ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಬಹುನೀರಿಕ್ಷಿತ ಪಂಚ್‌(Punch) ಮೈಕ್ರೊ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರನ್ನು ಕಂಪನಿಯು ಪ್ರಮುಖ ಕಾರು ಮಾದರಿಗಳಾದ ನೆಕ್ಸಾನ್, ಹ್ಯಾರಿಯರ್ ಮತ್ತು ಸಫಾರಿ ಮಾದರಿಯಲ್ಲೇ ಅತ್ಯುತ್ತಮ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಕಾರು ಉತ್ಪಾದನೆಯಲ್ಲಿ ಗುಣಮಟ್ಟ ಕಾಯ್ದುಕೊಂಡಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಹೊಸ ಪಂಚ್ ಕಾರಿನಲ್ಲಿ ಟಾಟಾ ಕಂಪನಿಯು ಹಲವಾರು ಸೆಗ್ಮೆಂಟ್ ಫಸ್ಟ್ ಸುರಕ್ಷಾ ಫೀಚರ್ಸ್‌ಗಳನ್ನು ಅಳವಡಿಸಿದ್ದು, ಭಾರತೀಯ ಆಟೋ ಉದ್ಯಮ ಇತಿಹಾಸದಲ್ಲಿಯೇ ಎಂಟ್ರಿ ಲೆವಲ್ ಕಾರು ಮಾದರಿಯೊಂದು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಪ್ರಮಾಣದ ಸೇಫ್ಟಿ ರೇಟಿಂಗ್ಸ್ ಪಡೆದುಕೊಳ್ಳುವಲ್ಲಿ ಪಂಚ್ ಯಶಸ್ವಿಯಾಗಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಹೊಸ ಪಂಚ್ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದು, ಸೇಫ್ಟಿ ರೇಟಿಂಗ್ಸ್ ಕುರಿತಾಗಿ ಟಾಟಾ ಕಂಪನಿಯೇ ತನ್ನ ಅಧಿಕೃತ ವೆಬ್‌ಸೈಟ್ ಬಹಿರಂಗಪಡಿಸಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಹೊಸ ಕಾರಿನ ತಾಂತ್ರಿಕ ಅಂಶಗಳು ಮತ್ತು ಸುರಕ್ಷಾ ಫೀಚರ್ಸ್‌ಗಳ ಕುರಿತಾಗಿ ಅಧಿಕೃತ ಮಾಹಿತಿಗಳನ್ನು ಹಂಚಿಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಹೊಂದಿರುವ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹೊಸ ಕಾರು ಬಿಡುಗಡೆಯ ನಂತರವಷ್ಟೇ ಕ್ರ್ಯಾಶ್ ಟೆಸ್ಟಿಂಗ್ ವಿಡಿಯೋ ಬಿಡುಗಡೆಯಾಗಬಹುದಾಗಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಗ್ಲೋಬಲ್ ಎನ್‌ಸಿಎಪಿ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ಸ್ ಕುರಿತಾಗಿ ಟಾಟಾ ಕಂಪನಿಯು ಮಾಹಿತಿ ಹಂಚಿಕೊಂಡಿದ್ದರೂ ಗ್ಲೋಬಲ್ ಎನ್‌ಸಿಎಪಿ ಕಂಪನಿಯು ಈ ಕುರಿತಾಗಿ ಯಾವುದೇ ರೀತಿಯ ಮಾಹಿತಿ ಬಿಡುಗಡೆ ಮಾಡಿಲ್ಲವಾದರೂ ಹೊಸ ಕಾರು ಬಿಡುಗಡೆಯ ನಂತರವಷ್ಟೇ ಕ್ರ್ಯಾಶ್ ಟೆಸ್ಟಿಂಗ್ ವಿಡಿಯೋ ಪ್ರಕಟವಾಗುವ ಸಾಧ್ಯತೆಗಳಿವೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಒಟ್ಟಿನಲ್ಲಿ ಕಾರುಗಳ ಸುರಕ್ಷತೆ ಕುರಿತಂತೆ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಎಂಟ್ರಿ ಲೆವಲ್ ಕಾರು ಮಾದರಿಯಲ್ಲೂ ಗರಿಷ್ಠ ಸೇಫ್ಟಿ ರೇಟಿಂಗ್ಸ್ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಕಾರು ಅಪಘಾತಗಳಲ್ಲಿ ಪ್ರಾಣಹಾನಿಯನ್ನು ತಪ್ಪಿಸಲು ಗರಿಷ್ಠ ಪ್ರಮಾಣದ ಸೇಫ್ಟಿ ರೇಟಿಂಗ್ಸ್ ಅವಶ್ಯವಕವಾಗಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಹೊಸ ವಾಹನಗಳಲ್ಲಿ ಸುರಕ್ಷತೆ ಕುರಿತಂತೆ ವಿಶೇಷ ಕಾಳಜಿ ವಹಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಎಲ್ಲಾ ಕಾರು ಮಾದರಿಗಳಲ್ಲೂ ಗರಿಷ್ಠ ಸುರಕ್ಷಾ ಫೀಚರ್ಸ್‌ಗಳನ್ನು ಅಳವಡಿಸುತ್ತಿದ್ದು, ನೆಕ್ಸಾನ್ ಮಾದರಿಯು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಕಂಪನಿಯು ಇತರೆ ಕಾರುಗಳ ಸುರಕ್ಷತೆಯಲ್ಲೂ ಗಮನಾರ್ಹ ಬದಲಾವಣೆ ತಂದಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಟಾಟಾ ನಿರ್ಮಾಣದ ಟಿಯಾಗೋ ಮತ್ತು ಟಿಗೋರ್ ಕಾರುಗಳು 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದರೆ ನೆಕ್ಸಾನ್, ಹ್ಯಾರಿಯರ್ ಮತ್ತು ಸಫಾರಿ ಕಾರುಗಳು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗುತ್ತಿರುವ ಪಂಚ್ ಕಾರು ಕೂಡಾ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ ಎಂದು ಟಾಟಾ ಕಂಪನಿಯು ಮಾಹಿತಿ ನೀಡಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಇನ್ನು ಅಲ್ಫಾ ಪ್ಲಾಟ್‌ಫಾರ್ಮ್ ಆಧರಿಸಿರುವ ಹೊಸ ಪಂಚ್ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಹೊಸ ಕಾರು ವಿವಿಧ 12 ಮಾದರಿಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಪಂಚ್ ಕಾರಿನಲ್ಲಿ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದ್ದು, 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಗಳಲ್ಲಿ ಐರಾ ಕಾರ್ ಟೆಕ್ನಾಲಜಿ ನೀಡಲಾಗಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, ವೆರಿಯೆಂಟ್‌ಗಳಿಗೆ ಅನುಗುಣವಾಗಿ 15 ಮತ್ತು 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಜೋಡಿಸಿದೆ.

ಎಂಟ್ರಿ ಲೆವಲ್ ಕಾರುಗಳಲ್ಲಿ ಮೊದಲ ಬಾರಿಗೆ Tata Punch ಮಾದರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೊಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

Article Published On: Monday, October 11, 2021, 11:22 [IST]
English summary
Tata punch micro suv safety rating 5 star global ncap details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+