ಡೀಲರ್ಸ್ ಯಾರ್ಡ್ ತಲುಪಿದ Tata Punch- ಹೊಸ ಕಾರು ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ!
ಟಾಟಾ ಮೋಟಾರ್ಸ್(Tata Motors) ಕಂಪನಿಯು ಬಹುನೀರಿಕ್ಷಿತ ಪಂಚ್(Punch) ಕಾರನ್ನು ಅಕ್ಟೋಬರ್ ಮಧ್ಯಂತರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಹೊಸ ಕಾರನ್ನು ಟಾಟಾ ಕಂಪನಿಯು ಆಯ್ದ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡಲಾಗುತ್ತಿದೆ.

ಎಂಟ್ರಿ ಲೆವಲ್ ಕಾರುಗಳಲ್ಲೇ ವಿನೂತನ ಫೀಚರ್ಸ್ ಮತ್ತು ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರಿನ ಖರೀದಿಗೆ ಈಗಾಗಲೇ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಕೂಡಾ ಆರಂಭವಾಗಿದ್ದು, ಹೊಸ ಕಾರು ಖರೀದಿಗೆ ನೀರಿಕ್ಷೆಗೂ ಮೀರಿ ಬುಕ್ಕಿಂಗ್ ಹರಿದುಬರುತ್ತಿದೆ. ಹೊಸ ಕಾರುಗಳ ಮಾರಾಟಕ್ಕೆ ಪೂರಕವಾಗಿ ಟಾಟಾ ಕಂಪನಿಯು ಡೀಲರ್ಸ್‌ಗಳ ಸಂಖ್ಯೆಯನ್ನು ಸಹ ಕಳೆದ ವರ್ಷದಿಂದ ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿದ್ದು, ಹೊಸ ಕಾರು ಮಾದರಿಯೊಂದಿಗೆ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಎಂಟ್ರಿ ಲೆವೆಲ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಹೊಸ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಅತ್ಯುತ್ತಮವಾಗಿದ್ದು, ಹೊಸ ಕಾರಿನ ವಿವಿಧ ಬಣ್ಣಗಳ ಆಯ್ಕೆ ಕೂಡಾ ಆಕರ್ಷಕವಾಗಿದೆ.

ಹೊಸ ಕಾರಿನ ಬ್ಲ್ಯೂ ಬಣ್ಣದ ಆಯ್ಕೆ ಕಂಪನಿಯೇ ಈಗಾಗಲೇ ಬಹಿರಂಗಪಡಿಸಿದ್ದು, ಡೀಲರ್ಸ್ ಯಾರ್ಡ್‌ನಲ್ಲಿ ಸ್ಟಾಕ್ ಮಾಡಲಾಗುತ್ತಿರುವ ಮಾದರಿಯು ಆರೇಂಜ್ ಬಣ್ಣದ ಆಯ್ಕೆಯೊಂದಿಗೆ ಕಂಡುಬಂದಿರುವುದು ನೆಕ್ಸಾನ್ ಮಾದರಿಯಲ್ಲಿ ವಿವಿಧ ಬಣ್ಣಗಳ ಆಯ್ಕೆಯ ಸುಳಿವು ನೀಡಿದೆ.

ಪಂಚ್ ಕಾರಿನ ಬೆಸ್ಟ್ ಗ್ರೌಂಡ್ ಕ್ಲಿಯೆರೆನ್ಸ್ ಆಫ್-ರೋಡ್ ಚಾಲನೆಯಲ್ಲೂ ಗಮನಸೆಳೆಯಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಕಾರ್ಯಕ್ಷಮತೆಯೊಂದಿಗೆ ಎಂಟ್ರಿ ಲೆವಲ್ ಕಾರುಗಳ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರು ಖರೀದಿಗೆ ಇನ್ನು ಕೂಡಾ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸುವ ಮುನ್ನವೇ ಡೀಲರ್ಸ್ ಮಟ್ಟದಲ್ಲಿ ಆಸಕ್ತ ಗ್ರಾಹಕರು ಬುಕ್ಕಿಂಗ್ ಸಲ್ಲಿಕೆ ಮಾಡುತ್ತಿದ್ದು, ಹೊಸ ಕಾರು ಮಾದರಿಯನ್ನು ಆರಂಭದಲ್ಲೇ ಖರೀದಿಸಲು ಗ್ರಾಹಕರು ಮುಗಿಬಿದ್ದಿರುವುದು ಪಂಚ್ ಕಾರಿನ ಕ್ರೇಜ್ ಮತ್ತಷ್ಟು ಹೆಚ್ಚಳವಾಗುತ್ತಿದೆ.

ಹೊಸ ಕಾರುಗಳ ಮಾದರಿಗಳ ಮೂಲಕ ಮತ್ತಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಆವೃತ್ತಿಯ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಹೊಸ ಕಾರಿನ ಮೂಲಕ ಉತ್ತಮ ಮಾರುಕಟ್ಟೆ ಪಾಲು ತನ್ನದಾಗಿಸಿಕೊಳ್ಳಲು ಎದುರು ನೋಡುತ್ತಿದೆ.

ಹೊಸ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಹೊಸ ಕಾರಿನ ಕುರಿತು ಈಗಾಗಲೇ ಒಂದೊಂದೆ ಮಾಹಿತಿ ಹಂಚಿಕೊಳ್ಳುತ್ತಿರುವ ಕಂಪನಿಯು ಹೊಸ ಕಾರಿನ ಬಗೆಗೆ ಸಾಕಷ್ಟು ಕುತೂಹಲ ಹುಟ್ಟುಹಾಕುತ್ತಿದೆ.

ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್, ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.
Image Courtesy: Shivam Gamerz


Click it and Unblock the Notifications