ಡೀಲರ್ಸ್ ಮಟ್ಟದಲ್ಲಿ ಹೊಸ Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಟಾಟಾ ಮೋಟಾರ್ಸ್(Tata Motors) ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ತನ್ನ ಹೊಚ್ಚ ಹೊಸ ಪಂಚ್(Punch) ಮೈಕ್ರೊ ಎಸ್‌‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಾಗಿ ಈಗಾಗಲೇ ಡೀಲರ್ಸ್ ಮಟ್ಟದ ಬುಕ್ಕಿಂಗ್ ಪ್ರಕ್ರಿಯೆ ಜೋರಾಗಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರು ಖರೀದಿಗೆ ಇನ್ನು ಕೂಡಾ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸುವ ಮುನ್ನವೇ ಡೀಲರ್ಸ್ ಮಟ್ಟದಲ್ಲಿ ಆಸಕ್ತ ಗ್ರಾಹಕರು ಬುಕ್ಕಿಂಗ್ ಸಲ್ಲಿಕೆ ಮಾಡುತ್ತಿದ್ದು, ಹೊಸ ಕಾರು ಮಾದರಿಯನ್ನು ಆರಂಭದಲ್ಲೇ ಖರೀದಿಸಲು ಮೈಕ್ರೊ ಎಸ್‌ಯುವಿ ಕಾರು ಪ್ರಿಯರು ಮುಗಿಬಿದ್ದಿದ್ದಾರೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಅದರಲ್ಲೂ ಟಾಟಾ ಕಾರುಗಳಿಗೆ ಹೆಚ್ಚುತ್ತಿರುವ ಜನಪ್ರಿಯತೆ ಕೂಡಾ ಹೊಸ ಕಾರು ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನಕ್ಕೇರುವ ತವಕದಲ್ಲಿದ್ದು, ಹೊಸ ಕಾರಿನ ಟಾಟಾ ಕಂಪನಿಯು ಸಹ ಕಾರುಗಳ ಮಾರಾಟದಲ್ಲಿ ಶೇ.10 ಪಾಲು ಹೊಂದುವ ತವಕದಲ್ಲಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಸದ್ಯ ಮಾರುಕಟ್ಟೆಯಲ್ಲಿ ವಿವಿಧ ಕಾರು ಮಾದರಿಗಳ ಮೂಲಕ ಮಾರುತಿ ಸುಜುಕಿಯು ಸುಮಾರು ಶೇ.50 ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು, ಹೊಸ ಕಾರುಗಳ ಮಾದರಿಗಳ ಮೂಲಕ ಜನಪ್ರಿಯತೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಸಹ ಉತ್ತಮ ಮಾರುಕಟ್ಟೆ ಪಾಲು ತನ್ನದಾಗಿಸಿಕೊಳ್ಳಲು ಎದುರು ನೋಡುತ್ತಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಹೊಸ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಹೊಸ ಕಾರಿನ ಕುರಿತು ಈಗಾಗಲೇ ಒಂದೊಂದೆ ಮಾಹಿತಿ ಹಂಚಿಕೊಳ್ಳುತ್ತಿರುವ ಕಂಪನಿಯು ಎಂಟ್ರಿ ಲೆವಲ್ ಕಾರು ಮಾದರಿಗಳಲ್ಲೇ ಭಾರೀ ಬೇಡಿಕೆ ಪಡೆದುಕೊಳ್ಳುವ ಯೋಜನೆಯಲ್ಲಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಪಂಚ್ ಮೈಕ್ರೊ ಕಾರು ಮಾದರಿಯು ಸಣ್ಣ ಗಾತ್ರದ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಉತ್ತಮ ಚಾಲನಾ ವೈಶಿಷ್ಟ್ಯತೆಯನ್ನು ಪಡೆದುಕೊಂಡಿದ್ದು, ಆನ್ ರೋಡ್ ಮತ್ತು ಆಫ್ ರೋಡ್ ಎರಡು ಮಾದರಿಯ ಚಾಲನೆಗೂ ಹೊಸ ಕಾರು ಉತ್ತಮವಾಗಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಪಂಚ್ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್, ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಹಾಗೆಯೇ ಬೆಸ್ಟ್ ಗ್ರೌಂಡ್ ಕ್ಲಿಯೆರೆನ್ಸ್ ಮೂಲಕ ಆಫ್-ರೋಡ್ ಚಾಲನೆಯಲ್ಲೂ ಗಮನಸೆಳೆದಿರುವ ಪಂಚ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಕಾರ್ಯಕ್ಷಮತೆ ಹೊಂದಿದ್ದು, ಆಲ್‌ಟ್ರೊಜ್ ಕಾರು ಉತ್ಪಾದನೆಗಾಗಿ ಬಳಕೆ ಮಾಡಲಾಗುತ್ತಿರುವ ALFA-ARC ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿಯೇ ಹೊಸ ಕಾರು ಉತ್ಪಾದನೆಗೊಳ್ಳಲಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ನೆಕ್ಸಾನ್ ಮಾದರಿಯಲ್ಲೇ ಹೊರನೋಟ ಹೊಂದಿದ್ದರೂ ಹೊಸ ಕಾರು ಗಾತ್ರವು ನೆಕ್ಸಾನ್ ಮಾದರಿಗಿಂತಲೂ ತುಸು ಚಿಕ್ಕದಾಗಿರಲಿದ್ದು, ಪ್ರಮುಖ ಫೀಚರ್ಸ್‌ಗಳನ್ನು ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯಿಂದ ಎರವಲು ಪಡೆದುಕೊಳ್ಳಲಾಗಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಟಾಟಾ ಎಸ್‌ಯುವಿ ಸರಣಿಯಲ್ಲಿರುವ ಹ್ಯಾರಿಯರ್ ಮತ್ತು ಸಫಾರಿ ಮಾದರಿಗಳಿಂದಲೂ ಕೆಲವು ವಿನ್ಯಾಸಗಳ ಪ್ರೇರಣೆ ಹೊಂದಿರುವ ಪಂಚ್ ಕಾರು ಸಣ್ಣ ಗಾತ್ರದ ಕಾರುಗಳಲ್ಲೇ ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದ್ದು, ಕಾನ್ಸೆಪ್ಟ್ ಮಾದರಿಯಲ್ಲಿನ ಬಹುತೇಕ ಸ್ಪೋರ್ಟಿ ವಿನ್ಯಾಸಗಳನ್ನು ಉತ್ಪಾದನಾ ಮಾದರಿಯಲ್ಲೂ ಉಳಿಸಿಕೊಳ್ಳಲಾಗಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಪ್ರಯಾಣಿಕರ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಟಾಟಾ ಕಂಪನಿಯು ಸದ್ಯ ಪಂಚ್ ಕಾರಿನ ಉತ್ಪಾದನಾ ಮಾದರಿಯ ಹೊರಭಾಗದ ಚಿತ್ರವನ್ನು ಮಾತ್ರ ಹಂಚಿಕೊಂಡಿದ್ದು, ಶೀಘ್ರದಲ್ಲೇ ಹೊಸ ಕಾರಿನ ಇಂಟಿರಿಯರ್ ಜೊತೆಗೆ ಎಂಜಿನ್ ಆಯ್ಕೆಯ ಮಾಹಿತಿಯನ್ನು ಸಹ ಹಂತ ಹಂತವಾಗಿ ಬಹಿರಂಗಪಡಿಸಲಿದೆ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

Tata Punch ಕಾರು ಖರೀದಿಗೆ ಬುಕ್ಕಿಂಗ್ ಆರಂಭ!

ಹೊಸ ಪಂಚ್ ಕಾರು ಮಾರುಕಟ್ಟೆಯಲ್ಲಿರುವ ಮಾರುತಿ ಇಗ್ನಿಸ್, ಹ್ಯುಂಡೈ ಸ್ಯಾಂಟ್ರೊ ಜೊತೆಗೆ ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳ ಎಂಟ್ರಿ ಲೆವಲ್ ವೆರಿಯೆಂಟ್ ಪೈಪೋಟಿ ನೀಡುವ ನೀರಿಕ್ಷೆಯಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

Most Read Articles

Kannada
English summary
Tata punch car bookings started at dealers level details
Story first published: Tuesday, September 14, 2021, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X