ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಹೆಚ್ಚುತ್ತಿರುವ ಇಂಧನ ಬೆಲೆ, ವಾಯು ಮಾಲಿನ್ಯ ಮತ್ತು ವಾಹನಗಳ ಅಧಿಕ ಇನ್‌ಪುಟ್ ವೆಚ್ಚಗಳ ಸಮಸ್ಯೆಗಳಿಂದ ವಾಹನ ತಯಾರಕರು ಪರಿಸರ ಸ್ನೇಹಿ ವಾಹನಗಳತ್ತ ಹೆಚ್ಚಿನ ಗಮನಹರಿಸುತ್ತಿದೆ, ಈ ಸಮಸ್ಯೆಗಳಿಗೆ ತಕ್ಷಣದ ಪರಿಹಾರವೆಂಬಂತೆ ವಾಹನ ತಯಾರಕರು ಸಿಎನ್‌ಜಿ ಮಾದರಿಗಳತ್ತ ಗಮನಹರಿಸುತ್ತಿದ್ದಾರೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಸಿಎನ್‌ಜಿ ಮಾದರಿಗಳು ಪರಿಸರ ಸ್ನೇಹಿ ಮತ್ತು ಸುಧಾರಿತ ಮೈಲೇಜ್ ಅನ್ನು ನೀಡುತ್ತದೆ, ಮಾರುತಿ ಸುಜುಕಿ, ಹುಂಡೈ ಮತ್ತು ಟಾಟಾ ಮೋಟಾರ್ಸ್‌ನಂತಹ ಜನಪ್ರಿಯ ತಯಾರಕರು ಸಿಎನ್‌ಜಿ ಮಾದರಿಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಇತ್ತೀಚೆಗೆ ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಟಿಯಾಗೋ ಮತ್ತು ಟಿಗೊರ್ ಸಿಎನ್‌ಜಿ ಆವೃತ್ತಿಗಳು ಮುಂದಿನ ವರ್ಷ ಬಿಡುಗಡೆಯಾಗಲಿದೆ. ಸಿಎನ್‌ಜಿ-ಸ್ಪೆಕ್ ಪಂಚ್ ಮೈಕ್ರೋ ಎಸ್‌ಯುವಿಯ ಸ್ಪೈ ಶಾಟ್‌ಗಳು ಇತ್ತೀಚೆಗೆ ಬಹಿರಂಗವಾಗಿತ್ತು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಸಿಎನ್‌ಜಿ ರೂಪಾಂತರವನ್ನು ಸೇರಿಸುವುದರಿಂದ ಶ್ರೇಣಿಯನ್ನು ವಿಸ್ತರಿಸಲು ಮತ್ತು ಹೆಚ್ಚಿನ ಇಂಧನ ಉಳಿಸಲು ಬಯಸುವ ಗ್ರಾಹಕರನ್ನು ಆಕರ್ಷಿಸಲು ಖಂಡಿತವಾಗಿಯೂ ಸಹಾಯ ಮಾಡುತ್ತದೆ. ಟಾಟಾ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಅನ್ನು ಅನುಸರಿಸಿ ಅಲ್ಟ್ರೋಜ್ ಮತ್ತು ಪಂಚ್ ಶೀಘ್ರದಲ್ಲೇ ಇದೇ ರೀತಿಯ ಸಿಎನ್‌ಜಿ ರೂಪಾಂತರವನ್ನು ಪಡೆಯುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಸಾಮಾನ್ಯ ಪೆಟ್ರೋಲ್ ರೂಪಾಂತರಕ್ಕೆ ಹೋಲಿಸಿದರೆ, ಸಿಎನ್‌ಜಿಯಲ್ಲಿನ ಪವರ್ ಮತ್ತು ಟಾರ್ಕ್ ಅಂಕಿಅಂಶಗಳು ಸ್ವಲ್ಪ ಕಡಿಮೆಯಾಗಬಹುದು ಮತ್ತು ಇದು ಐದು-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ಲಭ್ಯವಿರಬಹುದು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಬ್ಯಾಡ್ಜ್ ಸೇರ್ಪಡೆಗಳನ್ನು ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ ಪಂಚ್ ಸಿಎನ್‌ಜಿ ಮಾದರಿಯಲ್ಲಿ ಯಾವುದೇ ಗಮನಾರ್ಹ ಬಾಹ್ಯ ಬದಲಾವಣೆಗಳನ್ನು ನಾವು ನಿರೀಕ್ಷಿಸುವುದಿಲ್ಲ. ಟಾಟಾ ಪಂಚ್ ಕಾರು ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಮೈಕ್ರೋ ಎಸ್‌ಯುವಿಗಳಲ್ಲಿ ಒಂದಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಸ್ಟ್ಯಾಂಡರ್ಡ್ ಟಾಟಾ ಪಂಚ್ ಮಾದರಿಯನ್ನು ಈ ವರ್ಷದ ಅಕ್ಟೋಬರ್‌ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಟಾಟಾ ಪಂಚ್ ಮಾದರಿಯು ನೂತನ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿಯಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಇನ್ನು ಈ ಹೊಸ ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ. ಈ ಹೊಸ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ. ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಈ ಕಾರಿನಲ್ಲಿ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಪವರ್ ಉತ್ಪಾದಿಸುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ, ಪಂಚ್ ಮೈಕ್ರೋ ಎಸ್‌ಯುವಿಯ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಬೆಸ್ ರೂಪಾಂತರದಲ್ಲಿಯು ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ. ಈ ಮೈಕ್ರೋ ಎಸ್‌ಯುವಿಯ ಪ್ಯೂರ್ ರೂಪಂತರದಲ್ಲಿ ಕಂಪನಿಯು ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಸ್ಯಾವಿ ಕಂಟ್ರೋಲ್, ಆರ್‌ಪಿಎಎಸ್, ಸೆಂಟ್ರೇಲ್ ಲಾಕಿಂಗ್ ಜೊತೆ ಕೀ, ಐಎಸಿ ಮತ್ತು ಇಎಸ್ಎಸ್ ಟೆಕ್ನಾಲಜಿ, ಫ್ರಂಟ್ ಪವರ್ ವಿಂಡೋ, ಟಿಲ್ಟ್ ಸ್ಟೀರಿಂಗ್, 90 ಡಿಗ್ರಿ ಡೋರ್ ಓಪನ್, ರಿಯರ್ ಪ್ಲ್ಯಾಟ್ ಫ್ಲೊರ್, ಬ್ಲ್ಯಾಕ್ ಒಡಿಹೆಚ್, ಹ್ಯುಮಿನಿಟಿ ಕ್ರೊಮ್ ಲೈನ್, ಪೆಟೆಂಡ್ ಬಂಪರ್, ಡೋರ್, ವೀಲ್ಹ್ ಆರ್ಚ್ ಮತ್ತು ಸಿಲ್ ಕ್ಲಾಡಿಂಗ್ ಜೋಡಣೆ ಮಾಡಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಪಂಚ್ ಹೈ ಎಂಡ್ ಮಾದರಿಯಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಆರ್16 ಡೈಮಂಡ್ ಕಟ್ ಅಲಾಯ್ ವ್ಹೀಲ್, ರೂಫ್ ರೈಲ್ಸ್, 7 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಹೆಡ್‌ಲ್ಯಾಂಪ್, ರೈನ್ ಸೆನ್ಸಿಂಗ್ ವೈಪರ್, ಆಟೋ ಫೋಡ್ಲಿಂಗ್ ರಿಯರ್ ವ್ಯೂ ಮಿರರ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್ ಸಿಸ್ಟಂ, ಕೂಲ್ಡ್ ಗ್ಲೊ ಬಾಕ್ಸ್, ರಿಯರ್ ವೈಪರ್ ಪ್ಲಸ್ ವಾಷ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ಹಿಂಬದಿಯ ಆಸನದಲ್ಲಿ ಆರ್ಮ್ ರೆಸ್ಟ್ ಮತ್ತು ಲೆದರ್ ಕೊಟಿಂಗ್ ಹೊಂದಿರುವ ಸ್ಟೀರಿಂಗ್ ಮತ್ತು ಗೇರ್ ನಾಬ್ ನೀಡಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ Tata Punch ಸಿಎನ್‌ಜಿ ವರ್ಷನ್

ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಪಂಚ್ ಮಾದರಿಯು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್ ಮತ್ತು 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಅನ್ನು ಹೊಂದಿದೆ.

Most Read Articles

Kannada
English summary
Tata punch cng version could be launch soon find here all details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X