ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬೆಲೆಯಲ್ಲಿ ಮತ್ತೆ ಹೆಚ್ಚಳ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರವನ್ನು ಇಂದಿನಿಂದಲೇ ಅನ್ವಯವಾಗುವಂತೆ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.1.80 ರಷ್ಟು ದರ ಹೆಚ್ಚಳ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವಿವಿಧ ಕಾರುಗಳ ಬೆಲೆಯನ್ನು ಕನಿಷ್ಠ ರೂ. 5 ಸಾವಿರದಿಂದ ಗರಿಷ್ಠ ರೂ. 36 ಸಾವಿರ ತನಕ ಹೆಚ್ಚಳ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯ ಬೆಲೆಯಲ್ಲೂ ಹೆಚ್ಚಳ ಮಾಡಿದ್ದು, ಎಲೆಕ್ಟ್ರಿಕ್ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಬೆಲೆ ಹೆಚ್ಚಳವು ಮತ್ತಷ್ಟು ಹೊರೆಯಾಗಲಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆಯನ್ನು ಟಾಟಾ ಮೋಟಾರ್ಸ್ ಕಂಪನಿಯು ಸುಮಾರು ರೂ.16 ಸಾವಿರದಷ್ಟು ಹೆಚ್ಚಳ ಮಾಡಿದ್ದು, ನೆಕ್ಸಾನ್ ಇವಿ ಕಾರಿನ ಆರಂಭಿಕ ಮಾದರಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ಹೊಸ ದರಪಟ್ಟಿಯಲ್ಲಿ ನೆಕ್ಸಾನ್ ಇವಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.13.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.56 ಲಕ್ಷ ಬೆಲೆ ಹೊಂದಿದ್ದು, ಬೆಸ್ ವೆರಿಯೆಂಟ್ ಹೊರತುಪಡಿಸಿ ಮಧ್ಯಮ ಕ್ರಮಾಂಕದ ವೆರಿಯೆಂಟ್‌ಗಳು ರೂ. 16 ಸಾವಿರ ಹೆಚ್ಚುವರಿ ಬೆಲೆ ಹೊಂದಿವೆ.

ಇನ್ನು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ.

ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಇದುವರೆಗೆ ಸುಮಾರು 4 ಸಾವಿರ ಯುನಿಟ್‌ಗಳು ಮಾರಾಟಗೊಂಡಿವೆ.

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಕಾರು ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಸುಲಭವಾಗಿ ನಿಗದಿತ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, ಅತಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.


Click it and Unblock the Notifications








