ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಬಹುನೀರಿಕ್ಷಿತ ಟಾಟಾ ಪಂಚ್(Tata Punch) ಮೈಕ್ರೊ ಎಸ್‌ಯುವಿ ಮಾದರಿಯು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲೇ ವಿನೂತನ ಫೀಚರ್ಸ್ ಮತ್ತು ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರಿನ ಖರೀದಿಗೆ ಈಗಾಗಲೇ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭವಾಗಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಶೀಘ್ರದಲ್ಲೇ ಅನಾವರಣಗೊಳಿಸುವ ಮೂಲಕ ಬುಕ್ಕಿಂಗ್ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಿದೆ. ಆದರೆ ಹೊಸ ಕಾರು ಖರೀದಿಗೆ ಎಂಟ್ರಿ ಲೆವಲ್ ಕಾರು ಪ್ರಿಯರು ಆರಂಭದಲ್ಲೇ ಹೊಸ ಕಾರು ವಿತರಣೆ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದು, ಹೊಸ ಕಾರು ಖರೀದಿಗೆ ಡೀಲರ್ಸ್ ಮಟ್ಟದಲ್ಲಿ ಸಾವಿರಾರು ಗ್ರಾಹಕರು ಈಗಾಗಲೇ ರೂ.11 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ದಾಖಲಿಸುತ್ತಿದ್ದಾರೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹೊಸ ಕಾರು ಬಿಡುಗಡೆಯ ನಂತರ ಪ್ರತಿ ತಿಂಗಳು 8 ಸಾವಿರದಿಂದ 10 ಸಾವಿರ ಯುನಿಟ್ ಮಾರಾಟಗೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು ಖರೀದಿಗೆ ಕನಿಷ್ಠ 4 ತಿಂಗಳಿನಿಂದ 6 ತಿಂಗಳ ಕಾಲ ಕಾಯುವಿಕೆ ಅವಧಿಯು ನಿಗದಿಯಾಗಬಹುದಾಗಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹೀಗಾಗಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಕ್ಕೂ ಮುನ್ನ ಡೀಲರ್ಸ್ ಮಟ್ಟದ ಗ್ರಾಹಕರು ತಮ್ಮ ನೆಚ್ಚಿನ ಕಾರನ್ನು ಕಾಯ್ದಿರಿಸುತ್ತಿದ್ದು, ಹೊಸ ಕಾರಿನ ಟೀಸರ್ ಮೂಲಕವೇ ಕಂಪನಿಯು ಗ್ರಾಹಕರಲ್ಲಿ ಕುತೂಹಲ ಹುಟ್ಟುಹಾಕುತ್ತಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹೊಸ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಅತ್ಯುತ್ತಮವಾಗಿದ್ದು, ಹೊಸ ಕಾರಿನ ವಿವಿಧ ಬಣ್ಣಗಳ ಆಯ್ಕೆ ಕೂಡಾ ಆಕರ್ಷಕವಾಗಿದೆ. ಇತ್ತೀಚೆಗೆ ಹೊಸ ಕಾರಿನ ಬ್ಲ್ಯೂ ಮತ್ತು ಆರೇಂಜ್ ಬಣ್ಣದ ಆಯ್ಕೆಯು ಹೊಸ ಕಾರಿಗೆ ಪ್ರೀಮಿಯಂ ಲುಕ್ ನೀಡುತ್ತಿದ್ದು, ಶೀಘ್ರದಲ್ಲೇ ಹೊಸ ಕಾರಿನ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿವೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಬೆಸ್ಟ್ ಗ್ರೌಂಡ್ ಕ್ಲಿಯೆರೆನ್ಸ್ ಮೂಲಕ ಆಫ್-ರೋಡ್ ಚಾಲನೆಯಲ್ಲೂ ಗಮನಸೆಳೆಯಲಿರುವ ಪಂಚ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಕಾರ್ಯಕ್ಷಮತೆ ಹೊಂದಿದ್ದು, ಹೊಸ ಕಾರು ಮುಂಬರುವ ದಸರಾ ವೇಳೆಗೆ ಮಾರುಕಟ್ಟೆ ಪ್ರವೇಶಿಸಲಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರು ಖರೀದಿಗೆ ಇನ್ನು ಕೂಡಾ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸುವ ಮುನ್ನವೇ ಡೀಲರ್ಸ್ ಮಟ್ಟದಲ್ಲಿ ಆಸಕ್ತ ಗ್ರಾಹಕರು ಬುಕ್ಕಿಂಗ್ ಸಲ್ಲಿಕೆ ಮಾಡುತ್ತಿದ್ದು, ಹೊಸ ಕಾರು ಮಾದರಿಯನ್ನು ಆರಂಭದಲ್ಲೇ ಖರೀದಿಸಲು ಮೈಕ್ರೊ ಎಸ್‌ಯುವಿ ಕಾರು ಪ್ರಿಯರು ಮುಗಿಬಿದ್ದಿದ್ದಾರೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಪಂಚ್ ಕಾರು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಆಲ್‌ಟ್ರೊಜ್ ಕಾರು ಉತ್ಪಾದನೆಗಾಗಿ ಬಳಕೆ ಮಾಡಲಾಗಿರುವ ALFA-ARC ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿಯೇ ಉತ್ಪಾದನೆ ಮಾಡಲಾಗುತ್ತಿದ್ದು, ನೆಕ್ಸಾನ್ ಮಾದರಿಯಲ್ಲೇ ಹೊರನೋಟ ಹೊಂದಿರುವ ಹೊಸ ಕಾರು ಗಾತ್ರದಲ್ಲಿ ಮಾತ್ರವೇ ತುಸು ಚಿಕ್ಕದಾಗಿರಲಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹೊಸ ಕಾರುಗಳ ಮಾದರಿಗಳ ಮೂಲಕ ಜನಪ್ರಿಯತೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಕಾರಿನ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಹೊಸ ಕಾರಿನ ಮೂಲಕ ಉತ್ತಮ ಮಾರುಕಟ್ಟೆ ಪಾಲು ತನ್ನದಾಗಿಸಿಕೊಳ್ಳಲು ಎದುರು ನೋಡುತ್ತಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹೊಸ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಹೊಸ ಕಾರಿನ ಕುರಿತು ಈಗಾಗಲೇ ಒಂದೊಂದೆ ಮಾಹಿತಿ ಹಂಚಿಕೊಳ್ಳುತ್ತಿರುವ ಕಂಪನಿಯು ಎಂಟ್ರಿ ಲೆವಲ್ ಕಾರು ಮಾದರಿಗಳಲ್ಲೇ ಭಾರೀ ಬೇಡಿಕೆ ಪಡೆದುಕೊಳ್ಳುವ ಯೋಜನೆಯಲ್ಲಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಪಂಚ್ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್, ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

ವಿನೂತನ ಬಣ್ಣಗಳ ಆಯ್ಕೆ ಹೊಂದಿರುವ Tata Punch ಖರೀದಿಗೆ ಡಿಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

Most Read Articles

Kannada
English summary
Tata punch micro suv orange colour spied outunofficial bookings started
Story first published: Thursday, September 16, 2021, 23:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X