Just In
Don't Miss!
- News
ಮತ್ತೊಮ್ಮೆ ಮಹಾ ಹಿಂಸಾಚಾರಕ್ಕೆ ಟ್ರಂಪ್ ಬೆಂಬಲಿಗರಿಂದ ಸ್ಕೆಚ್..?
- Movies
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- Sports
ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಸಿಡ್ನಿ, ದಿನ 4, Live ಸ್ಕೋರ್
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ರೂಪದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐಕಾನಿಕ್ ಟಾಟಾ ಸಫಾರಿ ಎಸ್‍ಯುವಿ
ಟಾಟಾ ಮೋಟಾರ್ಸ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ 7-ಸೀಟರ್ ಎಸ್‍ಯುವಿಯನ್ನು ಸಫಾರಿ ಹೆಸರಿನಲ್ಲಿ ಬಿಡುಗಡೆಗೊಳಿಸಲಿದೆ. ಟಾಟಾ ತನ್ನ ಈ ಹೊಸ ಸಫಾರಿ ಎಸ್‍ಯುವಿಗಾಗಿ ಬುಕ್ಕಿಂಗ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ.

ಇದೀಗ ಟಾಟಾ ಹೊಸ ಸಫಾರಿ ಎಸ್‍ಯುವಿಯ ಅಧಿಕೃತ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಟೀಸರ್ ಚಿತ್ರದಲ್ಲಿ ಆಕರ್ಷಕವಾಗಿದ್ದು, ಈ ಎಸ್‍ಯುವಿಯ ಹೊಸ ಫ್ರಂಟ್ ಗ್ರಿಲ್ ಹ್ಯಾರಿಯರ್ ಮಾದರಿಗಿಂತ ಭಿನ್ನವಾಗಿದೆ. ಆದರೆ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಒಂದೇ ರೀತಿಯಲ್ಲಿದೆ. ಈ ಹೊಸ ಟಾಟಾ ಸಫಾರಿ ಎಸ್‍ಯುವಿಯು ಇದೇ ತಿಂಗಳು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ಆರಂಭದಲ್ಲಿ 7-ಸೀಟರ್ ಎಸ್‍ಯುವಿಯನ್ನು ಗ್ರಾವಿಟಾಸ್ ಎಂದು ಕರೆಯಲಾಗುತ್ತಿತ್ತು, ಆದರೆ ಎಸ್‌ಯುವಿಗೆ ಅಧಿಕೃತವಾಗಿ ಸಫಾರಿ ಎಂದು ಹೆಸರಿಡಲಾಗಿದೆ. ಈ ಹೊಸ ಎಸ್‍ಯುವಿಯು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಆದರೆ ಈ ಹೊಸ ಎಸ್‍ಯುವಿಗೆ ಐಕಾನಿಕ್ ಆದ ಸಫಾರಿ ಹೆಸರನ್ನು ನೀಡವ ಮೂಲಕ ಕುತೂಹಲವನ್ನು ಮೂಡಿಸಿದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಕಂಪನಿಯ ಪ್ರಕಾರ, ಭಾರತದಲ್ಲಿ ಟಾಟಾ ಸಫಾರಿ ಲೈಫ್ ಸ್ಟೈಲ್ ಎಸ್‍ಯುವಿಯಾಗಿರಲಿದೆ ಮತ್ತು ಈ ವಿಭಾಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಬಹುದು. ಸಫಾರಿ ಭಾರತದಲ್ಲಿ ಎರಡು ದಶಕಗಳವರೆಗೆ ಮಾರಾಟವಾದ ಎಸ್‍ಯುವಿಯಾಗಿದೆ.

ಇದೀಗ ಹೊಸ ರೂಪಾತಾಳಿ ಮತ್ತೆ ಈ ಐಕಾನಿಕ್ ಸಫಾರಿ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಗ್ರಾಹಕರ ಗಮನಸೆಳೆಯಲು ಸಫಾರಿ ಎಸ್‍ಯುವಿಯ ಟ್ಯಾಗ್ ಲೈನ್ ‘ರಿಕ್ಲೈಮ್ ದೇರ್ ಲೈಫ್' ತರಲು ಕಂಪನಿಯು ಸಜ್ಜಾಗಿದೆ. ಹೊಸ ಸಫಾರಿ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಹೊಂದಿರುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಲ್ಯಾಂಡ್ ರೋವರ್‌ನಿಂದ ಹೆಸರಾಂತ ಡಿ8 ಪ್ಲಾಟ್‌ಫಾರ್ಮ್‌ನಿಂದ ಪಡೆದ ಒಮೆಗಾರ್ಕ್ ಪ್ಲಾಟ್‌ಫಾರ್ಮ್ ಜೊತೆಗೆ ಎಸ್‌ಯುವಿ ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿರುತ್ತದೆ.

ಟಾಟಾ ಸಫಾರಿ 2.0-ಲೀಟರ್, ನಾಲ್ಕು ಸಿಲಿಂಡರ್, ‘ಕ್ರಯೋಟೆಕ್' ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 168 ಬಿಹೆಚ್‌ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಹೊಸ ಸಫಾರಿ ಎಸ್‍ಯುವಿಗಾಗಿ ಇದೇ ತಿಂಗಳಲ್ಲಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಿದೆ ಎಂದು ಟಾಟಾ ಖಚಿತಪಡಿಸಿದೆ. ಈ ಹೊಸ ಸಫಾರಿ ಎಸ್‍ಯುವಿಯಲ್ಲಿ ಫ್ಹೂರ್ ವ್ಹೀಲ್ ಡ್ರೈವ್ ಕಾನ್ಫಿಗರೇಷನ್ ಅನ್ನು ಒಳಗೊಂಡಿರಬಹುದು ಎಂದು ನಿರೀಕ್ಷಿಸುತ್ತೆದೆ. ಈ ಎಸ್‍ಯುವಿಯು ಉತ್ತಮ ಆಫ್-ರೋಡ್ ಸಾಮರ್ಧ್ಯವನ್ನು ಹೊಂದಿದ್ದರೆ ಹೆಚ್ಚಿನ ಗ್ರಾಹಕರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಈ ಹೊಸ ಟಾಟಾ ಸಫಾರಿ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಪಾರುಪತ್ಯ ಸಾಧಿಸಲು ಸಜಾಗುತ್ತಿದೆ. ಈಗಗಾಲೇ ಟಾಟಾ ಕಂಪನಿಯು ಹೊಸ ಎಸ್‍ಯುವಿಯನ್ನು ಸಫಾರಿ ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಲಿದೆ ಎಂದು ಘೋಷಿಸಿದಾಗಲೇ ಸಾಕಷ್ಟು ಕುತೂಹಲ ಮತ್ತು ಸಂಚಲನವನ್ನು ಸೃಷ್ಟಿಸಿದೆ.