Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಟಾಟಾ ನೆಕ್ಸಾನ್(Tata Nexon) ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಮಾದರಿಗೆ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿದೆ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. 2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನವು ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು. ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗುತ್ತಿದೆ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯಪ್ಯೂರ್ ಸಿಲ್ವರ್ ಬಣ್ಣದ ಆಯ್ಜೆಯನ್ನು ಸ್ಥಗಿತಗೊಳಿಸಿದೆ. ಇದು ಎಲ್ಲಾ ರೂಪಾಂತರಗಳೊಂದಿಗೆ ಲಭ್ಯವಿತ್ತು. ಇನ್ನು ಈ ಬಣ್ಣವನ್ನು ಹೊರತುಪಡಿಸಿ ಟಾಟಾ ನೆಕ್ಸಾನ್ ಅಟ್ಲಾಸ್ ಬ್ಲ್ಯಾಕ್, ಪೊಲಿಜ್ ಗ್ರೀನ್, ಕ್ಯಾಲ್ಗರಿ ವೈಟ್, ಫ್ಲೇಮ್ ರೆಡ್ ಮತ್ತು ಡೇಟೋನಾ ಗ್ರೇ ಎಂಬ ಐದು ಬಣ್ಣಗಳಲ್ಲಿ ಲಭ್ಯವಿರಲಿದೆ. ಸಿಲ್ವರ್ ಬಣ್ಣದ ಆಯ್ಜೆಯನ್ನು ಸ್ಥಗಿತವನ್ನು ಹೊರತುಪಡಿಸಿ ಬೇರೆ ಯಾವುದೇ ಬದಲಾವಣೆಗಳಿಲ್ಲ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಈ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯು ದೇಶದಲ್ಲೇ ನಾಲ್ಕನೇ ಅತಿ ಹೆಚ್ಚು ಮಾರಾಟವಾದ ಕಾರು, ಇನ್ನು ಕಳೆದ ತಿಂಗಳ ಮಾರಾಟದಲ್ಲಿ ಟಾಟಾ ನೆಕ್ಸಾನ್ ತನ್ನ ಪ್ರಬಲ ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಸೇರಿದಂತೆ ಇತರ ಎಲ್ಲಾ ಮಾದರಿಗಳನ್ನು ಹಿಂದಿಕ್ಕಿದೆ. ಈ ಮೂಲಕ ಕಳೆದ ತಿಂಗಳ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದ ಮಾರಾಟದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಭಾರತೀಯ ಮಾರುಕಟ್ಟೆಯಲ್ಲಿ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಜನಪ್ರಿಯ ಮಾದರಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ. ಇದರಿಂದ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಹೊಸ ಅಪ್‌ಡೇಟ್ ಗಳನ್ನು ಮಾಡಲಾಗಿತ್ತು. ಟಾಟಾ ನೆಕ್ಸಾನ್ ಕಾರಿನ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ಹೊಂದಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಇನ್ನು ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಹೆಚ್ಚು ಪೈಪೋಟಿ ಇರುವುದರಿಂದ ಟಾಟಾ ತನ್ನ ನೆಕ್ಸಾನ್ ಕಾರಿನ ಇಂಟಿರಿಯರ್ ಅನ್ನು ಇತ್ತೀಚೆಗೆ ನವೀಕರಿಸಿತು. ಇದರ ಇಂಟಿರಿಯರ್ ಅಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನಿಯಂತ್ರಿಸಲು ಬಳಸಲಾಗಿದ್ದ ಎಸಿ ವೆಂಟ್ ಗಳ ಅಡಿಯಲ್ಲಿ ಇರಿಸಲಾಗಿರುವ ಫಿಸಿಕಲ್ ಬಟನ್ ಗಳನ್ನು ತೆಗೆದುಹಾಕಿದೆ. ಬದಲಾಗಿ ಟಾಟಾ ಅಲ್ಲಿ ನೆಕ್ಸಾನ್ ಲೋಗೊವನ್ನು ಇರಿಸಿದೆ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಇನ್ನು ರೆಡಿಯೋವನ್ನು ನಿಯಂತ್ರಿಸಲು ಇದ್ದ ರೋಟರಿ ಡಯಲ್‌ಗಳನ್ನು ಸಹ ತೆಗೆದುಹಾಕಲಾಗಿದೆ, ಇನ್ಫೋಟೈನ್‌ಮೆಂಟ್ ಯುನಿಟ್ಗೆ ಸಂಯೋಜಿಸಲಾಗಿದೆ. ವಾಲ್ಯೂಮ್ ನಾಬ್ ಅನ್ನು ಮ್ಯೂಟ್ ಮತ್ತು ಪವರ್ ಆಫ್ ಕಾರ್ಯಗಳಿಗೆ ಸಹ ಬಳಸಬಹುದು.ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಹೊಂದಿದೆ,

