ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಎಲೆಕ್ಟ್ರಿಕ್ ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿ ಒಂದು ವರ್ಷ ಪೂರ್ಣಗೊಳಿಸಿದ್ದು, ಹೊಸ ಕಾರಿನ ವಾರ್ಷಿಕ ಮಾರಾಟ ಪಟ್ಟಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲೇ ಹೊಸ ಎಲೆಕ್ಟ್ರಿಕ್ ಕಾರು ಹೆಚ್ಚಿನ ಬೇಡಿಕೆ ಪಡೆದುಕೊಂಡಿರುವುದಾಗಿ ಟಾಟಾ ಕಂಪನಿಯೇ ಹೇಳಿಕೊಂಡಿದೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಬೇಡಿಕೆಯು ಉತ್ತರ ಭಾರತದ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಹೆಚ್ಚಿನ ಮಟ್ಟದ ಬೇಡಿಕೆಯಿರುವುದು ಸ್ಪಷ್ಟವಾಗಿದೆ. ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ಶೇ.77 ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಮಾರಾಟವಾದ ನಂತರ ಇದುವರೆಗೆ ಸುಮಾರು 3 ಸಾವಿರಕ್ಕೂ ಅಧಿಕ ಯುನಿಟ್‌ಗಳು ಮಾರಾಟಗೊಂಡಿವೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.40 ಲಕ್ಷ ಬೆಲೆ ಪಡೆದುಕೊಂಡಿದೆ. ಎ‍ಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಸುಲಭವಾಗಿ ನಿಗದಿತ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, ಇಂಧನ ಆಧರಿತ ವಾಹನಗಳಿಂತಲೂ ಅತಿ ನಿರ್ವಹಣಾ ವೆಚ್ಚ ಹೊಂದಿದೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಇನ್ನು ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತಿ ಹೆಚ್ಚು ಬೇಡಿಕೆ

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

Most Read Articles

Kannada
English summary
Tata Nexon EV Leads Segment In South India With 77% Market Share. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X