Just In
- 3 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 3 hrs ago
2021ರ ಜೀಪ್ ಕಂಪಾಸ್ ಫೇಸ್‍ಲಿಫ್ಟ್ ಎಸ್‌ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 4 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 4 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ ಟಾಟಾ ನೆಕ್ಸಾನ್ ಇವಿ
ದೇಶಾದ್ಯಂತ ಎಲೆಕ್ಟ್ರಿಕ್ ಕಾರುಗಳ ಮಾರಾಟವು ನಿಧಾನವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ 2 ವರ್ಷಗಳಲ್ಲಿ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ಕಾರುಗಳ ಮಾರಾಟವು ದಾಖಲಾಗಿದೆ. ಇದರಲ್ಲಿ ಟಾಟಾ ನೆಕ್ಸಾನ್ ಇವಿ, ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಇವಿ ಕಾರುಗಳು ಅಗ್ರಸ್ಥಾನದಲ್ಲಿವೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟವು ಕಡಿಮೆ ಸಂಖ್ಯೆ ಹೊಂದಿದ್ದರೂ ಕಳೆದ ಎರಡು ವರ್ಷಗಳಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಹೆಚ್ಚಿದಂತೆ ಇವಿ ಕಾರುಗಳ ಮಾರಾಟವು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿವೆ. ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಟಾಟಾ ನೆಕ್ಸಾನ್ ಇವಿ ಪ್ರಥಮ ಸ್ಥಾನದಲ್ಲಿದ್ದು, ತದನಂತರ ಎಂಜಿ ಜೆಡ್ಎಸ್ ಮತ್ತು ಹ್ಯುಂಡೈ ಕೊನಾ ಕಾರುಗಳು ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷದ ಫೆಬ್ರುವರಿಯಲ್ಲಿ ನೆಕ್ಸಾನ್ ಇವಿ ಬಿಡುಗಡೆಗೊಳಿಸಿದ ನಂತರ ಇದುವರೆಗೆ ಸುಮಾರು 2,602 ಯುನಿಟ್ ಮಾರಾಟಗೊಳಿಸಿದ್ದು, ಪ್ರತಿಸ್ಪರ್ಧಿ ಕಾರುಗಳಾದ ಎಂಜಿ ಜೆಡ್ಎಸ್(1,243 ಯುನಿಟ್) ಮತ್ತು ಹ್ಯುಂಡೈ ಕೊನಾ(183) ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಇವಿ ವಾಹನಗಳ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಇವಿ ವಾಹನಗಳ ಮೇಲೆ ಗರಿಷ್ಠ ಎಂಟು ವರ್ಷಗಳ ವಾರಂಟಿ ನೀಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ ಎನ್ನಬಹುದು.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ವೆರಿಯೆಂಟ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.25 ಲಕ್ಷ ಬೆಲೆ ಪಡೆದುಕೊಂಡಿದ್ದು, ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250 ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್ ಟೆಸ್ಟಿಂಗ್‌ನಲ್ಲಿ ಸಾಬೀತಾಗಿದೆ.

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.