ನೆಕ್ಸಾನ್ ಕಾರಿನ ಪ್ರಮುಖ 4 ಡೀಸೆಲ್ ವೆರಿಯೆಂಟ್ ಸ್ಥಗಿತಗೊಳಿಸಲಿದೆ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಪ್ರಮುಖ ವೆರಿಯೆಂಟ್‌ಗಳಲ್ಲಿ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಉನ್ನತೀಕರಿಸಿದ್ದು, ಶೀಘ್ರದಲ್ಲೇ ಹೊಸ ಕಾರಿನ ಪ್ರಮುಖ ಡೀಸೆಲ್ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಲಿದೆ.

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಕಾರು ಉತ್ಪನ್ನಗಳಲ್ಲಿ ಪ್ರತಿ ಎರಡು ತಿಂಗಳಿಗೆ ಒಂದು ಬಾರಿ ಹೊಸ ಬದಲಾವಣೆಗಳನ್ನು ಪರಿಚಯಿಸುವ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಯೋಜನೆಯು ಗ್ರಾಹಕರ ಪ್ರಮುಖ ಆಕರ್ಷಣೆಯಾಗುತ್ತಿರುವುದಲ್ಲದೆ ಬೇಡಿಕೆ ಕಾಯ್ದುಕೊಳ್ಳಲು ಸಾಕಷ್ಟು ನೆರವಾಗುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಬದಲಾವಣೆಗಳೊಂದಿಗೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಶೀಘ್ರದಲ್ಲೇ ತನ್ನ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಕಾರು ಮಾದರಿಗಾಗಿ ಮತ್ತಷ್ಟು ಬೇಡಿಕೆ ಕಾಯ್ದಕೊಳ್ಳುವ ನಿಟ್ಟಿನಲ್ಲಿ ಹೊಸ ಬಣ್ಣದ ಆಯ್ಕೆ, ಹೊಸ ವಿನ್ಯಾಸದ 16 ಇಂಚಿನ ಅಲಾಯ್ ವೀಲ್ಹ್ ಮತ್ತು ವಾಯ್ಸ್ ಅಸಿಸ್ಟ್ ಸಿಸ್ಟಂ ಸೌಲಭ್ಯದಲ್ಲೂ ಗುರುತರ ಬದಲಾವಣೆ ತರಲು ಸಿದ್ದವಾಗಿದೆ.

ಜೊತೆಗೆ ನೆಕ್ಸಾನ್ ಕಾರಿನ 1.5-ಲೀಟರ್ ಡೀಸೆಲ್ ಮಾದರಿಯಲ್ಲಿ ಮಧ್ಯಮ ಕ್ರಮಾಂಕದ ಆವೃತ್ತಿಯಲ್ಲಿ ಕೆಲವು ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಸ್ಥಗಿತಗೊಳ್ಳುವ ವೆರಿಯೆಂಟ್ ಸ್ಥಾನಕ್ಕೆ ಸದ್ಯ ಖರೀದಿಗೆ ಲಭ್ಯವಿರುವ ವೆರಿಯೆಂಟ್‌ಗಳನ್ನೇ ಉನ್ನತೀಕರಿಸುವ ಸುಳಿವು ನೀಡಿದೆ.

ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.95 ಲಕ್ಷ ಬೆಲೆ ಹೊಂದಿದೆ.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರುವ ನೆಕ್ಸಾನ್ ಕಾರು ಮಾದರಿಯು 35ಕ್ಕೂ ಹೆಚ್ಚು ವೆರಿಯೆಂಟ್ ಹೊಂದಿದ್ದು, ಮಧ್ಯಮ ಕ್ರಮಾಂಕದಲ್ಲಿರುವ ಮಾದರಿಗಳನ್ನು ಬದಲಿಸಲಿದೆ.

ಇನ್ನು ಟಾಟಾ ಕಂಪನಿಯು ಹೊಸ ಕಾರುಗಳನ್ನು OMEGA ಕಾರು ಉತ್ಪಾದನಾ ತಂತ್ರಜ್ಞಾನದಡಿಯಲ್ಲಿ ಕಾರು ಅಭಿವೃದ್ದಿ ಮಾಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿನ ನೆಕ್ಸಾನ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ.
MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಮೇ ಅವಧಿಯಲ್ಲಿ ಒಟ್ಟು 6 ಸಾವಿರಕ್ಕೂ ಅಧಿಕ ಯುನಿಟ್ ಮಾರಾಟದೊಂದಿಗೆ ನೆಕ್ಸಾನ್ ಕಾರು ಮಾದರಿಯು ಟಾಟಾ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಮಾರ್ಚ್ ಅವಧಿಗೆ ಹೋಲಿಕೆ ಮಾಡಿದ್ದಲ್ಲಿ ತುಸು ಕಡಿಮೆ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದರೂ ಕೋವಿಡ್‌ನಿಂದಾಗಿ ಆರ್ಥಿಕ ಹಿಂಜರಿತದಲ್ಲೂ ಉತ್ತಮ ಬೇಡಿಕೆ ಕಾಯ್ದುಕೊಂಡಿದೆ ಎನ್ನಬಹುದು.


Click it and Unblock the Notifications








