ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ Tata Punch

Tata Mootors ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಹೊಚ್ಚ ಹೊಸ ಮೈಕ್ರೊ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆ ಮಾಡಲಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಹೆಬಿಎಕ್ಸ್ ಹೆಸರಿನ ಅನಾವರಣಗೊಂಡಿದ್ದ ಮೈಕ್ರೊ ಎಸ್‌ಯುವಿ ಮಾದರಿಯನ್ನು Tata Motors ಕಂಪನಿಯು ಇದೀಗ ಬಿಡುಗಡೆ ಮಾಡಲು ಸಜ್ಜಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಅಧಿಕೃತ ಹೆಸರನ್ನು ಅನಾವರಣಗೊಳಿಸಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

Tata ಕಂಪನಿಯು ಹೊಸ ಮೈಕ್ರೊ ಎಸ್‌ಯುವಿ ಮಾದರಿಯನ್ನು Punch (ಪಂಚ್) ಹೆಸರಿನಲ್ಲಿ ಮಾರಾಟ ಮಾಡಲು ನಿರ್ಧರಿಸಿದ್ದು, ಹೊಸ ಕಾರು ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ನೀರಿಕ್ಷೆಯಲ್ಲಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

ಹೊಸ ಕಾರನ್ನು Tata ಕಂಪನಿಯು ಮೊದಲ ಬಾರಿಗೆ H2X ನಂತರ HBX ಕೋಡ್‌ನೆಮ್ ಮೇಲೆ ಅನಾವರಣಗೊಳಿಸಿ Hornbill ಹೆಸರಿನಲ್ಲಿ ಬಿಡುಗಡೆ ಮಾಡಬಹುದು ಎಂದು ನೀರಿಕ್ಷಿಸಲಾಗಿತ್ತು. ಆದರೆ ಅಚ್ಚರಿ ಎಂಬಂತೆ ಹೊಸ ಕಾರಿನ ಬಿಡುಗಡೆಯ ಹೊತ್ತಿಗೆ Punch ಹೆಸರಿನಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

Tata Motors ಕಂಪನಿಯು ಹೊಸ Punch ಕಾರನ್ನು Altroz ಕಾರು ಉತ್ಪಾದನೆಗಾಗಿ ಬಳಕೆ ಮಾಡಲಾಗಿರುವ ALFA-ARC ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿಯೇ ಉತ್ಪಾದನೆ ಮಾಡಲಾಗುತ್ತಿದ್ದು, Nexon ಮಾದರಿಯಲ್ಲೇ ಹೊರನೋಟ ಹೊಂದಿರುವ ಹೊಸ ಕಾರು ಗಾತ್ರದಲ್ಲಿ ಮಾತ್ರ ತುಸು ಚಿಕ್ಕದಾಗಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

ಎಸ್‌ಯುವಿ ಸರಣಿಯಲ್ಲಿ Harrier ಮತ್ತು Safari ಮಾದರಿಯಲ್ಲೇ ಹಲವಾರು ವಿನ್ಯಾಸವನ್ನು ಪಡೆದುಕೊಂಡಿರುವ Punch ಕಾರು ಸಣ್ಣ ಗಾತ್ರದ ಕಾರುಗಳಲ್ಲೇ ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದ್ದು, ಕಾನ್ಸೆಪ್ಟ್ ಮಾದರಿಯಲ್ಲಿನ ಹಲವು ವಿನ್ಯಾಸಗಳನ್ನು ಉತ್ಪಾದನಾ ಮಾದರಿಯಲ್ಲೂ ಉಳಿಸಿಕೊಳ್ಳಲಾಗಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

ಹೊಸ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

Tata ಕಂಪನಿಯು ಸದ್ಯ Punch ಕಾರಿನ ಉತ್ಪಾದನಾ ಮಾದರಿಯ ಹೊರಭಾಗದ ಚಿತ್ರವನ್ನು ಮಾತ್ರ ಹಂಚಿಕೊಂಡಿದ್ದು, ಶೀಘ್ರದಲ್ಲೇ ಹೊಸ ಕಾರಿನ ಇಂಟಿರಿಯರ್ ಜೊತೆಗೆ ಎಂಜಿನ್ ಆಯ್ಕೆಯ ಮಾಹಿತಿಯನ್ನು ಸಹ ಹಂಚಿಕೊಳ್ಳಲಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

ಹೊಸ ಕಾರಿನಲ್ಲಿ Tata ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

Punch ಮೈಕ್ರೊ ಎಸ್‌ಯುವಿ ಕಾರಿನಲ್ಲಿ Tata ಕಂಪನಿಯು 1.2-ಲೀಟರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಗೆ ಈಗಾಗಲೇ ಅಧಿಕೃತ ಚಾಲನೆ ನೀಡಿರುವ Tata ಕಂಪನಿಯು ಮುಂಬರುವ ಸೆಪ್ಟೆಂಬರ್ ಮಧ್ಯಂತರದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನುಅನಾವರಣಗೊಳಿಸಿ ಹೊಸ ಕಾರಿನ ಮಾಹಿತಿ ಹಂಚಿಕೊಳ್ಳುವ ಮೂಲಕ ಬುಕ್ಕಿಂಗ್ ಆರಂಭಿಸಲಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

ಹೊಸ Punch ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲಿದೆ ಟಾಟಾ ಮೋಟಾರ್ಸ್ ನಿರ್ಮಾಣದ ಹೊಸ ಪಂಚ್ ಕಾರು

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ Tata ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು Maruti Suzuki Ignis ಜೊತೆಗೆ Nissan Magnite ಮತ್ತು Renault Kiger ಕಾರುಗಳ ಎಂಟ್ರಿ ಲೆವಲ್ ವೆರಿಯೆಂಟ್ ಪೈಪೋಟಿ ನೀಡುವ ನೀರಿಕ್ಷೆಯಿದೆ.

Article Published On: Monday, August 23, 2021, 14:40 [IST]
English summary
Tata punch micro suv name revealed details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+