Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡ ಟಾಟಾ ನೆಕ್ಸಾನ್ ಇವಿ
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಈ ಬಾರಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 'ವೋಕಲ್ ಫಾರ್ ಲೋಕಲ್' ಅಭಿಯಾನದಡಿ ಭಾರತದಲ್ಲೇ ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿಗೊಳ್ಳುತ್ತಿರುವ ಸ್ವದೇಶಿ ಕಂಪನಿಗಳ ಹಲವು ಉತ್ಪನ್ನಗಳನ್ನು ಪಥಸಂಚಲನದಲ್ಲಿ ಪ್ರದರ್ಶನಗೊಳಿಸಿತು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 'ವೋಕಲ್ ಫಾರ್ ಲೋಕಲ್' ಅಭಿಯಾನದಡಿದಲ್ಲಿ ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಆಯ್ಕೆ ಮಾಡುವ ಮೂಲಕ ಸ್ವದೇಶಿ ಕಾರು ಕಂಪನಿಯ ಭವಿಷ್ಯದ ವಾಹನಗಳ ಬಳಕೆಗೆ ಕರೆ ನೀಡಿತು. ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯ ಜೊತೆಗೆ ಭಾರತದಲ್ಲೇ ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿಗೊಂಡ ಹಲವು ಉತ್ಪನ್ನಗಳನ್ನು ಪ್ರದರ್ಶನಗೊಳಿಸಿದ ಮಾಹಿತಿ ಮತ್ತು ಪ್ರಸಾರ ಇಲಾಖೆಯು 'ನವ ಭಾರತ' ಪರಿಕಲ್ಪನೆಯನ್ನು ವಿಶೇಷವಾಗಿ ವಿನ್ಯಾಸಗೊಳಿಸಿತ್ತು.

ಇನ್ನು ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಭಾರತ ಸೇರಿದಂತೆ ವಿಶ್ವಾದ್ಯಂತ ಪ್ರಮುಖ ರಾಷ್ಟ್ರಗಳು ಇಂಧನ ಆಧಾರಿತ ವಾಹನಗಳ ಬಳಕೆಯನ್ನು ಹಂತ-ಹಂತವಾಗಿ ಕಡಿತಗೊಳಿಸುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಮಾತ್ರವಲ್ಲ ಆಟೋ ಉತ್ಪಾದನಾ ಕಂಪನಿಗಳಿಗೂ ಅನ್ವಯವಾಗುವಂತೆ ಸಬ್ಸಡಿ ಯೋಜನೆಗಳನ್ನು ನೀಡಲಾಗುತ್ತಿದೆ.
2030ರ ವೇಳೆಗೆ ವಿಶ್ವಾದ್ಯಂತ ಪ್ರಮುಖ ರಾಷ್ಟ್ರಗಳು ಕೇವಲ ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರವೇ ಮಾರಾಟ ಮಾಡುವ ಯೋಜನೆ ಹೊಂದಿದ್ದು, ಇದಕ್ಕೆ ಪೂರಕವಾಗಿ ಈಗಿನಿಂದಲೇ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವತ್ತ ಗ್ರಾಹಕರ ಸೆಳೆಯಲಾಗುತ್ತಿದೆ. ಪರಿಸರ ಸ್ನೇಹಿ ವಾಹನ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಇವಿ ಕಾರನ್ನು ಪಥಸಂಚಲನದಲ್ಲಿ ಪ್ರದರ್ಶನಗೊಳಿಸುವ ಮೂಲಕ ಭವಿಷ್ಯ ಯೋಜನೆಗೆ ಬೆಂಬಲ ಸೂಚಿಸಿರುವುದು ವಿಶೇಷವಾಗಿತ್ತು.

ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಭವಿಷ್ಯದ ವಾಹನ ಮಾದರಿಗಳ ಮಾರಾಟದ ಮೇಲೆ ಸಾಕಷ್ಟು ಆಸಕ್ತಿವಹಿಸಿದ್ದು, ಕೇಂದ್ರ ಸರ್ಕಾರದ ಸೂಚನೆಯೆಂತೆ ಇಂಧನ ಆಧಾರಿತ ವಾಹನಗಳನ್ನು ಹಂತ ಹಂತವಾಗಿ ಕಡಿತಗೊಳಿಸಿ ಪೂರ್ಣಪ್ರಮಾಣದ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ಯೋಜನೆಯತ್ತ ಗಮನಹರಿಸಿದೆ.

ಟಾಟಾ ಕಂಪನಿಯು ಮಾರಾಟಗೊಳಿಸುತ್ತಿರುವ ನೆಕ್ಸಾನ್ ಇವಿ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಕಳೆದ ವರ್ಷ ಫೆಬ್ರುವರಿಯಲ್ಲಿ ಬಿಡುಗಡೆಯಾದ ನಂತರ ಇದುವರೆಗೆ ಸುಮಾರು 2,700 ಯುನಿಟ್ ಮಾರಾಟಗೊಂಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.25 ಲಕ್ಷ ಬೆಲೆ ಪಡೆದುಕೊಂಡಿದೆ.

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಮೈಲೇಜ್ ಸುಲಭವಾಗಿ ನೀಡುತ್ತದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ. ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಇವಿ ಮಾದರಿಗಳು ರಸ್ತೆಗಿಳಿಯಲಿವೆ.