2021ರ ಜನವರಿಯಲ್ಲಿ ನೆಕ್ಸಾನ್ ಕಾರು ಮಾರಾಟದಲ್ಲಿ ಶೇ.144ರಷ್ಟು ಹೆಚ್ಚಳ
ಟಾಟಾ ಮೋಟಾರ್ಸ್ ಕಂಪನಿಯು 2021ರ ಜನವರಿ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದು, ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಟಾಟಾ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದೆ.

2020ರ ಜನವರಿ ಅವಧಿಯಲ್ಲಿ 13,893 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಕಂಪನಿಯು 2021ರ ಜನವರಿಯಲ್ಲಿ 26,980 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಶೇ.94 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ತಿಂಗಳ ವಾಹನ ಮಾರಾಟದಲ್ಲಿ ಶೇ.20 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಕಂಪನಿಯು ಪ್ರಮುಖ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾಗಿರುವ ನೆಕ್ಸಾನ್ ಕಾರು ಮಾದರಿಯು ಶೇ. 143.2 ರಷ್ಟು ಬೆಳವಣಿಗೆ ಕಂಡಿದೆ.

ಸದ್ಯ ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನಕ್ಕೇರಿರುವ ಟಾಟಾ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೆಳವಣಿಗೆ ಸಾಧಿಸುವ ತವಕದಲ್ಲಿದ್ದು, ನೆಕ್ಸಾನ್ ಕಾರು ಮಾದರಿಯು 2021ರ ಜನವರಿಯಲ್ಲಿ 8,225 ಯುನಿಟ್ ಮಾರಾಟದೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ.

2017ರಲ್ಲಿ ಮೊದಲ ಬಾರಿಗೆ ಮಾರುಕಟ್ಟೆಗೆ ಬಂದ ನಂತರ ಇದು ಗರಿಷ್ಠ ಮಾಸಿಕ ಮಾರಾಟವಾಗಿದ್ದು, 2020ರ ಜನವರಿ ಅವಧಿಯಲ್ಲಿ ಕೇವಲ 3,382 ಯುನಿಟ್ ಮಾರಾಟಗೊಂಡಿತ್ತು. ಆದರೆ ಕಳೆದ ವರ್ಷದ ಜೂನ್‌ನಲ್ಲಿ ಬಿಡುಗಡೆಯಾದ ಫೇಸ್‌ಲಿಫ್ಟ್ ಆವೃತ್ತಿಯ ಬಿಡುಗಡೆಯ ನಂತರ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದೆ.

ಸ್ವದೇಶಿ ಕಂಪನಿಗಳ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಒಲವು ಮತ್ತು ಪ್ರಯಾಣಿಕ ಸುರಕ್ಷತೆ ವಿಚಾರವಾಗಿ ಗಮನಸೆಳೆದಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಆರು ತಿಂಗಳಿನಿಂದ ವಾಹನ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಸಾಧಿಸುತ್ತಿದ್ದು, ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕೂಡಾ ಕಳೆದ ತಿಂಗಳು ಒಟ್ಟು 8,225 ಯನಿಟ್ ಮಾರಾಟಗೊಂದಿಗೆ ಶೇ. 143.2 ರಷ್ಟು ಬೆಳವಣಿಗೆ ಸಾಧಿಸಿದೆ.

2020ರ ಆರಂಭದಲ್ಲಿ ಪ್ರತಿ ತಿಂಗಳು 2500ರಿಂದ 3 ಸಾವಿರ ಯುನಿಟ್ ಮಾರಾಟವಾಗಿದ್ದ ನೆಕ್ಸಾನ್ ಕಾರು ಮಾದರಿಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದೆ.
MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಇನ್ನು ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.09 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.79 ಲಕ್ಷ ಬೆಲೆ ಹೊಂದಿದೆ.

ವಿವಿಧ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಬರೋಬ್ಬರಿ 36 ವೆರಿಯೆಂಟ್ಸ್ ಹೊಂದಿರುವ ನೆಕ್ಸಾನ್ ಕಾರು ಮಾದರಿಯು ಬಿಎಸ್-6 ಪ್ರೇರಣೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿದ್ದು, ಬಹುತೇಕ ವೆರಿಯೆಂಟ್‌ಗಳಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯ ಸೌಲಭ್ಯವನ್ನು ನೀಡಲಾಗಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮಾದರಿಯು 118-ಬಿಹೆಚ್‍ಪಿ ಮತ್ತು 170 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದ್ದಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 108-ಬಿಹೆಚ್‍ಪಿ ಮತ್ತು 260-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.


Click it and Unblock the Notifications