ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಟಾಟಾ ಮೋಟಾರ್ಸ್(Tata Motors) ನಿರ್ಮಾಣದ ನೆಕ್ಸಾನ್ ಎಲೆಕ್ಟ್ರಿಕ್(Nexon Electric) ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯ ಹಲವು ಹೊಸ ದಾಖಲೆಗಳಿಗೆ ಕಾರಣವಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ಕಳೆದ ತಿಂಗಳು ಅಗಸ್ಟ್ ಅವಧಿಯಲ್ಲಿ ಮೊದಲ ಬಾರಿಗೆ ಅತ್ಯಧಿಕ ಸಂಖ್ಯೆಯಲ್ಲಿ ಬೇಡಿಕೆ ಪಡೆದುಕೊಂಡಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಇದುವರೆಗೆ ಸುಮಾರು 8 ಸಾವಿರಕ್ಕೂ ಹೆಚ್ಚು ಯುನಿಟ್‌ಗಳು ಮಾರಾಟಗೊಂಡಿವೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಈ ಮೊದಲು ಪ್ರತಿ ತಿಂಗಳಿಗೆ 300 ರಿಂದ 400 ಯುನಿಟ್ ಸರಾಸರಿಯಾಗಿ ಮಾರಾಟಗೊಳ್ಳುತ್ತಿದ್ದ ಟಾಟಾ ನೆಕ್ಸಾನ್ ಇವಿ ಕಾರು ಇದೇ ಮೊದಲ ಬಾರಿಗೆ ಜೂನ್ ಅವಧಿಯಲ್ಲಿ 1 ಸಾವಿರ ಯುನಿಟ್ ಮಾರಾಟಗೊಂಡಿದ್ದು, ಇದು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅತ್ಯಧಿಕ ಸಂಖ್ಯೆಯಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಅಗಸ್ಟ್ ಅವಧಿಯಲ್ಲಿ ಪ್ರಮುಖ ಎಲೆಕ್ಟ್ರಿಕ್ ಕಾರುಗಳಿಗೆ ಪೈಪೋಟಿ ನೀಡುವ ಮೂಲಕ 1,022 ಯುನಿಟ್ ಮಾರಾಟಗೊಂಡಿದ್ದು, ಮುಂಬರುವ ದಿನಗಳಲ್ಲಿ ಹೊಸ ನೆಕ್ಸಾನ್ ಇವಿ ಕಾರು ಮಾದರಿಯನ್ನು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಭರವಸೆ ಮೂಡಿಸಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ನೆಕ್ಸಾನ್ ಇವಿ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.65 ಲಕ್ಷ ಬೆಲೆ ಪಡೆದುಕೊಂಡಿದ್ದು, ಮೂರು ಪ್ರಮುಖ ವೆರಿಯೆಂಟ್‌ಗಳೊಂದಿಗೆ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಇನ್ನು ಟಾಟಾ ಕಂಪನಿಯ ನೆಕ್ಸಾನ್ ಇವಿ ಮೂಲಕ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪನಿಯು ಶೀಘ್ರದಲ್ಲೇ ಉನ್ನತೀಕರಿಸಿದ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ನೆಕ್ಸಾನ್ ಇವಿ ಕಾರಿನ ಎಲೆಕ್ಟ್ರಿಕ್ ಮೋಟಾರ್ ಉನ್ನತೀಕರಿಸುವ ಮೂಲಕ ಕಾರಿನ ಪರ್ಫಾಮೆನ್ಸ್ ಹೆಚ್ಚಿಸಲಾಗುತ್ತಿದ್ದು, ಉನ್ನತೀಕರಿಸಿದ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ 7 ಬಿಎಚ್‌ಪಿ ಹೆಚ್ಚುವರಿ ಶಕ್ತಿ ಪೂರೈಕೆಯೊಂದಿಗೆ ಕಾರಿನ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ನೆಕ್ಸಾನ್ ಇವಿ ಮಾದರಿಯಲ್ಲಿ ಟಾಟಾ ಕಂಪನಿಯು 95kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, 30kWh ಲಿಥೀಯಂ ಅಯಾನ್ ಬ್ಯಾಟರಿ ಮೂಲಕ 127 ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಇದೀಗ ಸುಧಾರಿತ ತಂತ್ರಜ್ಞಾನದೊಂದಿಗೆ ಉನ್ನತೀಕರಿಸಲಾಗುತ್ತಿರುವ Nexon EV ಮಾದರಿಯು ಪ್ರಸ್ತುತ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ 95kW ಎಲೆಕ್ಟ್ರಿಕ್ ಮೋಟಾರ್ ಮೂಲಕವೇ 134 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನದಲ್ಲಿ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿರುವುದೇ ಹೊಸ ಕಾರಿನ ಪರ್ಫಾಮೆನ್ಸ್ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ನವೀಕೃತ ನೆಕ್ಸಾನ್ ಇವಿ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಜೊತೆಗೆ ಜಿಪ್‌ಟ್ರಾನ್ ತಂತ್ರಜ್ಞಾನವು ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿ ಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲದ ಬಾಳಿಕೆಗೆ ಸಹಕರಿಸಲಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ನವೀಕರಿಸಲಾದ ನೆಕ್ಸಾನ್ ಇವಿ ಮಾದರಿಯಲ್ಲಿ ಪರ್ಫಾಮೆನ್ಸ್ ಹೆಚ್ಚಳ ಮಾಡಲಾಗಿದ್ದರೂ ಕಾರಿನ ಮೈಲೇಜ್‌ ಮೇಲೆ ಪರಿಣಾಮ ಉಂಟು ಮಾಡದಂತೆ ಉನ್ನತೀಕರಿಸಲಾಗಿದ್ದು, ARAI ಸಂಸ್ಥೆಯು ಪ್ರಮಾಣಿಕರಿಸದಂತೆ ಹೊಸ ಕಾರು ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ Tata Nexon EV ಮಾರಾಟದಲ್ಲಿ ಹೊಸ ದಾಖಲೆ

ಹೊಸ ಕಾರಿನಲ್ಲಿ ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಸುಲಭವಾಗಿ ನಿಗದಿತ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, ಹೊಸ ಕಾರು ಅತಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿವೆ.

Article Published On: Monday, September 13, 2021, 19:07 [IST]
English summary
Tata nexon ev highest sales in august 2021 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+