Just In
- 6 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 7 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 7 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 9 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಆಕರ್ಷಕ ಕ್ಯಾಬಿನ್ ಹೊಂದಿರಲಿದೆ Tata Punch
ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಹೊಸ ಪಂಚ್(Punch) ಮೈಕ್ರೊ ಎಸ್ಯುವಿ ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಎಂಟ್ರಿ ಲೆವಲ್ ಕಾರುಗಳಲ್ಲಿ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.
ಹೊಸ ಪಂಚ್ ಕಾರನ್ನು ಟಾಟಾ ಕಂಪನಿಯು ಆಯ್ದ ಡೀಲರ್ಸ್ ಯಾರ್ಡ್ಗಳಲ್ಲಿ ಈಗಾಗಲೇ ಸ್ಟಾಕ್ ಮಾಡುತ್ತಿದ್ದು, ಹೊಸ ಕಾರು ದಸರಾ ವೇಳೆಗೆ ಮಾರುಕಟ್ಟೆ ಪ್ರವೇಶಿಸಲಿದೆ. ಹೊಸ ಕಾರು ಖರೀದಿಗೆ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಬುಕ್ಕಿಂಗ್ ದಾಖಲಾಗುತ್ತಿದ್ದು, ಹೊಸ ಕಾರಿನ ಫೀಚರ್ಸ್, ಕಾರಿನ ಚಾಲನಾ ಶೈಲಿ ಮತ್ತು ವಿವಿಧ ಬಣ್ಣಗಳ ಆಯ್ಕೆಯು ಗ್ರಾಹಕರನ್ನು ಸೆಳೆಯುತ್ತಿವೆ.
ಎಂಟ್ರಿ ಲೆವಲ್ ಕಾರುಗಳಲ್ಲೇ ವಿನೂತನ ಫೀಚರ್ಸ್ ಮತ್ತು ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನ ಎಂಜಿನ್ ಮಾಹಿತಿ ಹೊರತುಪಡಿಸಿ ಇನ್ನುಳಿದ ಬಹುತೇಕ ಫೀಚರ್ಸ್ಗಳನ್ನು ಬಹಿರಂಗಪಡಿಸಿದೆ.
ಹೊಸ ಕಾರಿನ ವಿವಿಧ ಟೀಸರ್ಗಳ ಮೂಲಕ ಹೊಸ ಕಾರಿನ ವಿನ್ಯಾಸ ಬಹಿರಂಗಪಡಿಸಿರುವ ಟಾಟಾ ಕಂಪನಿಯು ಹೊಸ ಕಾರನ್ನು ಪ್ರಮುಖ ಐದು ಬಣ್ಣಗಳ ಆಯ್ಕೆಯಲ್ಲಿ ಪರಿಚಯಿಸಬಹುದಾಗಿದ್ದು, ಹೊಸ ಕಾರಿನಲ್ಲಿ ಡ್ಯುಯಲ್ ಟೋನ್ ಮಾದರಿಯನ್ನು ಸಹ ಬಿಡುಗಡೆ ಮಾಡಬಹುದಾಗಿದೆ.
ಪಂಚ್ ಕಾರಿನ ಪ್ರಮುಖ ಮೂರು ಬಣ್ಣಗಳ ಆಯ್ಕೆಯು ಈಗಾಗಲೇ ಕಂಪನಿಯ ಟೀಸರ್ಗಳಲ್ಲಿ ಬಹಿರಂಗವಾಗಿದ್ದು, ಹೊಸ ಕಾರಿನಲ್ಲಿ ಅರಿಜೊನಾ ಬ್ಲ್ಯೂ, ಡೇ ಟೋನಾ ಗ್ರೆ, ಪ್ಯೂರ್ ಸಿಲ್ವರ್, ಆರೇಂಜ್ ಮತ್ತು ವೈಟ್ ಬಣ್ಣಗಳ ಆಯ್ಕೆ ಹೊಂದಿರಲಿದೆ.
ಸದ್ಯ ಡೀಲರ್ಸ್ ಯಾರ್ಡ್ಗಳ ಹೊಸ ಕಾರನ್ನು ಸ್ಟಾಕ್ ಮಾಡುತ್ತಿರುವ ಟಾಟಾ ಕಂಪನಿಯು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಹೊಸ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಹೊಸ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಅತ್ಯುತ್ತಮವಾಗಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಕಾರ್ಯಕ್ಷಮತೆಯೊಂದಿಗೆ ಎಂಟ್ರಿ ಲೆವಲ್ ಕಾರುಗಳ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲಿದೆ.
ಪಂಚ್ ಮೈಕ್ರೊ ಎಸ್ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಹೊಸ ಕಾರಿನ ಕುರಿತು ಈಗಾಗಲೇ ಒಂದೊಂದೆ ಮಾಹಿತಿ ಹಂಚಿಕೊಳ್ಳುತ್ತಿರುವ ಕಂಪನಿಯು ಹೊಸ ಕಾರಿನ ಬಗೆಗೆ ಸಾಕಷ್ಟು ಕುತೂಹಲ ಹುಟ್ಟುಹಾಕುತ್ತಿದೆ.
ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್, ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.
ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.
ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.
ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.
ಪಂಚ್ ಮೈಕ್ರೊ ಎಸ್ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿವೆ.
ಈ ಮೂಲಕ ಪಂಚ್ ಕಾರು ಮಾರುತಿ ಇಗ್ನಿಸ್, ಹ್ಯುಂಡೈ ಸ್ಯಾಂಟ್ರೊ ಜೊತೆಗೆ ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳ ಎಂಟ್ರಿ ಲೆವಲ್ ವೆರಿಯೆಂಟ್ಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ಗಳನ್ನು ಪಡೆದುಕೊಳ್ಳಲಿರುವ ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.
Source: Ajesh Kilikar/Facebook