Just In
- 1 hr ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 3 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 4 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಟಾಟಾ ನೆಕ್ಸಾನ್ ಇವಿ
ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಎಲೆಕ್ಟ್ರಿಕ್ ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿ ಒಂದು ವರ್ಷ ಪೂರ್ಣಗೊಳಿಸಿದ್ದು, ಹೊಸ ಎಲೆಕ್ಟ್ರಿಕ್ ಕಾರು ಕಳೆದ ಒಂದು ವರ್ಷದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿದೆ.

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ. ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಇದುವರೆಗೆ ಸುಮಾರು 4 ಸಾವಿರ ಯುನಿಟ್‌ಗಳು ಮಾರಾಟಗೊಂಡಿವೆ.

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.40 ಲಕ್ಷ ಬೆಲೆ ಪಡೆದುಕೊಂಡಿದೆ.

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಸುಲಭವಾಗಿ ನಿಗದಿತ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಇಂಧನ ಆಧರಿತ ವಾಹನಗಳಿಂತಲೂ ಅತಿ ನಿರ್ವಹಣಾ ವೆಚ್ಚ ಹೊಂದಿರುವ ಎಲೆಕ್ಟ್ರಿಕ್ ವಾಹನಗಳು ಭವಿಷ್ಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದ್ದು, ಪ್ರತಿಯೊಂದು ಆಟೋ ಕಂಪನಿಗಳು ಕೂಡಾ ಇವಿ ವಾಹನ ಮಾರುಕಟ್ಟೆಯ ಮೇಲೆ ಗಮನಹರಿಸುತ್ತಿವೆ.

ಇನ್ನು ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲಾಗುತ್ತಿರುವುದು ಇವಿ ಬೇಡಿಕೆ ಹೆಚ್ಚುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.