ಆಗಸ್ಟ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Tata Nexon
ಟಾಟಾ ನೆಕ್ಸಾನ್(Tata Nexon) ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಮಾದರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿದೆ.

ಟಾಟಾ ನೆಕ್ಸಾನ್ ಅತಿ ಹೆಚ್ಚು ಮಾರಾಟವಾಗುವ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಇನ್ನು ಟಾಟಾ ಕಳೆದ ತಿಂಗಳಿನಲ್ಲಿ ನೆಕ್ಸಾನ್ ಮಾದರಿಯ 10,006 ಯುನಿಟ್‌ಗಳ ಮಾರಾಟ ಮಾಡಿದೆ, ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ ನೆಕ್ಸಾನ್ ಮಾದರಿಯ 5,179 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ,93.20 ರಷ್ಟು ಬೃಹತ್ ಬೆಳವಣಿಗೆಯನ್ನು ಸಾಧಿಸಿದೆ, ಆದರೆ ಈ ವರ್ಷದ ಜುಲೈ ತಿಂಗಳಿನಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಮಾದರಿಯ 10,287 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು, ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ,2.73 ರಷ್ಟು ಇಳಿಕೆಯನ್ನು ಕಂಡಿದೆ,

ಹೆಚ್ಚು ಪೈಪೋಟಿ ಇರುವುದರಿಂದ ಟಾಟಾ ತನ್ನ ನೆಕ್ಸಾನ್ ಕಾರಿನ ಇಂಟಿರಿಯರ್ ಅನ್ನು ಇತ್ತೀಚೆಗೆ ನವೀಕರಿಸಿತು. ಇಂಟಿರಿಯರ್ ಅಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನಿಯಂತ್ರಿಸಲು ಬಳಸಲಾಗಿದ್ದ ಎಸಿ ವೆಂಟ್ ಗಳ ಅಡಿಯಲ್ಲಿ ಇರಿಸಲಾಗಿರುವ ಫಿಸಿಕಲ್ ಬಟನ್ ಗಳನ್ನು ತೆಗೆದುಹಾಕಿದೆ. ಬದಲಾಗಿ ಟಾಟಾ ಅಲ್ಲಿ ನೆಕ್ಸಾನ್ ಲೋಗೊವನ್ನು ಇರಿಸಲಾಗಿದೆ.

ಇನ್ನು ರೆಡಿಯೋವನ್ನು ನಿಯಂತ್ರಿಸಲು ಇದ್ದ ರೋಟರಿ ಡಯಲ್‌ಗಳನ್ನು ಸಹ ತೆಗೆದುಹಾಕಲಾಗಿದೆ, ಇನ್ಫೋಟೈನ್‌ಮೆಂಟ್ ಯುನಿಟ್ಗೆ ಸಂಯೋಜಿಸಲಾಗಿದೆ. ವಾಲ್ಯೂಮ್ ನಾಬ್ ಅನ್ನು ಮ್ಯೂಟ್ ಮತ್ತು ಪವರ್ ಆಫ್ ಕಾರ್ಯಗಳಿಗೆ ಸಹ ಬಳಸಬಹುದು.ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಹೊಂದಿದೆ.

ಇನ್ನು ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್ ಮತ್ತು ಹಿಂಭಾಗದ ಎಸಿ ವೆಂಟ್ಸ್ ಗಳನ್ನು ಒಳಗೊಂಡಿದೆ.ಉಳಿದಂತ ಯಾವುದೇ ಬದಲಾವಣೆಗಳನ್ನು ಪಡೆದುಕೊಂಡಿಲ್ಲ.

ದೇಶಿಯ ಮಾರುಕಟ್ಟೆಯಲ್ಲಿ ಸಬ್ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಜನಪ್ರಿಯ ಮಾದರಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ. ಇದರಿಂದ ನೆಕ್ಸಾನ್ ಕಾರಿನಲ್ಲಿ ಹೊಸ ಅಪ್‌ಡೇಟ್ ಗಳನ್ನು ಮಾಡಲಾಗಿತ್ತು. ಟಾಟಾ ನೆಕ್ಸಾನ್ ಕಾರಿನ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ.

ಇದರೊಂದಿಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಟಾಟಾ ನೆಕ್ಸಾನ್ ಮಾದರಿಯಲ್ಲಿ ಎಲೆಕ್ಟ್ರಿಕ್ ಸನ್‌ರೂಫ್ ಸೇರ್ಪಡೆಯ ಹೊರತಾಗಿ, ನೆಕ್ಸಾನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ಹಲವು ಪ್ರೀಮಿಯಂ ಫೀಚರ್ ಗಳನ್ನು ಹೊಂದಿದೆ. ಈ ಎಕ್ಸ್‌ಎಂ(ಎಸ್) ವೆರಿಯೆಂಟ್‌ನಲ್ಲಿ ಹೆಡ್‌ಲ್ಯಾಂಪ್, ರೈನ್-ಸೆನ್ಸಿಂಗ್ ವೈಪರ್‌ಗಳು ಮತ್ತು ಸ್ಟೀಯರಿಂಗ್-ಮೌಂಟಡ್ ಕಂಟ್ರೋಲ್ ಗಳನ್ನು ಹೊಂದಿವ

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪಾಲುದಾರ ಸಿಪ್ರಾಡಿ ಟ್ರೇಡಿಂಗ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ನೇಪಾಳದಲ್ಲಿ ನೆಕ್ಸನ್ ಎಲೆಕ್ಟ್ರಿಕ್ ಮಾದರಿಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್ ಮತ್ತು ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ನೇಪಾಳದಲ್ಲಿ ಬಿಡುಗಡೆಗೊಂಡ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ಎನ್‌ಪಿಆರ್ 35.99 ಲಕ್ಷವಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಸಾಮಾನ್ಯ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯಿಂದ ಸ್ಟೈಲಿಂಗ್ ಅನ್ನು ಪಡೆದುಕೊಂಡಿದೆ. ಆದರೆ ಎಲೆಕ್ಟ್ರಿಕ್ ವಾಹನವಾಗಿರುವುದರಿಂದ ಅದಕ್ಕೆ ಅನುಗುಣವಾಗಿ ಕೆಲವು ಕಾಸ್ಮೆಟಿಕ್ ನವೀಕರಣಗಳನ್ನು ಕೂಡ ನಡೆಸಿದ್ದಾರೆ. 2020ರ ಜನವರಿಯಲ್ಲಿ ಮೊದಲ ಬಾರಿಗೆ ಭಾರತದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಪರಿಚಯಿಸಿದರು.

ಈ ನೆಕ್ಸಾನ್ ಎಲೆಕ್ಟ್ರಿಕ್ ಭಾರತದಲ್ಲಿ ಹೆಚ್ಚು ಮಾರಾಟವಾದ ಪ್ರಯಾಣಿಕರ ಎಲೆಕ್ಟ್ರಿಕ್ ಕಾರು ಆಗಿದೆ. ಅಲ್ಲದೇ ಇದು ಜಿಪ್ಟ್ರಾನ್ ತಂತ್ರಜ್ಞಾನವನ್ನು ಆಧರಿಸಿದ ಮೊದಲ ವಾಹನವಾಗಿದ್ದು, ಮುಂಬರುವ ಟಾಟಾ ಇವಿಗಳಿಗೆ ಕಾರಣವಾಗಿದೆ. ಭಾರತದಲ್ಲಿ ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ನೆಕ್ಸಾನ್ ಇವಿ ಶೇ.6.8 ಕ್ಕಿಂತ ಹೆಚ್ಚು ಮಾರುಕಟ್ಟೆ ಪಾಲನ್ನು ಗಳಿಸಿದೆ. ಈಗಗಾಲೇ ನೆಕ್ಸಾನ್ ಎಲೆಕ್ಟ್ರಿಕ್ ಮಾದರಿಯ 4,500 ಯುನಿಟ್ ಗಳನ್ನು ಮಾರಾಟಗೊಳಿಸಿವೆ.

2018ರ ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ನಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ಕಾರಣ ನೆಕ್ಸಾನ್ ದೇಶಿಯ ಮಾರುಕಟ್ಟೆಯಲ್ಲಿ ಸುರಕ್ಷಿತ ಕಾರುಗಳಲ್ಲಿ ಒಂದಾಗಿದೆ. 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ರೇಟಿಂಗ್ ಅನ್ನು ಪಡೆದ ಭಾರತದ ಮೊದಲ ಕಾರು ಎಂಬ ಹೆಗ್ಗಳಿಕೆ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಸಲ್ಲುತ್ತದೆ.


Click it and Unblock the Notifications