ಜೂನ್ ತಿಂಗಳಿನ ಕಾರು ಮಾರಾಟದಲ್ಲಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಹೊಸ ದಾಖಲೆ
ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಎಲೆಕ್ಟ್ರಿಕ್ ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯ ಹಲವು ಹೊಸ ದಾಖಲೆಗಳಿಗೆ ಕಾರಣವಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ಕಳೆದ ತಿಂಗಳು ಜೂನ್ ಅವಧಿಯಲ್ಲಿ ಮೊದಲ ಬಾರಿಗೆ ಅತ್ಯಧಿಕ ಸಂಖ್ಯೆಯಲ್ಲಿ ಬೇಡಿಕೆ ಪಡೆದುಕೊಂಡಿದೆ.

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ. ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಇದುವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಯುನಿಟ್‌ಗಳು ಮಾರಾಟಗೊಂಡಿವೆ.

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಈ ಮೊದಲು ಪ್ರತಿ ತಿಂಗಳಿಗೆ 300 ರಿಂದ 400 ಯುನಿಟ್ ಸರಾಸರಿಯಾಗಿ ಮಾರಾಟಗೊಳ್ಳುತ್ತಿದ್ದ ಟಾಟಾ ನೆಕ್ಸಾನ್ ಇವಿ ಕಾರು ಇದೇ ಮೊದಲ ಬಾರಿಗೆ ಜೂನ್ ಅವಧಿಯಲ್ಲಿ 650 ಯುನಿಟ್ ಮಾರಾಟಗೊಂಡಿದ್ದು, ಇದು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅತ್ಯಧಿಕ ಸಂಖ್ಯೆಯಾಗಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಪಡೆದುಕೊಂಡಿದೆ.

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಸುಲಭವಾಗಿ ನಿಗದಿತ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಇಂಧನ ಆಧರಿತ ವಾಹನಗಳಿಂತಲೂ ಅತಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿರುವ ಎಲೆಕ್ಟ್ರಿಕ್ ವಾಹನಗಳು ಭವಿಷ್ಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದ್ದು, ಪ್ರತಿಯೊಂದು ಆಟೋ ಕಂಪನಿಗಳು ಕೂಡಾ ಇವಿ ವಾಹನ ಮಾರುಕಟ್ಟೆಯ ಮೇಲೆ ಗಮನಹರಿಸುತ್ತಿವೆ.

ಇನ್ನು ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.


Click it and Unblock the Notifications








