Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 4 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 5 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳುತ್ತಾ ನ್ಯೂ ಜನರೇಷನ್ ಟಾಟಾ ಸಫಾರಿ?
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಸಫಾರಿ ಎಸ್‌ಯುವಿ ಕಾರು ಮಾದರಿಯನ್ನು ಇತ್ತೀಚೆಗೆ ನ್ಯೂ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿದ್ದು, ಡೀಸೆಲ್ ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರಿನಲ್ಲಿ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹೊಸ ಎಮಿಷನ್‌ನಂತೆ ಕಾರುಗಳ ಮಾರಾಟದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟರ್ಸ್ ಕಂಪನಿಯು ಶೀಘ್ರದಲ್ಲೇ ಹ್ಯಾರಿಯರ್ ಮತ್ತು ಸಫಾರಿ ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಆವೃತ್ತಿಗಳನ್ನು ಸಹ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ. ಪೆಟ್ರೋಲ್ ಮಾದರಿಗಳನ್ನು ಬಿಡುಗಡೆ ಮಾಡುವ ಉದ್ದೇಶದಿಂದ ಈಗಾಗಲೇ ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿರುವ ಟಾಟಾ ಕಂಪನಿಯು ಶೀಘ್ರದಲ್ಲೇ ಹೊಸ ಆವೃತ್ತಿಗಳನ್ನು ರಸ್ತೆಗಿಳಿಸಲಿದೆ ಎನ್ನಲಾಗಿದೆ.

ಟಾಟಾ ಕಂಪನಿಯು ಹ್ಯಾರಿಯರ್ ಮತ್ತು ಸಫಾರಿ ಕಾರುಗಳಿಗಾಗಿ ಒಂದೇ ಮಾದರಿಯ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನ್ಯೂ ಜನರೇಷನ್ ಮಾದರಿಯು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಸಫಾರಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ. ಹೊಸ ಕಾರು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದ್ದು, ಒಮೆಗಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಹೊಸ ಸಫಾರಿ ಕಾರು ಐಷಾರಾಮಿ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಹೊಸ ಕಾರಿನ ಬೆಸ್ ಮಾದರಿಗಳಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೌಲಭ್ಯಗಳಿವೆ.

ಮಧ್ಯಮ ಆವೃತ್ತಿಗಳಲ್ಲಿ ಆರಂಭಿಕ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳೊಂದಿಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

ಟಾಪ್ ಎಂಡ್‌ನಲ್ಲಿರುವ ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿನ ಹಲವು ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್ ಸೌಲಭ್ಯಗಳಿವೆ.

ಹಾಗೆಯೇ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

ಟಾಪ್ ಎಂಡ್‍ಗಳಲ್ಲಿ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಪನೊರಮಿಕ್ ಸನ್‌ರೂಫ್ ಸೌಲಭ್ಯ ಸೇರಿದಂತೆ ಸುರಕ್ಷತೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.