Just In
Don't Miss!
- News
ಕೊರೊನಾ ಸೋಂಕು ಹೆಚ್ಚಳ: ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
2021ರ ಇಂಡಿಯನ್ ಕಾರ್ ಆಫ್ ಇಯರ್ ಪ್ರತಿಷ್ಠಿತ ಪ್ರಶಸ್ತಿ ಪ್ರಕಟಗೊಂಡಿದ್ದು, ಕಾರ್ ಆಫ್ ದಿ ಇಯರ್ 16ನೇ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಗ್ರೀನ್ ಕಾರ್ ಪ್ರಶಸ್ತಿ ಘೋಷಣಿಸುವ ಮೂಲಕ ಭವಿಷ್ಯ ವಾಹನ ಮಾದರಿಗಳನ್ನು ಪ್ರೊತ್ಸಾಹಿಸುವತ್ತ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಭಾರತೀಯ ಆಟೋ ಉದ್ಯಮದಲ್ಲಿ ಸದ್ಯ ಆಸ್ಕರ್ ಪ್ರಶಸ್ತಿ ಎಂದೇ ಖ್ಯಾತಿಯಾಗಿರುವ ಇಂಡಿಯನ್ ಕಾರ್ ಆಫ್ ಇಯರ್ ಪ್ರತಿಷ್ಠಿತ ಪ್ರಶಸ್ತಿಯನ್ನು ಹೊಸ ವಾಹನಗಳ ತಾಂತ್ರಿಕ ಅಂಶಗಳು, ಕಾರ್ಯಕ್ಷಮತೆ ಮತ್ತು ಗ್ರಾಹಕರ ವಿಶ್ವಾಸ ಸೇರಿದಂತೆ ಹಲವಾರು ಅಂಶಗಳನ್ನು ಪರಿಗಣಿಸಿ ನೀಡಲಾಗುತ್ತಿದ್ದು, ಕಾರುಗಳ ವಿಭಾಗದಲ್ಲಿ ಈ ಬಾರಿ ಮೂರು ಹಂತಗಳನ್ನು ಸೇರಿಸಿರುವುದು ಉತ್ತಮ ನಿರ್ಧಾರವಾಗಿದೆ.

ಅತ್ಯುತ್ತಮ ಮಧ್ಯಮ ಕ್ರಮಾಂಕದ ಕಾರು, ಅತ್ಯುತ್ತಮ ಐಷಾರಾಮಿ ಕಾರು ಮತ್ತು ಹೊಸದಾಗಿ ಪರಿಸರ ಸ್ನೇಹಿ ಕಾರು ಮಾದರಿಯಾಗಿ ವಿಂಗಡನೆ ಮಾಡಲಾಗಿದ್ದು, ಆರಂಭದಿಂದಲೇ ಮಧ್ಯಮ ಕ್ರಮಾಂಕದ ಕಾರುಗಳು, ಅತ್ಯುತ್ತಮ ಐಷಾರಾಮಿ ಕಾರುಗಳಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತಿತ್ತು.

ಆದರೆ ಈ ಬಾರಿ ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಗ್ರೀನ್ ಕಾರ್ ಅವಾರ್ಡ್ ಆರಂಭಿಸಿದ್ದು, ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಹೊಸ ಪ್ರಶಸ್ತಿಗೆ ಭಾಜನವಾದ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಹೊರಹೊಮ್ಮಿತು.

2020ರ ಆರಂಭದಲ್ಲಿ ಬಿಡುಗಡೆಗೊಂಡಿದ್ದ ಟಾಟಾ ನೆಕ್ಸಾನ್ ಇವಿ ಕಾರು ಆರಂಭದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವಲ್ಲಿ ಹಿನ್ನಡೆ ಅನುಭವಿಸಿದರೂ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ಮತ್ತು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಲಭ್ಯತೆಯ ಆಧಾರದ ಮೇಲೆ ಹೊಸ ಕಾರಿನ ಬೇಡಿಕೆಯು ತಿಂಗಳಿನಿಂದ ತಿಂಗಳಿಗೆ ಹೆಚ್ಚುತ್ತಿದೆ.

2020ರ ಫೆಬ್ರವರಿಯಲ್ಲಿ ಬಿಡುಗಡೆಯ ನಂತರ ಕಳೆದ ನವೆಂಬರ್ ತಿಂಗಳವರೆಗೆ ಒಂದು ಸಾವಿರಕ್ಕಿಂತಲೂ ಕಡಿಮೆ ಯುನಿಟ್ ಮಾರಾಟಗೊಂಡಿದ್ದ ಟಾಟಾ ನೆಕ್ಸಾನ್ ಇವಿ ಕಾರು ಕಳೆದ ಮೂರು ತಿಂಗಳ ಅವಧಿಯಲ್ಲಿ ಸುಮಾರು ನಾಲ್ಕು ಸಾವಿರ ಯುನಿಟ್ ಮಾರಾಟ ಗುರಿತಲುಪುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹರಿದುಬರುವ ವಿಶ್ವಾಸದಲ್ಲಿದೆ.

ಇದೀಗ ಗ್ರೀನ್ ಕಾರ್ ಅವಾರ್ಡ್ ಸಿಕ್ಕಿರುವುದು ಹೊಸ ಕಾರಿಗೆ ಮತ್ತಷ್ಟು ಬಲತುಂಬಲಿದ್ದು, ಹೆಚ್ಚುತ್ತಿರುವ ಮಾಲಿನ್ಯ ಮತ್ತು ಇಂಧನಗಳ ಬೆಲೆ ಏರಿಕೆಯ ನಡುವೆ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಅನಿವಾರ್ಯತೆಯಾಗಿ ಪರಿಣಮಿಸುತ್ತಿದೆ.

ಇದರಿಂದ ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವ ಟಾಟಾ ಕಂಪನಿಯು ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.40 ಲಕ್ಷ ಬೆಲೆ ಪಡೆದುಕೊಂಡಿದೆ. ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಸುಲಭವಾಗಿ ನಿಗದಿತ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, ಇಂಧನ ಆಧರಿತ ವಾಹನಗಳಿಂತಲೂ ಅತಿ ನಿರ್ವಹಣಾ ವೆಚ್ಚ ಹೊಂದಿದೆ.

ಇನ್ನು ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.