ವಿನೂತನ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Tata Punch ಮೈಕ್ರೊ ಎಸ್‌ಯುವಿ
ಬಹುನೀರಿಕ್ಷಿತ ಟಾಟಾ ಮೋಟಾರ್ಸ್(Tata Motors) ನಿರ್ಮಾಣದ ಪಂಚ್(Punch) ಮೈಕ್ರೊ ಎಸ್‌ಯುವಿ ಮಾದರಿಯು ಉತ್ಪಾದನಾ ಮಾದರಿಯೊಂದಿಗೆ ಭಾರತದಲ್ಲಿಅನಾವರಣಗೊಂಡಿದ್ದು, ದಸರಾ ಸಂಭ್ರಮಕ್ಕೆ ಬಿಡುಗಡೆಯಾಗಲಿರುವ ಹೊಸ ಕಾರಿನ ಖರೀದಿಗೆ ಇಂದಿನಿಂದಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಿದೆ.

ಹೊಸ ಪಂಚ್ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ತಾಂತ್ರಿಕ ಅಂಶಗಳ ಮಾಹಿತಿ ಹಂಚಿಕೊಂಡ ಟಾಟಾ ಮೋಟಾರ್ಸ್ ಕಂಪನಿಯು ರೂ. 21 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಆಫ್ ರೋಡ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಂಡಿದೆ.

ಪಂಚ್ ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿದ್ದು, ಹೊಸ ಕಾರು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳಲಿದೆ.

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಹೊಸ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ಪಂಚ್ ಕಾರಿನಲ್ಲಿ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಮಾದರಿಯಾಗಲಿದ್ದು, ವಿವಿಧ 12 ಮಾದರಿಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ಇದರೊಂದಿಗೆ ಹೊಸ ಪಂಚ್ ಕಾರಿನಲ್ಲಿರುವ ಫೀಚರ್ಸ್‌ಗಳು, ಕಾರಿನ ಚಾಲನಾ ಶೈಲಿ ಮತ್ತು ವಿವಿಧ ಬಣ್ಣಗಳ ಆಯ್ಕೆಯು ಗ್ರಾಹಕರನ್ನು ಸೆಳೆಯಲಿದ್ದು, ಮಾರುಕಟ್ಟೆಯಲ್ಲಿರುವ ಪ್ರಮುಖ ಎಂಟ್ರಿ ಲೆವಲ್ ಕಾರು ಮಾದರಿಗಳಿಗೆ ಟಾಟಾ ಪಂಚ್ ಭರ್ಜರಿ ಪೈಪೋಟಿ ನೀಡಲಿದೆ.

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದ್ದು, 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್ ಪಡೆದುಕೊಳ್ಳಲಿರುವ ಟಾಟಾ ಪಂಚ್ ಕಾರು ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, ವೆರಿಯೆಂಟ್‌ಗಳಿಗೆ ಅನುಗುಣವಾಗಿ 15 ಮತ್ತು 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಜೋಡಿಸಿದೆ.

ಜೊತೆಗೆ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ಫೀಚರ್ಸ್‌ಗಳನ್ನು ನೀಡಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೊಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

ಹಾಗೆಯೇ ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಎಸಿ ಕಂಟ್ರೋಲ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ರಿಯರ್ ಆರ್ಮ್ ರೆಸ್ಟ್, ಲೆದರ್ ಸ್ಟೀರಿಂಗ್ ಮತ್ತು ಗೇರ್ ನಾಬ್, 5 ಹಂತದಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್, 90 ಡಿಗ್ರಿ ಡೋರ್ ಓಪನ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದೆ.

ಇನ್ನು ಹೊಸ ಕಾರನ್ನು ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಪರಿಚಯಿಸಲಾಗುತ್ತಿದ್ದು, ಹೊಸ ಕಾರು ಮಾರುತಿ ಸುಜುಕಿ ಸ್ವಿಫ್ಟ್ ಮತ್ತು ಹ್ಯುಂಡೈ ಐ10 ನಿಯೋಸ್ ಮಾದರಿಯಲ್ಲಿಯೇ ವ್ಹೀಲ್ ಬೆಸ್ ಹೊಂದಿದೆ.

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಗಳಲ್ಲಿ ಐರಾ ಕಾರ್ ಟೆಕ್ನಾಲಜಿ ನೀಡಲಾಗಿದೆ.

ಒಂದೇ ಸೂರಿನಡಿ 27 ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಐರಾ(iRA) ಸಹಕಾರಿಯಾಗಿದ್ದು,ಸ್ಮಾರ್ಟ್‌ಫೋನ್ ಸಂಪರ್ಕಿತ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನವನ್ನು ಕನೆಕ್ಟ್ ನೆಕ್ಸ್ಟ್ ಎಂಬ ಡೆಡಿಕೇಟೆಡ್ ಆ್ಯಪ್ ಮೂಲಕವೇ ಕಾರಿನ ಹಲವು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.

ಐರಾ ಟೆಕ್ನಾಲಜಿಯ ಮೂಲಕ ಕಾರಿನ ರಿಮೋಟ್ ಲಾಕ್/ಅನ್ ಲಾಕ್, ರಿಮೋಟ್ ಹಾರ್ನ್, ಡಿಸ್ಟೆನ್ಸ್ ಟು ಎಂಟಿ ಚೆಕ್, ಸೆಕ್ಯೂರಿಟಿ ಸ್ಟೆಟಸ್, ಲೈವ್ ವೆಹಿಕಲ್ ಡಯಾಗ್ನೋಸ್ಟಿಕ್ಸ್ ಸೇರಿದಂತೆ ಹಲವಾರು ಲೋಕೇಶನ್ ಬೆಸ್ಡ್ ಸರ್ವೀಸ್'ಗಳನ್ನು ನೀಡಲಿದ್ದು, ಆಲ್‌ಟ್ರೊಜ್ ಐ-ಟರ್ಬೊ ನಂತರ ಇದೀಗ ಪಂಚ್ ಮಾದರಿಯಲ್ಲಿ ಜೋಡಿಸಲಾಗುತ್ತಿದೆ.

ಐರಾದಲ್ಲಿರುವ ವಾಯ್ಸ್ ಅಸಿಸ್ಟೆನ್ಸ್ ಸೌಲಭ್ಯದೊಂದಿಗೆ ಇಂಗ್ಲಿಷ್, ಹಿಂದಿ ಸೇರಿದಂತೆ 70ಕ್ಕೂ ಹೆಚ್ಚು ಭಾಷೆಗಳಲ್ಲಿನ ವಾಯ್ಸ್ ಕಮಾಂಡ್‌ಗಳನ್ನು ಅರ್ಥಮಾಡಿಕೊಳ್ಳಲಿದ್ದು, ಕಾರು ಪ್ರಯಾಣದ ವೇಳೆ ಯಾವುದೇ ಮ್ಯಾನುವಲ್ ಬಟನ್ ಬಳಕೆ ಮಾಡದೆ ನಿಮ್ಮ ಅಗತ್ಯ ಸೇವೆಗಳನ್ನು ಧ್ವನಿ ಗ್ರಹಿಕೆಯ ಮೂಲಕವೇ ಸೇವೆ ಪಡೆದುಕೊಳ್ಳಬಹುದಾಗಿದೆ.


Click it and Unblock the Notifications