ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವಲ್ಲಿ ಟಾಟಾ ಪವರ್(Tata Power) ಹೊಸ ಮೈಲಿಗಲ್ಲು ಸಾಧಿಸಿದೆ.

ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ವಿವಿಧ ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ತ್ವರಿತಗೊಳಿದ್ದು, ಟಾಟಾ ಪವರ್ ಕಂಪನಿಯು ಸಹ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳ ಜೊತೆಗೂಡಿ ಇದುವರೆಗೆ ಒಂದು ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುವ ಮೂಲಕ ಅತಿ ಹೆಚ್ಚು ಇವಿ ಚಾರ್ಜಿಂಗ್ ನಿಲ್ದಾಣಗಳೊಂದಿಗೆ ಅಗ್ರಸ್ಥಾನಕೇರಿದೆ.

ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಹೆಚ್ಚುತ್ತಿರುವ ಇಂಧನ ದರಗಳು ಮತ್ತು ಮಾಲಿನ್ಯ ಸಮಸ್ಯೆಯಿಂದಾಗಿ ಕಳೆದ ಕೆಲವು ವರ್ಷಗಳಿಂದ ವಿದ್ಯುತ್ ವಾಹನಗಳ ಪ್ರಾಮುಖ್ಯತೆಯು ತೀವ್ರವಾಗಿ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿರುವ ಚಾರ್ಜಿಂಗ್ ಸೌಲಭ್ಯ ಒದಗಿಸುವುದು ಕೂಡಾ ಪ್ರಮುಖ ಸವಾಲಾಗಿದೆ.

ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಇದಕ್ಕಾಗಿ ಇವಿ ಬೇಡಿಕೆ ಹೆಚ್ಚುತ್ತಿದ್ದಂತೆ ಕಳೆದ ವರ್ಷದಿಂದ ಅಗತ್ಯಕ್ಕೆ ಅನುಗುಣವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಹೆಚ್ಚಿಸಿರುವ ಟಾಟಾ ಪವರ್ ಕಂಪನಿಯು ಇದುವರೆಗೆ 1 ಸಾವಿರ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಹತ್ತು ಪಟ್ಟು ಹೆಚ್ಚಿಸುವ ಗುರಿಹೊಂದಿದೆ.

ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಸದ್ಯ ಮಾರುಕಟ್ಟೆಯಲ್ಲಿ ಇಂಧನ ದರ ಹೆಚ್ಚುತ್ತಿರುವ ಪರಿಣಾಮ ಇವಿ ವಾಹನಗಳ ಖರೀದಿಗೆ ಗ್ರಾಹಕರು ಆಸಕ್ತಿ ಹೊಂದಿದ್ದರೂ ಹೆಚ್ಚಿನ ಮಟ್ಟದ ಚಾರ್ಜಿಂಗ್ ನಿಲ್ದಾಣ ಇಲ್ಲದಿರುವುದು ಇವಿ ವಾಹನಗಳ ಮಾರಾಟವು ತೀವ್ರಗೊಳ್ಳಲು ಹಿನ್ನಡೆಯಾಗುತ್ತಿದೆ.

ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಹೀಗಾಗಿ ಸೀಮಿತವಾಗಿರುವ ಇವಿ ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಿಸುವ ಮೂಲಕ ಗ್ರಾಹಕರನ್ನು ಇವಿ ಬಳಕೆಯತ್ತ ಸೆಳೆಯಲಾಗುತ್ತಿದ್ದು, ಇವಿ ವಾಹನಗಳ ಬಿಡುಗಡೆಯ ಜೊತೆಗೆ ಹಲವಾರು ಕಂಪನಿಗಳು ಇವಿ ಚಾರ್ಜಿಂಗ್ ನಿಲ್ದಾಣಗಳ ಮೇಲೂ ಹೆಚ್ಚಿನ ಆಸಕ್ತಿ ವಹಿಸುತ್ತಿವೆ.

ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಟಾಟಾ ಪವರ್ ಕಂಪನಿಯಲ್ಲಿ ನೋಂದಾಯಿತ ಎಲೆಕ್ಟ್ರಿಕ್ ವಾಹನ ಮಾಲೀಕರು ಈಗ ದೇಶಾದ್ಯಂತ ಯಾವುದೇ ಟಾಟಾ ಪವರ್ ಸ್ಟೇಷನ್‌ಗಳಲ್ಲಿ ತಮ್ಮ ವಾಹನಗಳನ್ನು ಸುಲಭವಾಗಿ ಚಾರ್ಜ್ ಮಾಡಬಹುದಾಗಿದ್ದು, ಚಾರ್ಜಿಂಗ್ ಸೌಲಭ್ಯವನ್ನು ಸುಲಭವಾಗಿಸಲು ಪ್ರತ್ಯೇಕವಾದ ಆ್ಯಪ್ ಮೂಲಕ ಚಾರ್ಜಿಂಗ್ ಸೇವೆಗಳನ್ನು ಒದಗಿಸಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದೆ.

ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಟಾಟಾ ಪವರ್ ಕಂಪನಿಯು ದೇಶಾದ್ಯಂತ 180 ನಗರಗಳಲ್ಲಿ 1,000 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಟಾಟಾ ಕಾರುಗಳಿಗೆ ಮಾತ್ರವಲ್ಲ ಎಲ್ಲಾ ರೀತಿಯ ಎಲೆಕ್ಟ್ರಿಕ್ ವಾಹನಗಳಿಗೂ ಚಾರ್ಜಿಂಗ್ ಸೌಲಭ್ಯಗಳನ್ನು ನೀಡುತ್ತದೆ.

ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಇದರ ಜೊತೆಗೆ ಟಾಟಾ ಪವರ್ ತನ್ನ ಗ್ರಾಹಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಎಲೆಕ್ಟ್ರಿಕ್ ವಾಹನ ತಯಾರಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಗ್ರಾಹಕರ ಯಾವುದೇ ಮಾದರಿಯ ಇವಿ ವಾಹನಗಳಿಗೆ ಚಾರ್ಜ್ ಮಾಡುವ ಅವಕಾಶ ನೀಡುತ್ತದೆ.

ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಟಾಟಾ ಪವರ್ ಕಂಪನಿಯು ಟಾಟಾ ಕಾರುಗಳಿಗೆ ಮಾತ್ರವಲ್ಲದೆ ಎಂಜಿ ಮೋಟಾರ್ಸ್, ಜಾಗ್ವಾರ್ ಲ್ಯಾಂಡ್ ರೋವರ್, ಟಿವಿಎಸ್ ಮೋಟಾರ್ಸ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಒಪ್ಪಂದ ಮಾಡಿಕೊಂಡಿರುವ ಕಂಪನಿಗಳ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸುವ ಗ್ರಾಹಕರು ಟಾಟಾ ಪವರ್‌ನ ಯಾವುದೇ ಚಾರ್ಜಿಂಗ್ ಸ್ಟೇಷನ್‌ಗಳಿಂದ ಚಾರ್ಜಿಂಗ್ ಮಾಡಬಹುದಾಗಿದೆ.

ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಇನ್ನು ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದರೂ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಇವಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಪವರ್

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

Most Read Articles

Kannada
English summary
Tata power installation over 1000 ev charging stations across cities
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X