತ್ತಿದ್ದು, ಹೊಸ ಎಂಜಿನ್‌ನಲ್ಲಿ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿರುವ ಹೊಸ ಸಫಾರಿ ಕಾರು ಮಾದರಿಯು ಹ್ಯುಂಡೈ ಟ್ಯೂಸಾನ್, ಸ್ಕೋಡಾ ಕರೋಕ್, ಜೀಪ್ ಕಂಪಾಸ್, ಮಹೀಂದ್ರಾ ಅಲ್ಟುರಾಸ್ ಜಿ4, ಫೋರ್ಡ್ ಎಂಡೀವರ್ ಜೊತೆಗೆ ಟೊಯೊಟಾ ಫಾರ್ಚೂನರ್‌ ಕಾರಿಗೂ ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಹೊಸ ಕಾರು ರೂ. 20 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ. 25 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
2021 Tata Safari Intertior Details Revealed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X