ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಉತ್ಪಾದನೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಿದ್ದು, ಕಂಪನಿಯ ಶೀಘ್ರದಲ್ಲೇ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಆಕರ್ಷಕ ಬಣ್ಣದ ಆಯ್ಕೆ ಹೊಂದಿರುವ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲು ನಿರ್ಧರಿಸಿದೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹ್ಯಾರಿಯರ್ ಮಾದರಿಯಲ್ಲಿರುವ ಡಾರ್ಕ್ ಎಡಿಷನ್ ಪ್ರೇರಣೆಯೊಂದಿಗೆ ನೆಕ್ಸಾನ್ ಎಲೆಕ್ಟ್ರಿಕ್ ಮಾದರಿಯಲ್ಲೂ ಹೊಸ ಬಣ್ಣದ ಆಯ್ಕೆಯು ಖರೀದಿಗೆ ಲಭ್ಯವಾಗಲಿದ್ದು, ಬಣ್ಣದ ಆಯ್ಕೆ ಹೊರತುಪಡಿಸಿ ಇನ್ನುಳಿದ ಎಲ್ಲಾ ತಾಂತ್ರಿಕ ಅಂಶಗಳು ಒಂದೇ ಆಗಿರಲಿವೆ. ಆದರೆ ಹೊಸ ಡಾರ್ಕ್ ಎಡಿಷನ್ ಮಾದರಿಯು ಟಾಪ್ ಎಂಡ್ ಮಾದರಿಯಲ್ಲಿ ಮಾತ್ರ ಮಾರಾಟಗೊಳ್ಳಲಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತ ತುಸು ದುಬಾರಿ ಬೆಲೆ ಹೊಂದಿರುತ್ತದೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಬದಲಾವಣೆಗಳೊಂದಿಗೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಕಂಪನಿಯು ಹೊಸ ಕಾರುಗಳನ್ನು OMEGA ಕಾರು ಉತ್ಪಾದನಾ ತಂತ್ರಜ್ಞಾನದಡಿಯಲ್ಲಿ ಕಾರು ಅಭಿವೃದ್ದಿ ಮಾಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿನ ನೆಕ್ಸಾನ್ ಹಾಗೂ ನೆಕ್ಸಾನ್ ಇವಿ ಕಾರು ಮಾದರಿಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಎಲೆಕ್ಟ್ರಿಕ್ ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿ ಒಂದು ವರ್ಷ ಪೂರ್ಣಗೊಳಿಸಿದ್ದು, ಹೊಸ ಎಲೆಕ್ಟ್ರಿಕ್ ಕಾರು ಕಳೆದ ಒಂದು ವರ್ಷದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿದೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ. v

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಇದುವರೆಗೆ ಸುಮಾರು ನಾಲ್ಕುವರಿ ಸಾವಿರಕ್ಕೂ ಹೆಚ್ಚು ಯುನಿಟ್‌ಗಳು ಮಾರಾಟಗೊಂಡಿವೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಪಡೆದುಕೊಂಡಿದೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಎ‍ಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಸುಲಭವಾಗಿ ನಿಗದಿತ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಶೀಘ್ರದಲ್ಲೇ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

Article Published On: Tuesday, June 8, 2021, 10:47 [IST]
English summary
Tata To Launch Dark Edition For Nexon EV Compact SUV. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+