Punch ಕಾರಿನ ಸೈಡ್ ಪ್ರೊಫೈಲ್ ಡಿಸೈನ್ ಬಹಿರಂಗಪಡಿಸಿದ Tata Motors
ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಬಹುನೀರಿಕ್ಷಿತ ಪಂಚ್(Punch) ಮೈಕ್ರೊ ಕಾರು ಮಾದರಿಯು ಶೀಘ್ರದಲ್ಲೇ ಮಾರುಕಟ್ಟೆಗೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಕಂಪನಿಯು ಹೊಸ ಕಾರಿನ ಮೊದಲ ಸೈಡ್ ಪ್ರೊಫೈಲ್ ಬಹಿರಂಗಪಡಿಸಿದೆ.

ಹೊಸ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ Punch ಮೈಕ್ರೊ ಎಸ್‌ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯಾಗುವ ನೀರಿಕ್ಷೆಯಲ್ಲಿದೆ.

ಪಂಚ್ ಕಾರು ಮಾದರಿಯ ಬಿಡುಗಡೆಗೂ ಮುನ್ನ ಹೊಸ ಕಾರಿನ ಒಂದೊಂದೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಕಾರು ಮಾದರಿಗಳಲ್ಲೇ ಭಾರೀ ಬೇಡಿಕೆ ಪಡೆದುಕೊಳ್ಳುವ ಯೋಜನೆಯಲ್ಲಿದೆ.

ಹೊಸ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10ರಷ್ಟು ಪಾಲು ಹೊಂದುವ ವಿಶ್ವಾಸದಲ್ಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಪಂಚ್ ಮೈಕ್ರೊ ಕಾರು ಮಾದರಿಯು ಸಣ್ಣ ಗಾತ್ರದ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಉತ್ತಮ ಚಾಲನಾ ವೈಶಿಷ್ಟ್ಯತೆಯನ್ನು ಪಡೆದುಕೊಂಡಿದ್ದು, ಆನ್ ರೋಡ್ ಮತ್ತು ಆಫ್ ರೋಡ್ ಎರಡು ಮಾದರಿಯ ಚಾಲನೆಗೂ ಹೊಸ ಕಾರು ಉತ್ತಮವಾಗಿದೆ.

ಹೊಸ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್, ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

ಹಾಗೆಯೇ ಬೆಸ್ಟ್ ಗ್ರೌಂಡ್ ಕ್ಲಿಯೆರೆನ್ಸ್ ಮೂಲಕ ಆಫ್-ರೋಡ್ ಚಾಲನೆಯಲ್ಲೂ ಗಮನಸೆಳೆದಿರುವ ಪಂಚ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಕಾರ್ಯಕ್ಷಮತೆ ಹೊಂದಿದ್ದು, ಆಲ್‌ಟ್ರೊಜ್ ಕಾರು ಉತ್ಪಾದನೆಗಾಗಿ ಬಳಕೆ ಮಾಡಲಾಗುತ್ತಿರುವ ALFA-ARC ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿಯೇ ಹೊಸ ಕಾರು ಉತ್ಪಾದನೆಗೊಳ್ಳಲಿದೆ.

ಪಂಚ್ ಮಾದರಿಯನ್ನು ದೂರದಿಂದ ನೆಕ್ಸಾನ್ ಮಾದರಿಯಲ್ಲೇ ಹೊರನೋಟ ಹೊಂದಿದ್ದರೂ ಹೊಸ ಕಾರು ಗಾತ್ರವು ನೆಕ್ಸಾನ್ ಮಾದರಿಗಿಂತಲೂ ತುಸು ಚಿಕ್ಕದಾಗಿರಲಿದ್ದು, ಪ್ರಮುಖ ಫೀಚರ್ಸ್‌ಗಳನ್ನು ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯಿಂದ ಎರವಲು ಪಡೆದುಕೊಳ್ಳಲಾಗಿದೆ.

ಟಾಟಾ ಎಸ್‌ಯುವಿ ಸರಣಿಯಲ್ಲಿ ಹ್ಯಾರಿಯರ್ ಮತ್ತು ಸಫಾರಿ ಮಾದರಿಗಳಿಂದಲೂ ಕೆಲವು ವಿನ್ಯಾಸಗಳ ಪ್ರೇರಣೆ ಹೊಂದಿರುವ ಪಂಚ್ ಕಾರು ಸಣ್ಣ ಗಾತ್ರದ ಕಾರುಗಳಲ್ಲೇ ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದ್ದು, ಕಾನ್ಸೆಪ್ಟ್ ಮಾದರಿಯಲ್ಲಿನ ಬಹುತೇಕ ಸ್ಪೋರ್ಟಿ ವಿನ್ಯಾಸಗಳನ್ನು ಉತ್ಪಾದನಾ ಮಾದರಿಯಲ್ಲೂ ಉಳಿಸಿಕೊಳ್ಳಲಾಗಿದೆ.

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ವಾಹನಗಳ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

ಟಾಟಾ ಕಂಪನಿಯು ಸದ್ಯ ಪಂಚ್ ಕಾರಿನ ಉತ್ಪಾದನಾ ಮಾದರಿಯ ಹೊರಭಾಗದ ಚಿತ್ರವನ್ನು ಮಾತ್ರ ಹಂಚಿಕೊಂಡಿದ್ದು, ಶೀಘ್ರದಲ್ಲೇ ಹೊಸ ಕಾರಿನ ಇಂಟಿರಿಯರ್ ಜೊತೆಗೆ ಎಂಜಿನ್ ಆಯ್ಕೆಯ ಮಾಹಿತಿಯನ್ನು ಸಹ ಹಂಚಿಕೊಳ್ಳಲಿದೆ.

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು 1.2-ಲೀಟರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಗೆ ಈಗಾಗಲೇ ಅಧಿಕೃತ ಚಾಲನೆ ನೀಡಿರುವ ಟಾಟಾ ಕಂಪನಿಯು ಮುಂಬರುವ ಸೆಪ್ಟೆಂಬರ್ ಮಧ್ಯಂತರದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನುಅನಾವರಣಗೊಳಿಸಿ ಹೊಸ ಕಾರಿನ ಮಾಹಿತಿ ಹಂಚಿಕೊಳ್ಳುವ ಮೂಲಕ ಬುಕ್ಕಿಂಗ್ ಆರಂಭಿಸಲಿದೆ.

ಈ ಮೂಲಕ ಪಂಚ್ ಕಾರು ಮಾರುತಿ ಇಗ್ನಿಸ್, ಹ್ಯುಂಡೈ ಸ್ಯಾಂಟ್ರೊ ಜೊತೆಗೆ ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳ ಎಂಟ್ರಿ ಲೆವಲ್ ವೆರಿಯೆಂಟ್ ಪೈಪೋಟಿ ನೀಡುವ ನೀರಿಕ್ಷೆಯಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.


Click it and Unblock the Notifications