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಇದರೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್ ಮತ್ತು ಹಿಂಭಾಗದ ಎಸಿ ವೆಂಟ್ಸ್ ಗಳನ್ನು ಒಳಗೊಂಡಿದೆ.ಉಳಿದಂತ ಯಾವುದೇ ಬದಲಾವಣೆಯನ್ನು ಪಡೆದುಕೊಂಡಿಲ್ಲ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಈ ಟಾಟಾ ನೆಕ್ಸಾನ್ ಮಾದರಿಯಲ್ಲಿ ಎಲೆಕ್ಟ್ರಿಕ್ ಸನ್‌ರೂಫ್ ಸೇರ್ಪಡೆಯ ಹೊರತಾಗಿ, ನೆಕ್ಸಾನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ಹಲವು ಪ್ರೀಮಿಯಂ ಫೀಚರ್ ಗಳನ್ನು ಹೊಂದಿದೆ. ಈ ಎಕ್ಸ್‌ಎಂ(ಎಸ್) ವೆರಿಯೆಂಟ್‌ನಲ್ಲಿ ಹೆಡ್‌ಲ್ಯಾಂಪ್, ರೈನ್-ಸೆನ್ಸಿಂಗ್ ವೈಪರ್‌ಗಳು ಮತ್ತು ಸ್ಟೀಯರಿಂಗ್-ಮೌಂಟಡ್ ಕಂಟ್ರೋಲ್ ಗಳನ್ನು ಒಳಗೊಂಡಿವೆ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪಾಲುದಾರ ಸಿಪ್ರಾಡಿ ಟ್ರೇಡಿಂಗ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ನೇಪಾಳದಲ್ಲಿ ನೆಕ್ಸನ್ ಎಲೆಕ್ಟ್ರಿಕ್ ಮಾದರಿಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್ ಮತ್ತು ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ನೇಪಾಳದಲ್ಲಿ ಬಿಡುಗಡೆಗೊಂಡ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ಎನ್‌ಪಿಆರ್ 35.99 ಲಕ್ಷವಾಗಿದೆ. ನೆಕ್ಸಾನ್ ಎಲೆಕ್ಟ್ರಿಕ್ ಕಾರು ಸಾಮಾನ್ಯ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯಿಂದ ಸ್ಟೈಲಿಂಗ್ ಅನ್ನು ಕೂಡ ಪಡೆದುಕೊಂಡಿದೆ.

Nexon ಕಾರಿನ ಸಿಲ್ವರ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ Tata Motors

ಆದರೆ ಎಲೆಕ್ಟ್ರಿಕ್ ವಾಹನವಾಗಿರುವುದರಿಂದ ಅದಕ್ಕೆ ಅನುಗುಣವಾಗಿ ಕೆಲವು ಕಾಸ್ಮೆಟಿಕ್ ನವೀಕರಣಗಳನ್ನು ಕೂಡ ನಡೆಸಿದ್ದಾರೆ. 2020ರ ಜನವರಿಯಲ್ಲಿ ಮೊದಲ ಬಾರಿಗೆ ಭಾರತದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಪರಿಚಯಿಸಿದರು.ಈ ನೆಕ್ಸಾನ್ ಎಲೆಕ್ಟ್ರಿಕ್ ಭಾರತದಲ್ಲಿ ಹೆಚ್ಚು ಮಾರಾಟವಾದ ಪ್ರಯಾಣಿಕರ ಎಲೆಕ್ಟ್ರಿಕ್ ಕಾರು ಆಗಿದೆ. ಅಲ್ಲದೇ ಇದು ಜಿಪ್ಟ್ರಾನ್ ತಂತ್ರಜ್ಞಾನವನ್ನು ಆಧರಿಸಿದ ಮೊದಲ ವಾಹನವಾಗಿದ್ದು, ಮುಂಬರುವ ಟಾಟಾ ಇವಿಗಳಿಗೆ ಕಾರಣವಾಗಿದೆ. ಇನ್ನು ಸಾಮಾನ್ಯ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ.

Most Read Articles

Kannada
English summary
Tata nexon compact suv silver color option discontinue details
Story first published: Friday, October 29, 2021, 10:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X